Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:10 - ಕನ್ನಡ ಸತ್ಯವೇದವು C.L. Bible (BSI)

10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನ ಅರಸನು ಜನರಿಗೆ ಅಪ್ಪಣೆಕೊಟ್ಟನು; ಅವರು ದಾವೀದ - ಸೊಲೊಮೋನರಿಗೂ ಪ್ರಜೆಗಳಾದ ಇಸ್ರಯೇಲರಿಗೂ ಸರ್ವೇಶ್ವರ ಮಾಡಿದ ಉಪಕಾರಗಳನ್ನು ನೆನಸಿಕೊಂಡು, ಆನಂದಭರಿತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಏಳನೆಯ ತಿಂಗಳಿನ ಇಪ್ಪತ್ತ ಮೂರನೆಯ ದಿನದಲ್ಲಿ, ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ, ಸೊಲೊಮೋನರಿಗೂ, ಆತನ ಪ್ರಜೆಗಳಾದ ಇಸ್ರಾಯೇಲರಿಗೂ ಉಂಟಾದ ಉಪಕಾರಗಳನ್ನು ನೆನಪುಮಾಡಿಕೊಂಡು ಆನಂದಭರಿತರಾಗಿ, ಸಂತೋಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಲ್ಲಿ ಅರಸನು ಜನರಿಗೆ ಅಪ್ಪಣೆಕೊಡಲು ಅವರು ಯೆಹೋವನಿಂದ ದಾವೀದ ಸೊಲೊಮೋನರಿಗೂ ಆತನ ಪ್ರಜೆಗಳಾದ ಇಸ್ರಾಯೇಲ್ಯರಿಗೂ ಉಂಟಾದ ಉಪಕಾರಗಳನ್ನು ನೆನಸಿಕೊಂಡು ಆನಂದಭರಿತರಾಗಿ ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನದಂದು ಸೊಲೊಮೋನನು ನೆರೆದು ಬಂದಿದ್ದ ಜನರನ್ನು ಅವರ ಮನೆಗಳಿಗೆ ಕಳುಹಿಸಿದನು. ದೇವರಾದ ಯೆಹೋವನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಮತ್ತು ಎಲ್ಲಾ ಇಸ್ರೇಲರಿಗೂ ಕರುಣೆಯನ್ನು ತೋರಿಸಿದ್ದಕ್ಕಾಗಿ ಜನರೆಲ್ಲರೂ ಹರ್ಷಿಸುತ್ತಾ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿವಸದಲ್ಲಿ ಅವನು ಜನರಿಗೆ ಅವರವರ ಡೇರೆಗಳಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಯೆಹೋವ ದೇವರು ದಾವೀದನಿಗೂ, ಸೊಲೊಮೋನನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:10
22 ತಿಳಿವುಗಳ ಹೋಲಿಕೆ  

ಎಂಟನೆಯ ದಿವಸ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಯಿತು. ಅವರು ಅರಸನನ್ನು ವಂದಿಸಿ, ಸರ್ವೇಶ್ವರ ತಮ್ಮ ದಾಸ ದಾವೀದನಿಗೂ ತಮ್ಮ ಪ್ರಜೆಗಳಾದ ಇಸ್ರಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ಸ್ಮರಿಸಿ, ಆನಂದಚಿತ್ತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.


ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.


ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.


ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.


ನೀನಾರಿಸಿಕೊಂಡಿರುವ ಪ್ರಗತಿಯನು ನಾ ಕಾಣಮಾಡು I ನಿನ್ನ ಜನಾಂಗದವರ ಸಂತಸವನು ನಾ ಸವಿಯಮಾಡು I ನಿನ್ನ ಸ್ವಕೀಯರ ಮಹಿಮೆಯಲ್ಲೆನಗೆ ಪಾಲನ್ನು ನೀಡು II


ಹೆಮ್ಮೆಪಡಿ, ನೆನೆದಾತನ ಶ್ರೀನಾಮ I ಹಿಗ್ಗಲಿ ಹೃದಯ, ಕೋರಿ ಆತನ ದರ್ಶನ II


ಅತಿ ಸಂತೋಷದಿಂದ ಸೇವೆ ಮಾಡಿ ಆತನಿಗೆ I ಹಾಡುತ, ಪಾಡುತ, ಬನ್ನಿ ಆತನ ಸನ್ನಿಧಿಗೆ II


ನಿನ್ನ ಕಾರ್ಯಗಳಿಂದ ಪ್ರಭು, ನನ್ನನ್ನು ಆನಂದಗೊಳಿಸಿರುವೆ I ನಿನ್ನಾ ಕಾರ್ಯಗಳ ನೋಡಿ, ನಾನು ಉಲ್ಲಾಸದಿಂದ ಹಾಡುವೆ II


ಸಜ್ಜನರೇ ಸಂತೋಷಿಸಿರಿ, ಉಲ್ಲಾಸಿಸಿರಿ ಪ್ರಭುವಿನಲಿ I ಯಥಾರ್ಥಚಿತ್ತರೇ, ಜಯಕಾರಮಾಡಿ ಆತನ ವಿಷಯದಲಿ II


ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.


ದಾವೀದನ ಮಗನೂ ಇಸ್ರಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಜೆರುಸಲೇಮಿನಲ್ಲಿ ಅಂಥ ಉತ್ಸವ ನಡೆದಿರಲಿಲ್ಲ. ಆದುದರಿಂದ ಜೆರುಸಲೇಮಿನಲ್ಲಿ ಹೇಳತೀರದ ಆನಂದವಿತ್ತು.


ಹೀಗೆ ಸರ್ವೇಶ್ವರನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ಯಾರೂ ಗಮನಿಸುವುದಕ್ಕೆ ಮುಂಚೆಯೇ, ದೇವರು ತಾವೇ ತಮ್ಮ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲ ಜನರೂ ಸಂತೋಷಪಟ್ಟರು.


ದೇವರಾದ ಸರ್ವೇಶ್ವರಾ, ಎದ್ದು ಬನ್ನಿ, ನಿಮ್ಮ ತೇಜೋಮಯ ಮಂಜೂಷದೊಡನೆ ನಿಮ್ಮ ವಾಸಸ್ಥಾನದೊಳಗೆ ಸೇರಿಕೊಳ್ಳಿ. ದೇವರಾದ ಸರ್ವೇಶ್ವರಾ, ನಿಮ್ಮ ಯಾಜಕರು ರಕ್ಷಣೆಯೆಂಬ ಕವಚವನ್ನು ಹೊದ್ದುಕೊಳ್ಳಲಿ, ನಿಮ್ಮ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ.


ಅದರಲ್ಲಿ ನೀವೂ ನಿಮ್ಮ ಗಂಡುಹೆಣ್ಣು ಮಕ್ಕಳೂ ಗಂಡುಹೆಣ್ಣು ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ಹಾಗು ವಿಧವೆಯರೂ ಸಂಭ್ರಮದಿಂದಿರಬೇಕು.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ, ಅವರ ಸನ್ನಿಧಿಯಲ್ಲೇ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷದಿಂದಿರಬೇಕು; ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಆಳುಗಳು ಹಾಗು ನಿಮ್ಮ ಊರಲ್ಲಿರುವ ಲೇವಿಯರು ಇಂಥವುಗಳನ್ನು ಊಟಮಾಡಬೇಕು.


ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಅಲ್ಲಿಯೇ ಅವರ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಇತ್ರೋ, ಮೋಶೆಯ ಮಾವ ಹಾಗೂ ಮಿದ್ಯಾನರ ಪೂಜಾರಿ. ದೇವರು ಮೋಶೆಗೂ ತಮ್ಮ ಜನರಾದ ಇಸ್ರಯೇಲರಿಗೂ ಮಾಡಿದ ಮಹಾತ್ಕಾರ್ಯಗಳನ್ನು ಕುರಿತು ಇವನು ಕೇಳಿದ್ದನು. ಸರ್ವೇಶ್ವರ ಸ್ವಾಮಿ ಹೇಗೆ ಇಸ್ರಯೇಲರನ್ನು ಈಜಿಪ್ಟಿನಿಂದ ಕರೆದುತಂದರೆಂಬ ವಿಷಯ ಇವನಿಗೆ ಮುಟ್ಟಿತ್ತು.


ತರುವಾಯ ಎಂಟನೆಯ ದಿನದಲ್ಲಿ ಸಭೆಸೇರಿದರು. ಹೀಗೆ ಏಳು ದಿವಸ ಬಲಿಪೀಠ ಪ್ರತಿಷ್ಠೆಯನ್ನೂ ಇನ್ನು ಏಳು ದಿವಸ ಜಾತ್ರೆಯನ್ನೂ ನಡೆಸಿದರು.


ಸೊಲೊಮೋನನು ಸರ್ವೇಶ್ವರನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಮನಸ್ಸಿನಲ್ಲಿ ಇದ್ದ ಯೋಜನೆಯನ್ನು ಈಡೇರಿಸಿದನು.


“ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕಬಲಿಪ್ರಾಣಿ, ದಹನಬಲಿಪ್ರಾಣಿ, ಧಾನ್ಯನೈವೇದ್ಯ, ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು