Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 1:8 - ಕನ್ನಡ ಸತ್ಯವೇದವು C.L. Bible (BSI)

8 ಈ ಗುಣಗಳು ನಿಮ್ಮಲ್ಲಿ ಬೆಳೆದು ಸಮೃದ್ಧವಾಗಿದ್ದರೆ, ನಮ್ಮ ಪ್ರಭು ಯೇಸುಕ್ರಿಸ್ತರನ್ನು ಅರಿತು ಬಾಳುವುದರಲ್ಲಿ ಇವು ನಿಮ್ಮನ್ನು ಚೈತನ್ಯಪೂರ್ಣರನ್ನಾಗಿಯೂ ಫಲಪ್ರದರನ್ನಾಗಿಯೂ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವು ನಿಮ್ಮಲ್ಲಿದ್ದು ಬೆಳೆದು ಬಂದರೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಕುರಿತಾದ ಪರಿಜ್ಞಾನದಲ್ಲಿ ನೀವು ನಿರುತ್ಸಾಹಿಗಳೂ, ನಿಷ್ಪ್ರಯೋಜಕರೂ ಆಗದಂತೆ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸಂಬಂಧವಾದ ಪರಿಜ್ಞಾನವನ್ನು ಹೊಂದುವ ವಿಷಯದಲ್ಲಿ ನಿಮ್ಮನ್ನು ಆಲಸ್ಯಗಾರರೂ ನಿಷ್ಫಲರೂ ಆಗದಂತೆ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇವೆಲ್ಲವೂ ನಿಮ್ಮಲ್ಲಿದ್ದು ಬೆಳೆಯುತ್ತಿದ್ದರೆ, ನೀವು ಎಂದಿಗೂ ನಿರರ್ಥಕರಾಗದಂತೆ ಇವು ನಿಮಗೆ ಸಹಾಯ ಮಾಡುತ್ತವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಜ್ಞಾನದಲ್ಲಿ ಎಂದಿಗೂ ಅಯೋಗ್ಯರೆನಿಸಿಕೊಳ್ಳದಂತೆ ಇವು ನಿಮಗೆ ಸಹಾಯಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈ ಗುಣಗಳು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ, ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅರಿತುಕೊಳ್ಳುವುದರಲ್ಲಿ ನೀವು ನಿಷ್ಪ್ರಯೋಜಕರೂ ನಿಷ್ಫಲರೂ ಆಗದಂತೆ ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್, ಹಿ ಸಗ್ಳಿ ಗುನಾ ತುಮ್ಚ್ಯಾ ಭುತ್ತುರ್ ರ್‍ಹಾವ್ಕ್ ಪಾಜೆ, ಹಿ ಸಗ್ಳಿ ಭರ್ಪುರ್ ಮಾಪಾನ್ ತುಮ್ಚ್ಯಾ ಭುತ್ತುರ್ ರ್‍ಹಾಲ್ಯಾರ್ ತೆ ತುಮ್ಕಾ ಅಮ್ಚ್ಯಾ ಧನಿಯಾ ಜೆಜುಕ್ರಿಸ್ತಾಚ್ಯಾ ಶಾನ್ಪಾನಾತ್ ಕಾಯ್ಬಿ ಪಾಯ್ದ್ಯಾಕ್ ಪಡಿನಸಲ್ಲೆ ಅನಿ ಕಸ್ಲೊಬಿ ಪ್ರಭಾವ್ ಪಡಿನಸಲ್ಲೆ ಹೊವ್ನ್ ದಿಯ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 1:8
33 ತಿಳಿವುಗಳ ಹೋಲಿಕೆ  

ನಮ್ಮ ಜನರು ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಕುಂದುಕೊರತೆಯಲ್ಲಿರುವವರಿಗೆ ನೆರವಾಗಲಿ. ಪರೋಪಕಾರವನ್ನು ಕಲಿತುಕೊಳ್ಳಲಿ. ವ್ಯರ್ಥಜೀವನವನ್ನು ನಡೆಸದಿರಲಿ.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.


ನೀವು ಆಲಸಿಗಳಾಗಿರಬಾರದು; ವಿಶ್ವಾಸದಿಂದಲೂ ಬಹು ತಾಳ್ಮೆಯಿಂದಲೂ ದೈವ ವಾಗ್ದಾನಗಳನ್ನು ಬಾಧ್ಯವಾಗಿಸಿಕೊಂಡವರನ್ನು ಅನುಸರಿಸಬೇಕು.


ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ.


ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ದೇವರ ಮತ್ತು ಪ್ರಭು ಯೇಸುಕ್ರಿಸ್ತರ ಬಗ್ಗೆ ನೀವು ಪಡೆಯುತ್ತಿರುವ ಜ್ಞಾನಾರ್ಜನೆಯು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅಧಿಕಾಧಿಕವಾಗಿ ತರಲಿ!


ನಿನ್ನ ವಿಶ್ವಾಸವನ್ನು ಬೇರೆಯವರಿಗೂ ನೀಡಿ ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ಎಲ್ಲಾ ಒಳಿತಿನ ಅರಿವನ್ನು ಹೆಚ್ಚಿಸಿಕೊಳ್ಳಬೇಕೆಂಬುದೇ ನನ್ನ ಪ್ರಾರ್ಥನೆ.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ಕ್ರಿಸ್ತಯೇಸುವಿನಲ್ಲಿರುವ ಮನೋಭಾವ ನಿಮ್ಮಲ್ಲೂ ನೆಲಸಿರಲಿ:


ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.


ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.


ದೇವರು ನಿಮಗೆ ಅನುಗ್ರಹಿಸಿರುವ ಅತಿಶಯವಾದ ವರಕ್ಕಾಗಿ ಅವರು ಪ್ರೀತಿವಾತ್ಸಲ್ಯದಿಂದ ನಿಮಗೋಸ್ಕರ ಪ್ರಾರ್ಥಿಸುವರು.


ಈ ಸಭೆಗಳವರು ಕಷ್ಟಸಂಕಟಗಳ ಕುಲುಮೆಯಲ್ಲಿ ಬೆಂದಿದ್ದರೂ ಹರ್ಷಭರಿತರಾಗಿದ್ದಾರೆ. ಕಡುಬಡತನದಲ್ಲಿ ನರಳುತ್ತಿದ್ದರೂ ಅಪಾರ ಔದಾರ್ಯದಿಂದ ನಡೆದುಕೊಳ್ಳುತ್ತಿದ್ದಾರೆ.


ಇದಲ್ಲದೆ ಅವರು ಮನೆಮನೆಗಳನ್ನು ಸುತ್ತುತ್ತಾ ಅಲೆದಾಡುತ್ತಾ ಹರಟೆಮಲ್ಲರೂ ಸೋಮಾರಿಗಳೂ ಆಗಬಹುದು. ಇತರರ ವಿಷಯಗಳಲ್ಲಿ ತಲೆಹಾಕಬಹುದು.


ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ಧಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ಧಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.


ವಿಶ್ವಾಸ, ವಾಕ್ಚಾತುರ್ಯ, ಜ್ಞಾನ, ಶ್ರದ್ಧೆ, ನಮ್ಮ ಬಗ್ಗೆ ನಿಮಗಿರುವ ಪ್ರೀತಿ - ಈ ಎಲ್ಲಾ ವಿಷಯಗಳಲ್ಲೂ ನೀವು ಸಮೃದ್ಧರಾಗಿದ್ದೀರಿ. ಹಾಗೆಯೇ ಈ ಸೇವಾಕಾರ್ಯದಲ್ಲೂ ಸಮೃದ್ಧರಾಗಿರಿ.


ಪ್ರಭುವಿನ ಸೇವೆಯಲ್ಲಿ ಆಲಸಿಗಳಾಗದೆ ಅತ್ಯಾಸಕ್ತರಾಗಿರಿ.


ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನಾನು ಚೆನ್ನಾಗಿ ಬಲ್ಲೆ.


“ಆಗ ಧಣಿ ಅವನಿಗೆ, ‘ಎಲವೋ, ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿಮಾಡುವವನು ಎಂದು ನಿನಗೆ ಗೊತ್ತಿತ್ತಲ್ಲವೆ?


ಐದು ಗಂಟೆಗೆ ಹೋದಾಗಲೂ ಬೇರೆ ಕೆಲವರು ಅಲ್ಲಿ ನಿಂತಿರುವುದನ್ನು ಕಂಡು, ‘ದಿನವಿಡೀ ಕೆಲಸಮಾಡದೆ ಸುಮ್ಮನೆ ಇಲ್ಲಿ ನಿಂತಿದ್ದೀರಲ್ಲಾ, ಏಕೆ?’ ಎಂದು ಕೇಳಿದ.


ಸುಮಾರು ಬೆಳಿಗ್ಗೆ ಒಂಭತ್ತು ಗಂಟೆಗೆ ಅವನು ಪುನಃ ಸಂತೆಬೀದಿಯ ಕಡೆ ಹೋದ. ಕೆಲಸವಿಲ್ಲದೆ ಸುಮ್ಮನೆ ನಿಂತುಕೊಂಡಿದ್ದ ಕೆಲವು ಕೂಲಿಗಾರರನ್ನು ಅಲ್ಲಿ ಕಂಡ.


ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಮೈಗಳ್ಳತನ ಗಾಢನಿದ್ರೆಯಲ್ಲಿ ಮುಳುಗಿಸುವುದು; ಸೋಮಾರಿಯು ಹಸಿವಿನಿಂದ ಬಳಲುವನು.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.


ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.


ನಮ್ಮ ಪ್ರಭು ಹಾಗೂ ಉದ್ಧಾರಕರಾದ ಯೇಸುಕ್ರಿಸ್ತರನ್ನು ಕುರಿತ ಜ್ಞಾನದ ಮೂಲಕ ಕೆಲವರು ಲೋಕದ ಕಲ್ಮಶದಿಂದ ಪಾರಾಗಿ ನಿರ್ಮಲರಾಗುತ್ತಾರೆ. ಇಂಥವರು ಮರಳಿ ಅದರಲ್ಲೇ ಸಿಲುಕಿಕೊಂಡು ಅದಕ್ಕೆ ಗುಲಾಮರಾದರೆ ಅವರ ಅಂತಿಮ ಗತಿ ಮೊದಲ ಗತಿಗಿಂತಲೂ ಅಧೋಗತಿಯಾಗಿರುತ್ತದೆ.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು