Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:10 - ಕನ್ನಡ ಸತ್ಯವೇದವು C.L. Bible (BSI)

10 ಹೂರಾಮನ ಮತ್ತು ಸೊಲೊಮೋನನ ಆಳುಗಳು ಓಫೀರ್‍ದೇಶದ ಬಂಗಾರವನ್ನಲ್ಲದೆ ಸುಗಂಧದ ಮರವನ್ನೂ ರತ್ನಗಳನ್ನೂ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೂರಾಮನ ಮತ್ತು ಸೊಲೊಮೋನನ ಆಳುಗಳು ಓಫೀರ್ ದೇಶದ ಬಂಗಾರವನ್ನಲ್ಲದೆ ಸುಗಂಧದ ಮರಗಳ ಅಮೂಲ್ಯರತ್ನಗಳನ್ನೂ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೂರಾಮನ ಮತ್ತು ಸೊಲೊಮೋನನ ಆಳುಗಳು ಓಫೀರ್ದೇಶದ ಬಂಗಾರವನ್ನಲ್ಲದೆ ಸುಗಂಧದ ಮರವನ್ನೂ ರತ್ನಗಳನ್ನೂ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹೂರಾಮನ ಮತ್ತು ಸೊಲೊಮೋನನ ಸೇವಕರು ಓಫೀರಿನಿಂದ ಬಂಗಾರವನ್ನು ತಂದರು; ಅಲ್ಲದೆ ಸುಗಂಧದ ಮರಗಳನ್ನೂ ವಜ್ರವೈಢೂರ್ಯಗಳನ್ನೂ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀರಾಮನ ಸೇವಕರೂ, ಸೊಲೊಮೋನನ ಸೇವಕರೂ ಓಫೀರಿನಿಂದ ಬಂಗಾರವನ್ನೂ, ಸುಗಂಧದ ಮರಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:10
8 ತಿಳಿವುಗಳ ಹೋಲಿಕೆ  

ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನೂ ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸ ಸೊಲೊಮೋನನಿಗೆ 15,000 ಕಿಲೋಗ್ರಾಂಗಿಂತ ಹೆಚ್ಚು ಬಂಗಾರವನ್ನೂ ತಂದುಕೊಟ್ಟರು.


ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರ ಮಾತ್ರವಲ್ಲ ಸುಗಂಧದ ಮರವನ್ನೂ ರತ್ನಗಳನ್ನೂ ರಾಶಿರಾಶಿಯಾಗಿ ತಂದವು.


ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷಿಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಅಂತೆಯೇ ಲೆಬನೋನಿನಿಂದ ದೇವದಾರು ಮರವನ್ನೂ ತುರಾಯಿಮರವನ್ನೂ ಸುಗಂಧದ ಮರವನ್ನೂ ನನಗೆ ಕಳುಹಿಸಬೇಕು. ನಿನ್ನ ಆಳುಗಳು ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ಜಾಣರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಕೆಲಸಮಾಡುವರು.


ಆಕೆ ಅರಸನಿಗೆ 4000 ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನೂ ಅಪರಿಮಿತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದದ್ದು ಯಾವುದೂ ಇರಲಿಲ್ಲ.


ಅರಸನು ಸುಗಂಧದ ಮರದಿಂದ ದೇವಾಲಯ ಹಾಗೂ ಅರಮನೆಗಳಿಗೆ ಸೋಪಾನಗಳನ್ನೂ ಗಾಯಕರಿಗಾಗಿ ಕಿನ್ನರಿಗಳನ್ನೂ ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ ಸುಗಂಧದ ಮರವನ್ನು ಹಿಂದೆಂದೂ ಜುದೇಯ ನಾಡಿನಲ್ಲಿ ಕಂಡಿರಲಿಲ್ಲ.


ವ್ಯಾಪಾರದ ಹಡಗುಗಳಂತೆ ದೂರದಿಂದ ಆಹಾರ ಪದಾರ್ಥಗಳನ್ನು ತರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು