Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:12 - ಕನ್ನಡ ಸತ್ಯವೇದವು C.L. Bible (BSI)

12 ಸಹಜ ಪ್ರವೃತ್ತಿಯಿಂದ ಬೇಟೆಗಾಗಿಯೂ ಕೊಲೆಗಾಗಿಯೂ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತೆ ಬಾಳುವ ಈ ದುರ್ಬೋಧಕರಾದರೋ ತಮಗೆ ತಿಳಿಯದವುಗಳನ್ನು ದೂಷಣೆಮಾಡುತ್ತಾರೆ. ಆ ಪ್ರಾಣಿಗಳು ನಾಶವಾಗುವಂತೆಯೇ ಇವರೂ ನಾಶವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸ್ವಾಭಾವಿಕವಾಗಿ ಸೆರೆಹಿಡಿಯಲ್ಪಟ್ಟು ನಾಶವಾಗುವುದಕ್ಕೆ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಿಸುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಸಂಪೂರ್ಣ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದರೆ ಸ್ವಾಭಾವಿಕವಾಗಿ ಬೇಟೆಗೂ ಕೊಲೆಗೂ ಹುಟ್ಟಿರುವ ವಿವೇಕಶೂನ್ಯ ಪಶುಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಹೇಳುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ತಾವೇ ಕೆಟ್ಟುಹೋಗಿ ತಮ್ಮ ದುಷ್ಪ್ರವರ್ತನೆಗೆ ಸರಿಯಾದ ದುಷ್ಫಲವನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ಈ ಸುಳ್ಳುಬೋಧಕರು ತಮಗೆ ಅರ್ಥವಾಗದ ಸಂಗತಿಗಳ ವಿರುದ್ಧ ಕೆಟ್ಟದ್ದನ್ನು ಮಾತಾಡುತ್ತಾರೆ. ಅವರು ವಿವೇಚಿಸದೆ ಕಾರ್ಯ ಮಾಡುವ ಪ್ರಾಣಿಗಳಂತಿದ್ದಾರೆ. ಹಿಡಿಯಲ್ಪಟ್ಟು ಕೊಲ್ಲಲ್ಪಡುವುದಕ್ಕಾಗಿಯೇ ಹುಟ್ಟಿರುವ ಕ್ರೂರಪ್ರಾಣಿಗಳಂತೆ ಅವರು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಬೇಟೆಗಾಗಿ ಹುಟ್ಟಿರುವ ವಿವೇಕಹೀನ ಮೃಗಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಮಾಡುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ಮೃಗಗಳಂತೆ ಸಂಪೂರ್ಣ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೆನಿ ಧರುನ್ ಜಿವ್ ಕಾಡುಕ್ ಸಾಟಿಚ್ ಜಲಮ್ ಘೆಟಲ್ಯಾ ಖ್ರುರ್ ಜನಾವರಾಂಚ್ಯಾ ಸಾರ್ಕೆ; ತೆಂಕಾ ಕಳಿನಸಲ್ಯಾ ವಿಶಯಾಚ್ಯಾ ವಿರೊಧ್ ಹೊವ್ನ್ ಬುರ್ಶೆಚ್ ಬೊಲ್ತ್ಯಾತ್ ತೆಂಕಾ ಜಾಳ್ವುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:12
17 ತಿಳಿವುಗಳ ಹೋಲಿಕೆ  

ಆದರೆ, ಈ ಜನರು ತಮಗೆ ಅರ್ಥವಾಗದ ಎಲ್ಲವನ್ನೂ ದೂಷಿಸುತ್ತಾರೆ. ವಿಚಾರ ಶೂನ್ಯ ಪ್ರಾಣಿಗಳಂತೆ ಸಹಜ ಪ್ರವೃತ್ತಿಯಿಂದ ಏನನ್ನು ತಿಳಿದುಕೊಳ್ಳುತ್ತಾರೋ ಅದರಿಂದಲೇ ನಾಶವಾಗುತ್ತಾರೆ.


ಸರ್ವೇಶ್ವರಾ, ನನ್ನ ಪರಿಚಯ ನಿಮಗಿದೆ ನಿಮ್ಮ ನೋಟ ನನ್ನ ಮೇಲಿದೆ. ನನ್ನ ಹೃದಯ ನಿಮ್ಮೊಂದಿಗಿದೆ, ಇದರ ಪರೀಕ್ಷೆ ನಿಮ್ಮಿಂದಾಗಿದೆ. ಅವರನ್ನೋ, ಕುರಿಗಳೋ ಎಂಬಂತೆ ಕೊಲೆಗೆ ಕರೆದೊಯ್ಯಿರಿ ವಧ್ಯದಿವಸದವರೆಗೂ ಅವರನ್ನು ವಿಂಗಡಿಸಿಡಿ.


ತಾವೇ ದುರಭ್ಯಾಸಗಳಿಗೆ ಗುಲಾಮರಾಗಿದ್ದರೂ ತಾವು ವಶಪಡಿಸಿಕೊಂಡವರಿಗೆ ಸ್ವಾತಂತ್ರ್ಯವನ್ನು ತರುವ ಮಾತುಕೊಡುತ್ತಾರೆ. ಒಬ್ಬನು ಯಾವುದಕ್ಕೆ ಸೋಲುತ್ತಾನೋ ಅದಕ್ಕೆ ಅವನು ಗುಲಾಮನಾಗುತ್ತಾನೆ.


ದೈಹಿಕ ವ್ಯಾಮೋಹವೆಂಬ ಸ್ವಭಾವದಲ್ಲಿ ಬಿತ್ತುವವನು ನಾಶವೆಂಬ ಫಲವನ್ನು ಕೊಯ್ಯುತ್ತಾನೆ. ಪವಿತ್ರಾತ್ಮ ಸ್ವಭಾವದಲ್ಲಿ ಬಿತ್ತುವವನು ಆತ್ಮದಿಂದ ನಿತ್ಯಜೀವವೆಂಬ ಫಲವನ್ನು ಕೊಯ್ಯುತ್ತಾನೆ.


ಇದನರಿಯನು ಪಶುಪ್ರಾಯನು I ಇದ ತಿಳಿಯನು ಬುದ್ಧಿಹೀನನು II


ನಮ್ಮ ಪಾಲಕರು ಪಶುಪ್ರಾಯರು ಸರ್ವೇಶ್ವರನ ಕಡೆಗೆ ಕಣ್ಣೆತ್ತದೆಹೋದರು. ಆ ಕಾರಣ ಅವರ ಕಾರ್ಯ ಸಾರ್ಥಕವಾಗಲಿಲ್ಲ ಚದರಿಹೋದವು ಅವರ ಹಿಂಡುಗಳೆಲ್ಲ.


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.


ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ.


ಯೇಸು ಸ್ವಾಮಿ ಪುನಃ ಅವರಿಗೆ, “ನಾನು ಹೊರಟುಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.


ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.


ಹೀಗಿರಲು ನಾನು, “ಈ ಜನರು ಬಡವರು, ಮೂಢರು, ಸರ್ವೇಶ್ವರನ ಮಾರ್ಗವನ್ನೂ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು.


ಮೂರ್ಖರೇ, ನಿಮಗೆ ಜ್ಞಾನೋದಯವಾಗುವುದಾವಾಗ? I ಪಶುಪ್ರಾಯರಾದ ಪ್ರಜೆಗಳು ಗಮನಿಸುವುದಾವಾಗ? II


ಬುದ್ಧಿಜೀವಿಗಳೂ ಸಾಯುವುದು ಖಂಡಿತ I ಮೂರ್ಖ, ಮಂದಗತಿಗಳ ಅಳಿವೂ ನಿಶ್ಚಿತ I ಅವರ ಸೊತ್ತು ಪರರ ಪಾಲು, ಇದೂ ಖಚಿತ II


ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ.


ಇವುಗಳೆಲ್ಲವೂ ಬಳಕೆಯಿಂದ ಅಳಿದುಹೋಗುತ್ತವೆ. ಅಲ್ಲದೆ, ಅವೆಲ್ಲವೂ ಮಾನವ ವ್ಯವಸ್ಥಿತ ಬೋಧನೆ ಹಾಗೂ ನಿಬಂಧನೆಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು