Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:17 - ಕನ್ನಡ ಸತ್ಯವೇದವು C.L. Bible (BSI)

17 ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, “ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಮಹೋನ್ನತವಾದ ಮಹಿಮೆಯಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಗೌರವವನ್ನೂ, ಮಹಿಮೆಯನ್ನೂ ಹೊಂದಿದನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ಮೆಚ್ಚಿದ್ದೇನೆ ಎಂಬಂಥ ವಾಣಿಯು ಸರ್ವೋತ್ಕೃಷ್ಟಪ್ರಭಾವದಿಂದ ಆತನಿಗೆ ಉಂಟಾದದ್ದರಲ್ಲಿ ಆತನು ತಂದೆಯಾದ ದೇವರಿಂದ ಘನಮಾನಗಳನ್ನು ಹೊಂದಿದನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆತನು ಅತ್ಯಂತ ಪ್ರಭಾವವುಳ್ಳ (ದೇವರ) ಸ್ವರವನ್ನು ಕೇಳಿದನು. ಆಗಲೇ ಆತನು ತಂದೆಯಾದ ದೇವರಿಂದ ಮಾನವನ್ನೂ ಪ್ರಭಾವವನ್ನೂ ಹೊಂದಿಕೊಂಡನು. ಆ ಸ್ವರವು, “ಈತನು ನನ್ನ ಪ್ರಿಯ ಮಗ. ಈತನನ್ನು ಬಹಳವಾಗಿ ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿಯು ಮಹೋನ್ನತ ಮಹಿಮೆಯಿಂದ ಅವರಿಗೆ ಉಂಟಾದದ್ದರಲ್ಲಿ ಅವರು ತಂದೆ ದೇವರಿಂದ ಗೌರವವನ್ನೂ ಮಹಿಮೆಯನ್ನೂ ಹೊಂದಿದರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ದೆವಾ ಬಾಬಾನ್ ಮಹಿಮಾ ಅನಿ ಮಾನ್ ತೆಕಾ ದಿತಾನಾ ಅಮಿ ಥೈ ಹೊತ್ತಾಂವ್, ತನ್ನಾ ಮೊಟ್ಯಾ ಮಹಿಮೆಕ್ನಾ ಎಕ್ ಧನ್ ತೆಕಾ ಆಯ್ಕೊಯೆಲೊ ತೊ ಧನ್ “ಹೊ ಮಾಜೊ ಅಪುರ್‍ಬಾಯೆಚೊ ಲೆಕ್, ಹೊ ಮಾಜ್ಯಾ ಮನಾಕ್ ಯೆಲಾ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:17
36 ತಿಳಿವುಗಳ ಹೋಲಿಕೆ  

ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,” ಎಂಬ ವಾಣಿ ಕೇಳಿಸಿತು.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ಇದಲ್ಲದೆ, “ನೀನೇ ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎನ್ನುವ ದೈವವಾಣಿ ಕೇಳಿಸಿತು.


“ಇದಿಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು.


ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.


ಪಿತನು ತಾವೇ ಸ್ವಯಂ ಜೀವಮೂಲವಾಗಿರುವಂತೆ ಪುತ್ರನು ಸಹ ಸ್ವಯಂ ಜೀವಮೂಲವಾಗಿರುವಂತೆ ಕರುಣಿಸಿದ್ದಾರೆ.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಪಿತನಾದ ದೇವರಿಂದಲೂ ಅವರ ಪುತ್ರ ಯೇಸುಕ್ರಿಸ್ತರಿಂದಲೂ ಕೃಪೆ, ಕರುಣೆ, ಶಾಂತಿ, ಸಮಾಧಾನಗಳು ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮಲ್ಲಿ ನೆಲೆಸಲಿ!


ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣಾಭರಿತ ತಂದೆ; ಸಕಲ ಸಾಂತ್ವನವನ್ನೀಯುವ ದೇವರು.


ನಾನು ಹೇಳುತ್ತಿರುವುದು ಸುಳ್ಳಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರೇ ಇದನ್ನು ಬಲ್ಲರು. ಅವರಿಗೆ ಯುಗಯುಗಾಂತರಕ್ಕೂ ಸ್ತುತಿ ಸಲ್ಲಲಿ!


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.


ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ?


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಇದ್ದಕ್ಕಿದ್ದ ಹಾಗೆ ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಅವರಿಗೆ ಕಾಣಿಸಿತು.


‘ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ,’ ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿಂದಾದರೂ ವಿಶ್ವಾಸಿಸಿರಿ.


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


ಹೀಗೆ ಒಮ್ಮನಸ್ಸಿನಿಂದಲೂ ಒಕ್ಕೊರಲಿನಿಂದಲೂ ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರನ್ನು ಕೊಂಡಾಡುವಂತಾಗಲಿ.


ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.


ಪುತ್ರನೆಂದರೆ ಪಿತನಿಗೆ ಪ್ರೀತಿ. ಆದುದರಿಂದ ತಾವು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ಇದಲ್ಲದೆ ಇನ್ನೂ ಎಷ್ಟೋ ಮಿಗಿಲಾದ ಕಾರ್ಯಗಳನ್ನು ಪುತ್ರನಿಗೆ ತೋರಿಸುತ್ತಾರೆ. ಅವುಗಳನ್ನು ಕಂಡು ನೀವು ಬೆರಗಾಗುವಿರಿ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು