Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:7 - ಕನ್ನಡ ಸತ್ಯವೇದವು C.L. Bible (BSI)

7 ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರಸ್ನೇಹವನ್ನೂ ಸಹೋದರಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರ ಸೇವೆಗೆ ಸಹೋದರ ಸ್ನೇಹವನ್ನೂ ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಸೇರಿಸಿರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸೋದರ ಸ್ನೇಹವನ್ನೂ ಸೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮ್ಚ್ಯಾ ದೆವಸ್ಪಾನಾಕ್ ಭಾವ್ಬಂದ್ಪಾನ್ ಮಿಳ್ವಾ ಅನಿ ಭಾವ್ಬಂದ್ಪಾನ್ ಪ್ರೆಮ್ ಮಿಳ್ವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:7
15 ತಿಳಿವುಗಳ ಹೋಲಿಕೆ  

ಸೋದರ ಪ್ರೀತಿಯಲ್ಲಿ ನೆಲೆಯಾಗಿ ನಿಲ್ಲಿರಿ.


ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ಧಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ಧಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ.


ಕ್ರಿಸ್ತಯೇಸು ನಮಗೋಸ್ಕರ ತಮ್ಮ ಪ್ರಾಣವನ್ನೇ ತೆತ್ತರು. ಇದರಿಂದ ಪ್ರೀತಿ ಎಂತಹುದೆಂದು ನಾವು ಅರಿತುಕೊಂಡೆವು. ನಾವೂ ಕೂಡ ಸಹೋದರರಿಗಾಗಿ ಪ್ರಾಣಾರ್ಪಣೆ ಮಾಡಲು ಬದ್ಧರಾಗಿದ್ದೇವೆ.


ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಎಲ್ಲಕ್ಕಿಂತ ಮಿಗಿಲಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯೇ ಸಮಸ್ತವನ್ನು ಸಂಪೂರ್ಣಗೊಳಿಸುವ ಬಂಧನ.


ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು