Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:20 - ಕನ್ನಡ ಸತ್ಯವೇದವು C.L. Bible (BSI)

20 ಅರಸ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳಾಗಿದ್ದವು. ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಎಲ್ಲಾ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದ ಎಲ್ಲಾ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳೇ. “ಲೆಬನೋನಿನ ತೋಪು” ಎಂಬ ಅರಮನೆಯಲ್ಲಿ ಇಟ್ಟಿದ್ದ ಎಲ್ಲಾ ವಸ್ತುಗಳು ಅಪ್ಪಟ ಬಂಗಾರದಿಂದಲೇ ಮಾಡಿದವುಗಳಾಗಿದ್ದವು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಅರಮನೆಯ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ, ಆದುದರಿಂದ ಅವನಲ್ಲಿ ಬೆಳ್ಳಿಯ ವಸ್ತು ಒಂದಾದರೂ ಕಾಣಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:20
9 ತಿಳಿವುಗಳ ಹೋಲಿಕೆ  

ಸಮಾರಿಯದ ಗುಡ್ಡಗಳಲ್ಲಿ ಮರಳಿ ದ್ರಾಕ್ಷಾತೋಟಗಳನ್ನು ಮಾಡಿಕೊಳ್ಳುವೆ. ನೆಡುವವರೇ ನೆಟ್ಟ ಫಲಗಳನ್ನು ಸವಿಯುವರು.


ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!


ನಾನಾ ಆಕಾರದ ಬಂಗಾರದ ಪಾತ್ರೆಗಳಲ್ಲಿ ಅರಸನ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿ ದ್ರಾಕ್ಷಾರಸವನ್ನು ಕುಡಿಯಲು ಕೊಡುವ ವ್ಯವಸ್ಥೆ ಮಾಡಲಾಗಿತ್ತು.


ಅರಸನ ಕಾಲದಲ್ಲಿ ಜೆರುಸಲೇಮಿನಲ್ಲಿ ಬೆಳ್ಳಿ, ಕಲ್ಲಿನಂತೆಯೂ ದೇವದಾರು ಮರಗಳು, ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆಯೂ ವಿಫುಲವಾಗಿ ಇದ್ದವು.


ಅರಸ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು; ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲ. ಆದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.


ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.


ಆರು ಮೆಟ್ಟಿಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.


ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು