Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 9:9 - ಕನ್ನಡ ಸತ್ಯವೇದವು C.L. Bible (BSI)

9 ಆಕೆ ಅರಸನಿಗೆ 4000 ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನೂ ಅಪರಿಮಿತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದದ್ದು ಯಾವುದೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧ ದ್ರವ್ಯವನ್ನೂ, ಅಮೂಲ್ಯರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದ ಸುಗಂಧದ್ರವ್ಯ ಮತ್ತೆ ಸಿಗಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಕೆಯು ಅರಸನಿಗೆ ನೂರಿಪ್ಪತ್ತು ತಲಾಂತು ಬಂಗಾರವನ್ನೂ ಅಪರಿವಿುತಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸಮಾನವಾದದ್ದು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಬಳಿಕ ಶೆಬದ ರಾಣಿಯು ಸೊಲೊಮೋನ್ ಅರಸನಿಗೆ ನಾಲ್ಕು ಸಾವಿರದ ನೂರ ನಲವತ್ತು ಕಿಲೋಗ್ರಾಂ ಬಂಗಾರ, ಲೆಕ್ಕವಿಲ್ಲದಷ್ಟು ಸುಗಂಧದ್ರವ್ಯಗಳು ಮತ್ತು ಬೆಲೆಬಾಳುವ ವಜ್ರಗಳನ್ನು ಕೊಟ್ಟಳು. ಅಷ್ಟು ಅತ್ಯುತ್ತಮವಾದ ಸುಗಂಧದ್ರವ್ಯಗಳನ್ನು ಯಾರೂ ಸೊಲೊಮೋನನಿಗೆ ಕೊಟ್ಟಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವಳು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ತೂಕ ಬಂಗಾರವನ್ನೂ, ಬಹು ಸಮೃದ್ಧಿಯಾದ ಸುಗಂಧದ್ರವ್ಯಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಗಂಧದ್ರವ್ಯಗಳಿಗೆ ಬೇರೆ ಯಾವುದು ಸಮನವಾದದ್ದು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 9:9
10 ತಿಳಿವುಗಳ ಹೋಲಿಕೆ  

ಅರಸ ಬಾಳಲಿ ಚಿರಕಾಲ; ದೊರಕಲಿ ಆತನಿಗೆ ಶೆಬಾದ ಬಂಗಾರ I ಜರುಗಲಿ ಪ್ರಾರ್ಥನೆ ಸದಾಕಾಲ; ಆಶೀರ್ವಾದ ಸಿಗಲಿ ಅನವರತ II


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಅವರೆಲ್ಲರು ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ಶೆಬಾದ ರಾಣಿ ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಜೆರುಸಲೇಮಿಗೆ ಬಂದಳು. ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.


ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.


ಹೀರಾಮನು ಸೊಲೊಮೋನನಿಗೆ, ನಾಲ್ಕು ಸಾವಿರ ಕಿಲೋಗ್ರಾಂ ಬಂಗಾರವನ್ನು ಕೊಟ್ಟನು.


ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ.


ಸರ್ವೇಶ್ವರ ಮೋಶೆಗೆ ಮತ್ತೆ ಆಜ್ಞಾಪಿಸಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ ಹಾಗು ಗಂಧದಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಮತ್ತು ಸ್ವಚ್ಚವಾದ ಧೂಪವನ್ನು ಸಮಭಾಗವಾಗಿ ತೆಗೆದುಕೊಂಡು ಸುವಾಸನೆಯುಳ್ಳ ಬುಕ್ಕಿಟ್ಟಾಗಿರುವಂತೆ


ನಿಮ್ಮನ್ನು ಮೆಚ್ಚಿ, ತಮ್ಮ ಸಮ್ಮುಖದಲ್ಲಿ ಅರಸನಾಗಿಸಲು, ತಮ್ಮ ಸಿಂಹಾಸನದ ಮೇಲೆ ನಿಮ್ಮನ್ನು ಕುಳ್ಳಿರಿಸಿದ ಆ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ನಿಮ್ಮ ದೇವರು ಇಸ್ರಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿದ್ದಾರೆ. ಆದ್ದರಿಂದಲೇ ಈ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನೇ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.


ಹೂರಾಮನ ಮತ್ತು ಸೊಲೊಮೋನನ ಆಳುಗಳು ಓಫೀರ್‍ದೇಶದ ಬಂಗಾರವನ್ನಲ್ಲದೆ ಸುಗಂಧದ ಮರವನ್ನೂ ರತ್ನಗಳನ್ನೂ ತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು