2 ಪೂರ್ವಕಾಲ ವೃತ್ತಾಂತ 7:5 - ಕನ್ನಡ ಸತ್ಯವೇದವು C.L. Bible (BSI)5 ಅರಸ ಸೊಲೊಮೋನನು ಬಲಿಯಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ದೇವಾಲಯವನ್ನು ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ಇಪ್ಪತ್ತೆರಡು ಸಾವಿರ ಹೋರಿಗಳನ್ನು, ಲಕ್ಷದ ಇಪ್ಪತ್ತು ಸಾವಿರ ಕುರಿಗಳನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸಿದನು. ಈ ಪ್ರಕಾರ ಅರಸನು ಮತ್ತು ಎಲ್ಲಾ ಇಸ್ರಾಯೇಲರು ಯೆಹೋವನ ದೇವಾಲಯವನ್ನು ಪ್ರತಿಷ್ಠೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ದೇವಾಲಯವನ್ನು ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಸೊಲೊಮೋನ ಅರಸನು ಇಪ್ಪತ್ತೆರಡು ಸಾವಿರ ಹೋರಿಗಳನ್ನೂ ಒಂದು ಲಕ್ಷ ಇಪ್ಪತ್ತು ಸಾವಿರ ಕುರಿಗಳನ್ನೂ ಯಜ್ಞವಾಗಿ ಸಮರ್ಪಿಸಿದನು. ಅರಸನೂ ಎಲ್ಲಾ ಜನರೂ ದೇವಾಲಯವನ್ನು ಆರಾಧನೆಗಾಗಿ ಪ್ರತಿಷ್ಠಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅರಸನಾದ ಸೊಲೊಮೋನನು 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಬಲಿಯಾಗಿ ಅರ್ಪಿಸಿದನು. ಹೀಗೆಯೇ ಅರಸನೂ, ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು. ಅಧ್ಯಾಯವನ್ನು ನೋಡಿ |
ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.
ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಸರ್ವೇಶ್ವರನ ಗಾಯನಸೇವೆಗಾಗಿ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿ ಇದ್ದವು. ಇವರು ರಾಜಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡೆಸುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಯನ್ನು ಸಮರ್ಪಿಸಿರಿ; ಅವರ ಅಚಲಪ್ರೀತಿ ಶಾಶ್ವತ” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಯೇಲರೆಲ್ಲರೂ ನಿಂತಿದ್ದರು.