Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:6 - ಕನ್ನಡ ಸತ್ಯವೇದವು C.L. Bible (BSI)

6 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ, ನಿಮ್ಮ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿದೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವವರೆಗೆ ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ; ಈಗ ನೋಡಿದರೆ, ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಉನ್ನತವಾಗಿದೆ; ಜನರು ನಿನ್ನ ಜ್ಞಾನ ಮತ್ತು ಐಶ್ವರ್ಯದ ಬಗ್ಗೆ ಅರ್ಧವನ್ನಾದರೂ ನನಗೆ ಹೇಳಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿನ್ನ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿದೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಇಲ್ಲಿಗೆ ಬಂದು ಅವುಗಳನ್ನೆಲ್ಲಾ ಕಣ್ಣಾರೆ ನೋಡುವ ತನಕ ನಾನು ಅವುಗಳನ್ನು ನಂಬಿರಲಿಲ್ಲ. ಆದರೆ ನಾನು ಕೇಳಿದ್ದು ನಿನ್ನ ಜ್ಞಾನದ ಅರ್ಧದಷ್ಟೂ ಇಲ್ಲವೆಂದು ಈಗ ನನಗೆ ತಿಳಿಯಿತು. ನಾನು ಕೇಳಿದ್ದಕ್ಕಿಂತಲೂ ನೀನು ಮಹಾಜ್ಞಾನಿಯಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ನಿನ್ನ ಮಹಾಜ್ಞಾನದಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:6
11 ತಿಳಿವುಗಳ ಹೋಲಿಕೆ  

ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!


ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II


ಇವುಗಳಿಂದ ಆಶ್ಚರ್ಯಚಕಿತಳಾಗಿ, ಅವನಿಗೆ, “ನಾನು ನನ್ನ ದೇಶದಲ್ಲಿ ನಿಮ್ಮ ಜ್ಞಾನವನ್ನೂ ಸಾಧನೆಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.


ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕೆ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿಮ್ಮ ಜ್ಞಾನವೈಭವಗಳು, ನಾನು ಕೇಳಿದ್ದಕ್ಕಿಂತ ಮಿಗಿಲಾಗಿವೆ. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ವರದಿ ಮಾಡಿರಲಿಲ್ಲ.


ಸೊಲೊಮೋನನ ಜ್ಞಾನವಿಶೇಷವನ್ನು ಕುರಿತು ಕೇಳಿದ ಸರ್ವಜನಾಂಗಗಳ ಭೂಪಾಲರಲ್ಲಿ ಅನೇಕರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಬರುತ್ತಿದ್ದರು.


ಅವನು ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಮುತ್ತಲಿನ ಜನಾಂಗಗಳಲ್ಲೆಲ್ಲಾ ಅವನ ಹೆಸರು ಪ್ರಸಿದ್ಧವಾಯಿತು.


ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ಪವಿತ್ರಗ್ರಂಥದಲ್ಲಿ ಹೇಳಿರುವಂತೆ : “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.”


ನಿಮ್ಮ ಪ್ರಜೆಗಳು ಹಾಗೂ ಸದಾ ನಿಮ್ಮ ಸನ್ನಿಧಿಯಲ್ಲಿ ಇದ್ದುಕೊಂಡು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ಸೇವಕರು ಧನ್ಯರು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು