2 ಪೇತ್ರನು 1:19 - ಕನ್ನಡ ಸತ್ಯವೇದವು C.L. Bible (BSI)19 ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇದಲ್ಲದೆ ಪ್ರವಾದನವಾಕ್ಯವು ನಮಗೆ ಮತ್ತೂ ದೃಢವಾಗಿದೆ. ನಿಮ್ಮ ಹೃದಯದೊಳಗೆ ಬೆಳ್ಳಿಯು ಮೂಡಿ ಅರುಣೋದಯವಾಗುವ ಪರ್ಯಂತರ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಡುವದೇ ಒಳ್ಳೇದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಪ್ರವಾದಿಗಳು ಹೇಳಿದ ಸಂಗತಿಗಳನ್ನು ಇದು ನಮಗೆ ಮತ್ತಷ್ಟು ಖಚಿತಪಡಿಸಿತು. ಅವರು ಹೇಳಿದ್ದನ್ನು ನೀವು ಚಾಚು ತಪ್ಪದೆ ಅನುಸರಿಸುವುದು ಒಳ್ಳೆಯದೇ ಸರಿ. ಅವರು ಹೇಳಿದ ಸಂಗತಿಗಳು ಅಂಧಕಾರದಲ್ಲಿ ಪ್ರಕಾಶಿಸುವ ಬೆಳಕಿನಂತಿವೆ. ನಿಮ್ಮ ಹೃದಯಗಳಲ್ಲಿ ಹಗಲು ಆರಂಭವಾಗಿ, ಮುಂಜಾನೆಯ ನಕ್ಷತ್ರವು ಮೂಡುವವರೆಗೂ ಆ ಬೆಳಕು ಪ್ರಕಾಶಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮಾತ್ರವಲ್ಲದೆ ನಮಗೆ ಬಹು ನಿಶ್ಚಯವಾದ ಪ್ರವಾದನೆಯ ವಾಕ್ಯಗಳಿವೆ. ಉದಯ ನಕ್ಷತ್ರವಾಗಿರುವ ಕ್ರಿಸ್ತ ಯೇಸು ನಿಮ್ಮ ಹೃದಯಗಳಲ್ಲಿ ಉದಯಿಸುವಾಗ ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪದಂತೆ ಎಣಿಸಿ, ನೀವು ಆ ಪ್ರವಾದನಾ ವಾಕ್ಯಗಳಿಗೆ ಲಕ್ಷ್ಯಕೊಡುವುದು ಒಳ್ಳೆಯದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಅಸೆ ಪ್ರವಾದ್ಯಾನಿ ಸಾಂಗಲ್ಲ್ಯಾ ಗೊಸ್ಟಿಯಾ ಖರೆಚ್, ಕಾಳ್ಕಾತ್ ಹೊಳಾವ್ತಲೆ ದಿವೊ ತೊ ದಿಸ್ ಉತ್ರುನ್ ಅನಿ ಅಮ್ಚ್ಯಾ ಮನಾತ್ನಿ ಸುಖಿರಾಚೊ ಉಜ್ವೊಡ್ ದಾಕ್ವುಸಾಟ್ನಿ ಹೊಳಾವ್ತಲೊ ಉಜ್ವೊಡ್ ತೊ. ಅಧ್ಯಾಯವನ್ನು ನೋಡಿ |