2 ಪೇತ್ರನು 1:1 - ಕನ್ನಡ ಸತ್ಯವೇದವು C.L. Bible (BSI)1 ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರು ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಜೆಜು ಕ್ರಿಸ್ತಾಚೊ ಅಪೊಸ್ತಲ್ ಅನಿ ಸೆವಕ್ ಸಿಮಾವ್ ಪೆದ್ರು, ಅಮ್ಚ್ಯಾ ದೆವಾಚ್ಯಾ ನಿತಿವಂತ್ಪಾನಾ ಅನಿ ಸುಟ್ಕಾ ದಿನಾರ್‍ಯಾ ಜೆಜು ಕ್ರಿಸ್ತಾಚೊ ವಿಶ್ವಾಸ್ ಕಿಮ್ತಿಚೊ ಮನುನ್ ದಿಲ್ಲ್ಯಾಕ್ನಿ ಲಿವ್ತಲೆ: ಅಧ್ಯಾಯವನ್ನು ನೋಡಿ |
ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.