Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 7:3 - ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರೆಲ್ಲರೂ ಬೆಂಕಿ ಇಳಿದುಬರುವದನ್ನೂ ಯೆಹೋವನ ತೇಜಸ್ಸು ಆಲಯದಲ್ಲಿರುವದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿ - ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿದೆ ಎಂದು ಕೃತಜ್ಞತಾಸ್ತುತಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸೇರಿಬಂದ ಇಸ್ರೇಲ್ ಜನರೆಲ್ಲಾ ಆಕಾಶದಿಂದ ಬೆಂಕಿ ಬೀಳುವದನ್ನೂ ದೇವಾಲಯದಲ್ಲಿ ಯೆಹೋವನ ಮಹಿಮೆ ತುಂಬಿದ್ದನ್ನೂ ನೋಡಿ ನೆಲದ ಮೇಲೆ ಬೋರಲಬಿದ್ದು “ಯೆಹೋವನು ಒಳ್ಳೆಯವನು, ಅವನ ಕರುಣೆಯು ನಿರಂತರಕ್ಕೂ ಇರುವಂಥದ್ದು” ಎಂದು ಹೇಳುತ್ತಾ ದೇವರನ್ನು ಸುತ್ತಿಸಿ ಕೊಂಡಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 7:3
26 ತಿಳಿವುಗಳ ಹೋಲಿಕೆ  

ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.


ಆಮೇಲೆ ಜನರ ಸಮ್ಮತಿಯಿಂದ ಸರ್ವೇಶ್ವರನಿಗಾಗಿ ಗಾಯನಮಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡನು. ಅವರಿಗೆ, “ಪರಿಶುದ್ಧತ್ವವೆಂಬ ಭೂಷಣದೊಡನೆ ಯೋಧರ ಮುಂದೆ ಹೋಗುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಮಾಡಿರಿ, ಅವರ ಅಚಲಪ್ರೀತಿ ಶಾಶ್ವತ’ ಎಂದು ಭಜಿಸಿರಿ,” ಎಂಬುದಾಗಿ ಆಜ್ಞಾಪಿಸಿದನು.


ಆತನಲ್ಲಿ ಭಯಭಕ್ತಿಯುಳ್ಳವರಿಗೆ I ಆತನ ಪ್ರೀತಿ ತಲತಲಾಂತರದವರೆಗೆ II


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ಪರಸ್ಪರವಾಗಿ ಹಾಡುತ್ತಾ ಸರ್ವೇಶ್ವರನನ್ನು ಕೀರ್ತಿಸಿದರು. “ಸರ್ವೇಶ್ವರ ಒಳ್ಳೆಯವರು! ಅವರ ಅಚಲಪ್ರೀತಿ ಇಸ್ರಯೇಲರ ಮೇಲೆ ಶಾಶ್ವತ!” ಎಂದು ಕೃತಜ್ಞತಾಸ್ತುತಿ ಮಾಡಿದರು. ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.


ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II


ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ಅಲ್ಲಿ ಅವರೊಂದಿಗೆ ಸರ್ವೇಶ್ವರನ ನಿತ್ಯಪ್ರೀತಿಗಾಗಿ ಅವರನ್ನು ಸ್ತುತಿಸಿ, ಸಂಗೀತ ಹಾಡಲು ಹೇಮಾನ್, ಯೆದುತೂನ ಹಾಗು ಇನ್ನಿತರರು ನಿರ್ದಿಷ್ಟವಾಗಿ ನೇಮಕರಾಗಿದ್ದರು.


ಜನರೆಲ್ಲರೂ ಅದನ್ನು ಕಂಡು ಬೋರಲಬಿದ್ದರು; “ಸರ್ವೇಶ್ವರನೇ ದೇವರು, ಸರ್ವೇಶ್ವರನೇ ದೇವರು,” ಎಂದು ಕೂಗಿದರು.


ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.


ಆಗ ಮೋಶೆ ಮತ್ತು ಆರೋನರು ಇಸ್ರಯೇಲರ ಸರ್ವಸಮೂಹದ ಮುಂದೆ ಅಡ್ಡಬಿದ್ದರು.


ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.


ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II


ಹೌದು, ಪ್ರಭುವೆನಿತೋ ಒಳ್ಳೆಯವನು I ಇರುವುದಾತನ ಪ್ರೀತಿ ಯುಗಯುಗಕು I ಆತನ ಸತ್ಯತೆ ತಲತಲಾಂತರಕು II


ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II


ಕೃತಜ್ಞತೆಯಿಂದ ಸಲ್ಲಿಸಿರಿ ಪ್ರಭುವಿಗೆ ಸ್ತುತಿಯನು I ಆತನ ಪ್ರೀತಿ ಶಾಶ್ವತ, ಆತನು ಒಳ್ಳೆಯವನು II


ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II


ಆಗ ಯೆಹೋಷಾಫಾಟನು ನೆಲದ ಮಟ್ಟಿಗೂ ತಲೆಬಾಗಿದನು. ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಸರ್ವೇಶ್ವರನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.


ದಹನಬಲಿ ಸಮರ್ಪಣೆಯು ಮುಗಿಯುವವರೆಗೆ ಸಭೆಸೇರಿದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಾ ಇದ್ದರು; ಗಾಯಕರು ಗಾನ ಮಾಡುತ್ತಾ ಇದ್ದರು; ತುತೂರಿ ಊದುವವರು ಊದುತ್ತಾ ಇದ್ದರು.


ದಹನಬಲಿ ಸಮರ್ಪಣೆ ತೀರಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.


ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು