Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 8:5 - ಕನ್ನಡ ಸತ್ಯವೇದವು C.L. Bible (BSI)

5 ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಊರುಗಳಿಗೆ ಪೌಳಿಗೋಡೆ, ಕದ, ಅಗುಳಿ ಇವುಗಳನ್ನು ಏರ್ಪಡಿಸಿ ಕೋಟೆಗಳನ್ನಾಗಿ ಮಾರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಪಟ್ಟಣಗಳಿಗೆ ಪೌಳಿಗೋಡೆ, ಬಾಗಿಲು, ಅಗುಳಿ ಇವುಗಳನ್ನು ಸಿದ್ಧಪಡಿಸಿ ಕೋಟೆಗಳನ್ನಾಗಿ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಊರುಗಳನ್ನು ಪೌಳಿಗೋಡೆ ಕದ ಅಗುಳಿ ಇವುಗಳನ್ನು ಏರ್ಪಡಿಸಿ ಕೋಟೆಗಳನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮೇಲಿನ ಬೇತ್ಹೋರೋನ್ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ನಗರಗಳನ್ನು ಸೊಲೊಮೋನನು ಬಲವಾದ ಕೋಟೆಯ ನಗರಗಳನ್ನಾಗಿ ಮತ್ತೆ ಕಟ್ಟಿದನು. ಆ ನಗರಗಳನ್ನು ಕೋಟೆ, ಕದ ಮತ್ತು ಹೆಬ್ಬಾಗಿಲುಗಳಿಂದ ಬಲಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇವುಗಳಲ್ಲದೆ, ಮೇಲಿನ ಬೇತ್ ಹೋರೋನ್ ಮತ್ತು ಕೆಳಗಿನ ಬೇತ್ ಹೋರೋನ್ ಪಟ್ಟಣಗಳನ್ನು ಪುನಃ ನಿರ್ಮಿಸಿದನು. ಈ ಪಟ್ಟಣಗಳು ಬಲವಾದ ಗೋಡೆಗಳು, ಬಾಗಿಲುಗಳು ಮತ್ತು ಅಗುಳಿಗಳು ಉಳ್ಳ ಕೋಟೆ ಪಟ್ಟಣಗಳಾಗಿ ಸೊಲೊಮೋನನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 8:5
7 ತಿಳಿವುಗಳ ಹೋಲಿಕೆ  

ಎಫ್ರಯಿಮನಿಗೆ ಶೇರ ಎಂಬ ಮಗಳು ಇದ್ದಳು. ಈಕೆ ಮೇಲಿನ ಹಾಗು ಕೆಳಗಿನ ಬೇತ್ ಹೋರೋನ್ ಪಟ್ಟಣಗಳನ್ನೂ ಉಜ್ಜೇನ್ ಶೇರ ಎಂಬ ಪಟ್ಟಣವನ್ನೂ ಕಟ್ಟಿಸಿದಳು.


ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಸರ್ವೇಶ್ವರನನ್ನು ಆಶ್ರಯಿಸಿಕೊಂಡ ಕಾರಣ, ಅವರ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ, ನಾಡು ಈವರೆಗೆ ನಿರಾತಂಕವಾಗಿದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ ಅವುಗಳನ್ನು ಸುತ್ತಣ ಗೋಡೆ, ಬುರುಜು, ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ,” ಎಂದನು. ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.


ಎಫ್ರಯಿಮ್ ಗೋತ್ರಗಳ ನಾಡಿನ ದಕ್ಷಿಣ ದಿಕ್ಕಿನ ಎಲ್ಲೆ ಆಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ತೊಡಗಿ ಮೇಲಿನ ಬೇತ್ ಹೋರೋನಿನ ಮೇಲೆ ಸಮುದ್ರ ತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ. ಅದರ ಉತ್ತರ ದಿಕ್ಕಿನ ಎಲ್ಲೆ ಮಿಕ್ಮೆತಾತ್ ಎಂಬಲ್ಲಿ ತೊಡಗಿ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ.


ಅಲ್ಲಿಂದ ಇಳಿದು ದಶ್ಚಿಮ ದಿಕ್ಕಿನಲ್ಲಿರುವ ಯಫ್ಲೇಟ್ಯರ ಪ್ರಾಂತ್ಯವನ್ನು ಮುಟ್ಟಿ ಕೆಳಗಿನ ಬೇತ್ ಹೋರೋನಿನ ಮೇಲೆ ಗೆಜೆರಿಗೆ ಹೋಗಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.


ಗೆಜೆರ್ ಪಟ್ಟಣವನ್ನು ಬಿಟ್ಟು ಕೆಳಗಿನ ಬೇತ್-ಹೋರೋನ್,


ಮರುಭೂಮಿಯಲ್ಲಿದ್ದ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಸುಭದ್ರಪಡಿಸಿದನು.


ಬಾಲಾ ತೂರು, ತನ್ನ ಎಲ್ಲ ಉಗ್ರಾಣದ ಪಟ್ಟಣಗಳು, ಯುದ್ಧರಥಗಳನ್ನಿರಿಸುವ ಪಟ್ಟಣ, ರಾಹುತರ ಪಟ್ಟಣ ಇವುಗಳನ್ನೂ ಕಟ್ಟಿಸಿದನು. ಜೆರುಸಲೇಮಿನಲ್ಲೂ ಲೆಬನೋನಿನಲ್ಲೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲೂ ತನಗೆ ಇಷ್ಟವಾದುವುಗಳನ್ನೆಲ್ಲಾ ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು