Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 6:42 - ಕನ್ನಡ ಸತ್ಯವೇದವು C.L. Bible (BSI)

42 ದೇವರಾದ ಸರ್ವೇಶ್ವರಾ, ನಿಮ್ಮಿಂದ ಅಭಿಷೇಕ ಆದವನನ್ನು ತಳ್ಳಿಬಿಡಬೇಡಿ. ನಿಮ್ಮ ದಾಸ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೊಳ್ಳಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ.” ಎಂದು ವಿಜ್ಞಾಪನೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ದೇವರಾದ ಯೆಹೋವನೇ, ನಿನ್ನಿಂದ ಅಭಿಷಿಕ್ತನಾದವನನ್ನು ತಳ್ಳಿಬಿಡಬೇಡ; ನಿನ್ನ ಸೇವಕನಾದ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ದೇವರಾದ ಯೆಹೋವನೇ, ನಿನ್ನಿಂದ ಅಭಿಷೇಕಿಸಲ್ಪಟ್ಟಿರುವ ಅರಸನನ್ನು ತಳ್ಳಿಬಿಡಬೇಡ. ನಿನಗೆ ನಂಬಿಗಸ್ತನಾದ ಸೇವಕನಾಗಿದ್ದ ದಾವೀದನನ್ನು ನೆನಪುಮಾಡಿಕೊ” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಯೆಹೋವ ದೇವರೇ, ನಿಮ್ಮ ಅಭಿಷಿಕ್ತನನ್ನು ತಿರಸ್ಕರಿಸಬೇಡಿರಿ. ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನಮಾಡಿದ ಮಹಾ ಪ್ರೀತಿಯನ್ನು ನೆನಪುಮಾಡಿಕೊಳ್ಳಿರಿ,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 6:42
11 ತಿಳಿವುಗಳ ಹೋಲಿಕೆ  

ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ನೆನಸಿಕೋ ಹೇ ಪ್ರಭೂ, ದಾವೀದನನು I ಆತ ಸಹಿಸಿದ ಕಷ್ಟದುಃಖಗಳನು II


“ಯೇಸುವನ್ನು ಸಮಾಧಿಯಲ್ಲೇ ಕೊಳೆತುಹೋಗಲು ಬಿಡದೆ ಮರಣದಿಂದ ಪುನರುತ್ಥಾನಗೊಳಿಸಿದ ದೇವರು ಹೀಗೆಂದಿದ್ದಾರೆ: ‘ನಾನು ದಾವೀದನಿಗೆ ವಾಗ್ದಾನಮಾಡಿದ ಪವಿತ್ರ ಹಾಗೂ ನಿಶ್ಚಿತ ವರಗಳನ್ನು ನಿಮಗೆ ಕೊಡುತ್ತೇನೆ.’


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ನಿನ್ನ ದಾಸ ದಾವೀದನ ಪ್ರಯುಕ್ತ I ತಳ್ಳಲ್ಪಡದಿರಲಿ ನಿನ್ನಾ ಅಭಿಷಿಕ್ತ II


ಇರುವುದು ಎನ್ನಚಲ ಪ್ರೀತಿ ಅವನ ಮೇಲೆ ಶಾಶ್ವತವಾಗಿ I ಅವನೊಡನೆ ನಾ ಮಾಡಿದೊಪ್ಪಂದ ಸ್ಥಿರಸ್ಥಾಯಿಯಾಗಿ II


ನಿನ್ನ ಪ್ರೀತಿಸತ್ಯತೆಗಳು ಇರುವುವು ಅವನೊಂದಿಗೆ I ನನ್ನ ನಾಮ ಪ್ರಯುಕ್ತ ಕೋಡು ಮೂಡುವುದವನಿಗೆ II


ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II


ಅದಿರಲಿ, ನನ್ನದೊಂದು ಬಿನ್ನಹವಿದೆ; ಅದನ್ನು ತಿರಸ್ಕರಿಸಬೇಡಿ,” ಎಂದನು. ಅದಕ್ಕೆ ಬತ್ಷೆಬೆ, “ಅದೇನು ಹೇಳು,” ಎಂದಳು.


ಅಲ್ಲಿ ಯಾಜಕ ಚಾದೋಕನು ಹಾಗು ಪ್ರವಾದಿ ನಾತಾನನು ಅವನನ್ನು ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರು ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಲಿ.


ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು