2 ಪೇತ್ರನು 2:17 - ಕನ್ನಡ ಸತ್ಯವೇದವು C.L. Bible (BSI)17 ಈ ಕಳ್ಳಬೋಧಕರು ನೀರಿಲ್ಲದ ಬಾವಿಗಳು, ಬಿರುಗಾಳಿಯಿಂದ ಚದರಿಹೊಗುವ ಮಂಜುಮೋಡಗಳು, ಕಾರ್ಗತ್ತಲಿನ ಕಂದಕವೇ ಅವರ ಪಾಲಿಗೆ ಕಟ್ಟಿಟ್ಟ ಬುತ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇವರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮಂಜೂ ಆಗಿದ್ದಾರೆ; ಇಂಥವರ ಪಾಲಿಗೆ ಕಾರ್ಗತ್ತಲೆ ಇಟ್ಟಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈ ಸುಳ್ಳುಬೋಧಕರು ನೀರಿಲ್ಲದ ಒರತೆಗಳಂತಿದ್ದಾರೆ. ಅವರು ಬಿರುಗಾಳಿಯಿಂದ ಬಡಿದುಕೊಂಡು ಹೋಗುವ ಮೋಡಗಳಂತಿದ್ದಾರೆ. ಅವರಿಗಾಗಿ ಒಂದು ಕಗ್ಗತ್ತಲಾದ ಸ್ಥಳವನ್ನು ಕಾದಿರಿಸಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಈ ಸುಳ್ಳು ಬೋಧಕರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ಕಾರ್ಗತ್ತಲು ಇಟ್ಟಿರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತಿ ಲೊಕಾ ವ್ಹಾಂಕ್ಡ್ಯಾ ಝರ್ಯಾಚ್ಯಾ ಸಾರ್ಕೆ ಹಾತ್, ಅನಿ ವಾರ್‍ಯಾನ್ ಹುಡ್ವುನ್ ಘೆವ್ನ್ ಜಾತಲ್ಲ್ಯಾ ಮೊಡಾಂಚ್ಯಾ ಸಾರ್ಕೆ ಹಾತ್, ದೆವಾನ್ ತೆಚ್ಯಾ ಸಾಟ್ನಿ ದಾಟ್ ಕಾಳ್ಕಾಚೊ ಜಾಗೊ ತಯಾರ್ ಕರುನ್ ಥವಲ್ಲೊ ಹಾಯ್. ಅಧ್ಯಾಯವನ್ನು ನೋಡಿ |