Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:13 - ಕನ್ನಡ ಸತ್ಯವೇದವು C.L. Bible (BSI)

13 ತಾವು ಮಾಡಿದ ಕೇಡಿಗೆ ಪ್ರತಿಯಾಗಿ ಕೇಡನ್ನೇ ಪಡೆಯುತ್ತಾರೆ. ಇವರು ಹಾಡುಹಗಲಿನಲ್ಲೇ ಏನುಬೇಕಾದರೂ ಮಾಡಿ, ದೈಹಿಕ ವ್ಯಾಮೋಹಗಳನ್ನು ತಣಿಸುವುದೇ ಸುಖವೆಂದು ಎಣಿಸುತ್ತಾರೆ. ವಂಚಕರಾದ ಇವರು ಪ್ರೇಮಭೋಜನಗಳಲ್ಲಿ ನಿಮ್ಮ ಸಂಗಡ ಸೇರಿ ತಿಂದುಕುಡಿಯುವಾಗ ನಿಮಗೆ ಕಳಂಕವನ್ನೂ ಮಾನನಷ್ಟವನ್ನೂ ತರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ ಅವಮಾನಕ್ಕೂ ಕಾರಣರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರಿಂದ ಅನೇಕ ಜನರು ಸಂಕಟಕ್ಕೆ ಒಳಗಾಗುವರು. ಅವರು ಮಾಡಿದ್ದಕ್ಕೆ ಅದೇ ಪ್ರತಿಫಲವಾಗಿರುವುದು. ಈ ಸುಳ್ಳುಬೋಧಕರು ಜನರೆಲ್ಲರ ಎದುರಿನಲ್ಲಿ ಕೆಟ್ಟದ್ದನ್ನು ಮಾಡಲು ಸಂತೋಷಿಸುತ್ತಾರೆ. ತಮ್ಮನ್ನು ಸಂತಸಗೊಳಿಸುವ ಕೆಟ್ಟಕಾರ್ಯಗಳಿಂದ ಅವರು ಆನಂದಿಸುತ್ತಾರೆ. ಅವರು ನಿಮ್ಮ ಮಧ್ಯದಲ್ಲಿ ಕೊಳಕಾದ ಕಲೆಗಳಂತಿದ್ದಾರೆ. ನೀವು ಒಟ್ಟಾಗಿ ಊಟ ಮಾಡುವಾಗ ಅವರು ನಿಮಗೆ ಅಪಮಾನಕರವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯನ್ನು ಹಗಲಲ್ಲಿ ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಕಳಂಕಕ್ಕೂ, ನಿಂದೆಗೂ ಕಾರಣರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅನಿ ತೆಂಚ್ಯಾ ವೈನಾ ಲೈ ಕಸ್ಟಾತ್ ಪಡ್ತಾತ್. ತೆನಿ ಕರ್ತಲ್ಯಾ ಚುಕೆಕ್ ತೆಂಕಾ ತೆಚ್ ದೆನೆ ಹೊವ್ನ್ ರ್‍ಹಾತಾ.ಝುಟಿ ಶಿಕಾಪಾಕಾರಿ ಲೊಕಾಂಚ್ಯಾ ಫಿಡ್ಯಾತ್ ಬುರ್ಶಿಕಾಮಾ ಕರುಕ್ ಖುಸಿ ಹೊತಾತ್.ಅಪ್ನಾಕ್ನಿ ಸಮಾಧಾನ ಕರ್ತಲ್ಯಾ ಬುರ್ಶಾ ಕಾಮಾನಿ ತೆನಿ ಆನಂದಿತ್ ಹೊತಾತ್ ತುಮಿ ಎಕಾಕ್ಡೆ ಗೊಳಾ ಹೊವ್ನ್ ಜೆವಾನ್ ಕರ್ತನಾ ತೆನಿ ತುಮ್ಕಾ ಅವಮಾನ್ ಸಾರ್ಕೆ ಹೊವ್ನ್ ಹಾತ್, ಅನಿ ತೆನಿ ತುಮ್ಚ್ಯಾ ಮದ್ದಿ ಬುರ್ಶಿ ಡಾಗಾ ಸಾರ್ಕೆ ಹೊವ್ನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:13
15 ತಿಳಿವುಗಳ ಹೋಲಿಕೆ  

ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.


ಈಗಲಾದರೋ ನೀವು ಮುಂಚಿನಂತೆ ಲಂಪಟ ಜೀವನದಲ್ಲಿ ಅವರೊಡನೆ ಬೆರೆಯದಿರುವುದನ್ನು ಕಂಡು ಸುಖೇದಾಶ್ಚರ್ಯದಿಂದ ನಿಮ್ಮನ್ನು ದೂಷಿಸುತ್ತಾರೆ.


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.


ಅವಳು ಅಳೆದ ಅಳತೆಯಲ್ಲೇ ನೀವು ಅವಳಿಗೆ ಅಳೆಯಿರಿ; ಅವಳ ಕೃತ್ಯಗಳಿಗೆ ಇಮ್ಮಡಿಯಾಗಿ ಹಿಂದಿರುಗಿಸಿರಿ ಬೆರೆಸಿಕೊಡಿ ದ್ವಿಗುಣದಿ ಅವಳೇ ಬೆರೆಸಿದ ಮದ್ಯದ ಬಟ್ಟಲಲಿ.


ಇವರು ಹಾದಿತಪ್ಪಿದವರು, ಸನ್ಮಾರ್ಗವನ್ನು ತ್ಯಜಿಸಿದವರು; ಬೆಯೋರನ ಮಗ ಬಿಳಾಮನ ದಾರಿಯನ್ನು ಹಿಡಿದವರು.


ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು.


ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.


ನನ್ನ ಪ್ರಿಯಳೇ, ಸರ್ವಾಂಗಸುಂದರಿಯೇ, ನಿನ್ನೊಳು ಯಾವ ಕಳಂಕವು ಇಲ್ಲದಿರುವೆ.


ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು