Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:20 - ಕನ್ನಡ ಸತ್ಯವೇದವು C.L. Bible (BSI)

20 ಆದರೆ, ಇದನ್ನು ನೀವು ಮುಖ್ಯವಾಗಿ ಜ್ಞಾಪಕದಲ್ಲಿಡಬೇಕು: ಪವಿತ್ರಗ್ರಂಥದಲ್ಲಿರುವ ಯಾವ ಪ್ರವಾದನೆಯೂ ವೈಯಕ್ತಿಕ ವ್ಯಾಖ್ಯಾನದ ವಿಷಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಶಾಸ್ತ್ರದಲ್ಲಿರುವ ಯಾವ ಪ್ರವಾದನವಾಕ್ಯವೂ ಕೇವಲ ಮಾನುಷಬುದ್ಧಿಯಿಂದ ವಿವರಿಸತಕ್ಕಂಥದಲ್ಲವೆಂಬದನ್ನು ಮುಖ್ಯವಾಗಿ ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀವು ಅರ್ಥಮಾಡಿಕೊಳ್ಳಬೇಕಾದ ಮುಖ್ಯವಾದ ಸಂಗತಿಯೇನೆಂದರೆ, ಪವಿತ್ರ ಗ್ರಂಥದಲ್ಲಿರುವ ಯಾವ ಪ್ರವಾದನವಾಕ್ಯವೂ ಒಬ್ಬ ವ್ಯಕ್ತಿಯ ವೈಯಕ್ತಿಕ ವಿವರಣೆಯಿಂದ ಬಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪವಿತ್ರ ವೇದದ ಯಾವ ಪ್ರವಾದನೆಯೂ ಕೇವಲ ಪ್ರವಾದಿಗಳಿಂದ ಸ್ವಂತವಾಗಿ ವಿವರಿಸತಕ್ಕದ್ದಲ್ಲ ಎಂಬುದನ್ನು ಮೊದಲು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತುಮಿ ಹೆ ಅದ್ದಿಚ್ ಕಳ್ವುನ್ ಘೆವ್ಚೆ ಪವಿತ್ರ್ ಪುಸ್ತಕಾಚ್ಯಾ ವಿಶಯಾತ್ ಜೆ ಕೊನ್ ಬೊಲಲ್ಲೆ ಹಾಯ್ ತೆನಿ ಅಪ್ನಾಚ್ಯಾ ಸ್ವತಾಚ್ಯಾ ವಿಚಾರ್ನಿ ಬೊಲಲೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:20
7 ತಿಳಿವುಗಳ ಹೋಲಿಕೆ  

ಮೊತ್ತಮೊದಲನೆಯದಾಗಿ ನೀವು ಇದನ್ನು ನೆನಪಿನಲ್ಲಿಡಬೇಕು; ಅಂತ್ಯಕಾಲದಲ್ಲಿ ಕುಚೋದ್ಯಗಾರರು ಕಾಣಿಸಿಕೊಳ್ಳುವರು.


ದೇವರು ಅನುಗ್ರಹಿಸಿರುವ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ನಾವು ಹೊಂದಿರುವ ವರವು ಪ್ರವಾದನೆಯ ವರವಾಗಿದ್ದರೆ ನಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅದನ್ನು ಉಪಯೋಗಿಸಬೇಕು.


ಇವು ನಿಮ್ಮ ವಿಶ್ವಾಸವನ್ನು ಒರೆಗೆ ಹಚ್ಚಿ ನಿಮ್ಮನ್ನು ದೃಢಪಡಿಸುತ್ತವೆ; ನಿಮ್ಮನ್ನು ಸಹನಶೀಲರನ್ನಾಗಿ ಮಾಡುತ್ತವೆ.


ಧರ್ಮಶಾಸ್ತ್ರದ ನಿರ್ಬಂಧನೆಗಳು ಸಜ್ಜನರಿಗಲ್ಲ; ಬದಲಿಗೆ ಅಕ್ರಮಿಗಳಿಗೆ, ಅವಿಧೇಯರಿಗೆ, ಅಧರ್ಮಿಗಳಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಪ್ರಾಪಂಚಿಕರಿಗೆ, ಹೆತ್ತವರನ್ನು ಹತ್ಯೆಮಾಡುವವರಿಗೆ ಮತ್ತು ಕೊಲೆಗಾರರಿಗೆ.


ಇದೆಂಥ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ.


ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ.


ಪವಿತ್ರಗ್ರಂಥ ದೈವಪ್ರೇರಣೆಯಿಂದ ರಚಿತವಾದುದು. ಆದ್ದರಿಂದ ಅದು ಪ್ರಬೋಧನೆಗೂ ಖಂಡನೆಗೂ ತಿದ್ದುಪಾಟಿಗೂ ನೀತಿಬೋಧೆಗೂ ಉಪಯುಕ್ತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು