Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:1 - ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದರೆ ಇಸ್ರಾಯೇಲ್ ಜನರಲ್ಲಿ ಸುಳ್ಳುಪ್ರವಾದಿಗಳೂ ಎದ್ದರಲ್ಲಾ; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ನಾಶಕರವಾದ ಮತಭೇದಗಳನ್ನು ಕಳ್ಳತನದಿಂದ ಹುಟ್ಟಿಸುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನು ಕೂಡ ತಾವು ಅರಿಯೆವು ಎಂದು ಹೇಳುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶವನ್ನು ಬರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಲೊಕಾಚ್ಯಾ ಮದ್ದಿ ಝುಟೆ ಪ್ರವಾದಿ ಉಟಲ್ಲ್ಯಾ ಸಾರ್ಕೆ ಝುಟಿ ಶಿಕಾಪಾ ಶಿಕ್ವುತಲೆಬಿ ಉಟ್ತಾತ್ ತೆನಿ ನಾಶ್ ಹೊತಲಿ ಶಿಕಾಪಾ ಹಾನ್ತ್ಯಾತ್, ಅನಿ ಅಪ್ನಾಕುಚ್ ಇಕಾತ್ ಘೆಟಲ್ಲ್ಯಾ ಧನಿಯಾಕುಚ್ ಕಾಯ್ಬಿ ನ್ಹಯ್ ಸಾರ್ಕೆ ಕರ್ತಾತ್, ಅನಿ ಅಸೆಚ್ ತೆನಿ ಅಪ್ನಾ ವರ್ತಿ ನಾಶ್ ಹಾನುನ್ ಘೆತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:1
73 ತಿಳಿವುಗಳ ಹೋಲಿಕೆ  

“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.


ಅನೇಕ ಸುಳ್ಳುಪ್ರವಾದಿಗಳು ತಲೆಯೆತ್ತಿಕೊಂಡು ಎಷ್ಟೋಮಂದಿಯನ್ನು ವಂಚಿಸುವರು.


ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.


ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಹಾಗಿರುವಾಗಲೇ ಪ್ರಾಮಾಣಿಕರು ಯಾರೆಂದು ಕಂಡುಕೊಳ್ಳಲು ಸಾಧ್ಯ.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ.


ಕ್ರೈಸ್ತಸಭೆಯಲ್ಲಿ ಭೇದಭಾವ ಹುಟ್ಟಿಸುವವನಿಗೆ ಒಂದೆರಡು ಸಾರಿ ಬುದ್ಧಿಹೇಳು. ಅನಂತರ ಅವನಷ್ಟಕ್ಕೇ ಬಿಟ್ಟುಬಿಡು.


ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.


ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ನಿಮ್ಮಲ್ಲಿ ಕೆಲವರು ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದಾರೆ. ಲೌಕಿಕ ಜ್ಞಾನದಿಂದ ನಿರರ್ಥಕವಾಗಿ ಉಬ್ಬಿಕೊಂಡಿದ್ದಾರೆ. ತಾವು ಬಹಳ ವಿನಯಶಾಲಿಗಳೆಂದು ಹೆಚ್ಚಳಪಡುತ್ತಾರೆ. ಇಂಥವರು ನಿಮ್ಮನ್ನು ಕಡೆಗಾಣಿಸದಂತೆ ಎಚ್ಚರದಿಂದಿರಿ. ಇವರು ಯೇಸುಕ್ರಿಸ್ತರೆಂಬ ಶಿರಸ್ಸಿನಿಂದ ಬೇರ್ಪಟ್ಟಿದ್ದಾರೆ.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.


ಮೊದಲನೆಯ ಮೃಗದ ಎದುರಿನಲ್ಲಿ ಪವಾಡಗಳನ್ನೆಸಗುವ ಅನುಮತಿ ಇದ್ದುದರಿಂದ ಅದು ಭೂನಿವಾಸಿಗಳನ್ನು ಮರುಳುಗೊಳಿಸಿತು. ಖಡ್ಗದಿಂದ ಗಾಯಗೊಂಡಿದ್ದರೂ ಸಾಯದೆ ಬದುಕಿದ್ದ ಮೃಗದ ಗೌರವಾರ್ಥ ಒಂದು ವಿಗ್ರಹವನ್ನು ನಿರ್ಮಿಸಬೇಕೆಂದು ಭೂನಿವಾಸಿಗಳಿಗೆ ಅದು ವಿಧಿಸಿತು.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


“ತಮ್ಮ ದುರಿಚ್ಛೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅವರು ಎಚ್ಚರಿಸಿದ್ದಾರೆ.


ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರನ್ನು ಕುರಿತು ಇದನ್ನು ನಿಮಗೆ ಬರೆದಿದ್ದೇನೆ.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು.


ಆ ನನ್ನ ವಿರೋಧಿಗಳು ನಿಮ್ಮನ್ನು ಮೆಚ್ಚಿಸಲು ತುಂಬ ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಆದರೆ ಅವರ ಉದ್ದೇಶ ಒಳ್ಳೆಯದಲ್ಲ. ನೀವು ಸಹ ಅವರನ್ನು ಅಷ್ಟೇ ಆಸಕ್ತಿಯಿಂದ ಮೆಚ್ಚಿಸಬೇಕೆಂಬುದೇ ಅವರ ಉದ್ದೇಶ. ಆದ್ದರಿಂದಲೇ ನಿಮ್ಮನ್ನು ನನ್ನಿಂದ ಬೇರ್ಪಡಿಸಲು ಯತ್ನಿಸುತ್ತಿದ್ದಾರೆ.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಅದಕ್ಕೆ ಯೇಸುಸ್ವಾಮಿ, “ನೀವು ಮೋಸಹೋಗದಂತೆ ಜಾಗರೂಕರಾಗಿರಿ. ‘ಅನೇಕರು ನಾನೇ ಆತ, ನಾನೇ ಆತ,’ ಎನ್ನುತ್ತಾ ನನ್ನ ಹೆಸರನ್ನೇ ಇಟ್ಟುಕೊಂಡು ಬಂದು, ‘ಕಾಲವು ಸಮೀಪಿಸಿಬಿಟ್ಟಿತು,’ ಎಂದು ಹೇಳುತ್ತಾರೆ. ಅವರನ್ನು ಹಿಂಬಾಲಿಸಬೇಡಿ.


ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು.


ಅನೇಕರು ‘ನಾನೇ ಕ್ರಿಸ್ತ, ನಾನೇ ಕ್ರಿಸ್ತ,’ ಎನ್ನುತ್ತಾ ನನ್ನ ಹೆಸರನ್ನೇ ಹೇಳಿಕೊಂಡು ಬರುವರು. ಮಾತ್ರವಲ್ಲ, ಎಷ್ಟೋ ಜನರನ್ನು ತಪ್ಪುದಾರಿಗೆಳೆಯುವರು.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.


ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ನಿಮ್ಮನ್ನು ಕ್ರಯಕ್ಕೆ ಕೊಳ್ಳಲಾಗಿದೆ. ಆದ್ದರಿಂದ ಮಾನವರಿಗೆ ದಾಸರಾಗಬೇಡಿ.


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


ಎಫ್ರಯಿಮನ ದೇವಜನರಿಗೆ ಪ್ರವಾದಿಯೇ ಕಾವಲುಗಾರ. ಆದರೂ ಅವನ ಹಾದಿಯಲ್ಲೆಲ್ಲ ಬೇಟೆಯ ಬಲೆ ಒಡ್ಡಲಾಗಿದೆ. ದೇವರ ಆಲಯದಲ್ಲೂ ಅವನಿಗೆ ಹಗೆತನ ಕಾದಿದೆ.


‘ಬಾಬಿಲೋನಿನ ಅರಸನು ನಿಮಗೂ ಈ ನಾಡಿಗೂ ವಿರುದ್ಧವಾಗಿ ಆಕ್ರಮಣ ನಡೆಸನು’ ಎಂದು ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು.


ನಾನು ನಿನ್ನ ಕೃತ್ಯಗಳನ್ನು ಬಲ್ಲೆ. ನಿನ್ನ ಎದುರಿನಲ್ಲಿ ಬಾಗಿಲೊಂದನ್ನು ತೆರೆದಿಟ್ಟಿದ್ದೇನೆ. ಅದನ್ನು ಮುಚ್ಚಲು ಯಾರಿಂದಲೂ ಸಾಧ್ಯವಾಗದು. ನಿನ್ನ ಶಕ್ತಿ ಅಲ್ಪವೆಂದು ನನಗೆ ಗೊತ್ತು. ಆದರೂ ನೀನು ನನ್ನನ್ನು ನಿರಾಕರಿಸದೆ ನನ್ನ ಉಪದೇಶವನ್ನು ಅನುಸರಿಸಿ ನಡೆದಿರುವೆ.


ಆದರೆ ಯಾವನು ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸುತ್ತಾನೋ, ಅವನನ್ನು ದೇವದೂತರ ಮುಂದೆ ನಿರಾಕರಿಸಲಾಗುವುದೆಂಬುದು ನಿಶ್ಚಯ.


ದುರಾಚಾರಿಗಳೇ, ಅವಿವೇಕಿಗಳೇ, ಸರ್ವೇಶ್ವರನ ಬಗ್ಗೆ ಹೀಗೆ ವರ್ತಿಸಬಹುದೇ? ಆತ ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೆ? ನಿಮ್ಮನ್ನೊಂದು ರಾಷ್ಟ್ರವಾಗಿ ಸ್ಥಾಪಿಸಿದವನಲ್ಲವೆ?


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.


“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ತಮ್ಮ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗ ಅಹಾಬ ಮತ್ತು ಮಾಸೇಯನ ಮಗ ಚಿದ್ಕೀಯ ಇವರ ವಿಷಯವಾಗಿ ಹೀಗೆನ್ನುತ್ತಾರೆ: ‘ಇಗೋ ನಾನು ಇವರನ್ನು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈಗೆ ಬಿಡುವೆನು. ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.


ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ.


ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು