Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:15 - ಕನ್ನಡ ಸತ್ಯವೇದವು C.L. Bible (BSI)

15 ಅವನು ಯಾಜಕರನ್ನೂ ಲೇವಿಯರನ್ನೂ ಅರಮನೆಯ ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಕಿಂಚಿತ್ತಾದರೂ ಮೀರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ರಾಜನು ಯಾಜಕರನ್ನೂ, ಲೇವಿಯರನ್ನೂ, ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಯಾಜಕರನ್ನೂ ಲೇವಿಯರನ್ನೂ ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಸ್ವಲ್ಪವಾದರೂ ಮೀರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸೊಲೊಮೋನನು ಯಾಜಕರಿಗಾಗಲಿ ಲೇವಿಯರಿಗಾಗಲಿ ಕೊಟ್ಟ ಆಜ್ಞೆಗಳನ್ನು ಯಾರೂ ಬದಲಿಸಲಿಲ್ಲ; ಅವುಗಳಿಗೆ ಯಾರೂ ಅವಿಧೇಯರಾಗಲಿಲ್ಲ; ಬೆಲೆಬಾಳುವ ವಸ್ತುಗಳ ಸಂಗ್ರಹಣ ಕಾರ್ಯದಲ್ಲೂ ಅವರು ಜಾಗರೂಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವರು ಯಾವ ಕಾರ್ಯದಲ್ಲಾದರೂ, ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ಮೀರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:15
7 ತಿಳಿವುಗಳ ಹೋಲಿಕೆ  

ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಇತರರು ಬೇರೆ ಪವಿತ್ರ ಸಲಕರಣೆಗಳಾದ ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ ಹಾಗೂ ಪರಿಮಳ ದ್ರವ್ಯಗಳ ಸರಬರಾಜು ಮಾಡುವ ಜವಾಬ್ದಾರಿಕೆ ಹೊಂದಿದ್ದರು.


ಸೊಲೊಮೋನನು ಸರ್ವೇಶ್ವರನ ಆಲಯಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಸಿದ್ಧಮಾಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಪ್ಟತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಾಮಗ್ರಿಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.


ಈ ಪ್ರಕಾರ ಅಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸವೂ ಮುಗಿದು ಸರ್ವೇಶ್ವರನ ಆಲಯ ಸಿದ್ಧವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು