Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:21 - ಕನ್ನಡ ಸತ್ಯವೇದವು C.L. Bible (BSI)

21 ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅರಸನ ಹಡುಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರ, ನವಿಲು ಇವುಗಳನ್ನು ತರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರುಷಕ್ಕೊಮ್ಮೆ ಬಂಗಾರ ಬೆಳ್ಳಿ ದಂತ ಕಪಿ ನವಿಲು ಇವುಗಳನ್ನು ತರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ರಾಜನಾದ ಸೊಲೊಮೋನನ ಬಳಿಯಲ್ಲಿ ತಾರ್ಷೀಷಿಗೆ ಹೋಗಲು ಹಡಗುಗಳಿದ್ದವು. ಹೂರಾಮನ ನಾವಿಕರು ಅವುಗಳನ್ನು ನಡಿಸಿದರು. ಮೂರು ವರ್ಷಕ್ಕೊಮ್ಮೆ ಹಡಗುಗಳು ತಾರ್ಷೀಷಿನಿಂದ ಹಿಂದಿರುಗುತ್ತಿದ್ದವು. ಅವು ಚಿನ್ನ, ಬೆಳ್ಳಿ, ದಂತ, ಕೋತಿ ಮತ್ತು ನವಿಲುಗಳನ್ನು ಸೊಲೊಮೋನನಿಗೆ ತರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅರಸನ ಹಡಗುಗಳು ಹೀರಾಮನ ಸೇವಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:21
11 ತಿಳಿವುಗಳ ಹೋಲಿಕೆ  

ಉಷ್ಟ್ರಪಕ್ಷಿ ಲವಲವಿಕೆಯಿಂದ ರೆಕ್ಕೆಬಡಿಯುತ್ತದೆ ಆದರೆ ಪ್ರೀತಿವ್ಯಾಮೋಹವಿದೆಯೆ ಅದರ ರೆಕ್ಕೆ ಗರಿಗಳಿಗೆ?


ಇದಲ್ಲದೆ, ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.


ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷಿಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.


ಅರಸ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನೂ ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸ ಸೊಲೊಮೋನನಿಗೆ 15,000 ಕಿಲೋಗ್ರಾಂಗಿಂತ ಹೆಚ್ಚು ಬಂಗಾರವನ್ನೂ ತಂದುಕೊಟ್ಟರು.


ಆ ಬೊಂಬೆಗಳ ಭೂಷಣಕ್ಕಾಗಿ ಸಾಗಿಬರುತ್ತವೆ ತಾರ್ಷೀಷಿನಿಂದ ಬೆಳ್ಳೀತಗಡುಗಳು, ಊಫಜಿನಿಂದ ಚಿನ್ನ. ಅವು ಕೆತ್ತನೆಗಾರನ, ಎರಕದವನ ಕೈಕೆಲಸಗಳು ಅವುಗಳ ಉಡುಪು ನೀಲಧೂಮ್ರ ವರ್ಣದ ವಸ್ತ್ರಗಳು. ಇವೆಲ್ಲವು ಕೇವಲ ಕಲಾಕುಶಲರ ಕೌಶಲ್ಯಗಳು.


ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದುದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು.


ದೆದಾನಿನವರು ನಿನ್ನ ವರ್ತಕರಾಗಿದ್ದರು; ಬಹುದ್ವೀಪಗಳ ಉತ್ಪತ್ತಿ ನಿನ್ನ ಕೈಗೆ ಸೇರಿತ್ತು. ಗಜದಂತಗಳನ್ನೂ, ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು.


ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು