Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:21 - ಕನ್ನಡ ಸತ್ಯವೇದವು C.L. Bible (BSI)

21 ಅವರು ನೀತಿಯ ಮಾರ್ಗವನ್ನು ಅರಿತುಕೊಂಡು ತಾವು ಸ್ವೀಕರಿಸಿದ ಪವಿತ್ರ ಆಜ್ಞೆಯನ್ನು ತಿರಸ್ಕರಿಸುವುದಕ್ಕಿಂತ ಅದನ್ನು ಅರಿಯದವರಾಗಿದ್ದರೆ ಒಳ್ಳೆಯದಾಗುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರು ನೀತಿಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯನ್ನು ಬಿಟ್ಟು ದೂರ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಹೋಗಿದ್ದರೆ ಚೆನ್ನಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರು ನೀತಿ ಮಾರ್ಗವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದಿದ್ದರೆ ಮೇಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಹೌದು, ಆ ಜನರು ಸರಿಯಾದ ಮಾರ್ಗವನ್ನು ತಿಳಿಯದೆ ಹೋಗಿದ್ದರೇ ಒಳ್ಳೆಯದಾಗುತ್ತಿತ್ತು. ಸರಿಯಾದ ಮಾರ್ಗವನ್ನು ಅರಿತುಕೊಂಡು, ಪವಿತ್ರ ಬೋಧನೆಗಳಿಗೆ ವಿಮುಖರಾಗುವುದಕ್ಕಿಂತ ಅದನ್ನು ತಿಳಿದುಕೊಳ್ಳದಿದ್ದರೇ ಚೆನ್ನಾಗಿರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವರು ನೀತಿಮಾರ್ಗವನ್ನು ತಿಳಿದುಕೊಂಡ ಮೇಲೆ ತಮಗೆ ಕೊಡಲಾದ ಪವಿತ್ರ ಆಜ್ಞೆಯಿಂದ ತೊಲಗಿ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತ್ಯಾ ಲೊಕಾನಿ ನಿತಿವಂತ್ಪಾನಾಚಿ ವಾಟ್ ಕಳ್ವುನ್ ಘೆವ್ನ್ ಅಪ್ನಾಕ್ ದಿವ್ನ್ ಹೊಲ್ಲ್ಯಾ ಪವಿತ್ರ್ ಹುಕುಮಾಕ್ನಿ ಸೊಡುನ್ ಜಾತಲ್ಯಾಕಿಂತಾ ಬರಿ ಹೊತ್ತಿ ವಾಟ್ ಕಳಿ ನಸ್ತಾನಾ ರಾಲ್ಯಾರುಚ್ ಬರೆ ಹೊಯ್ ಹೊತ್ತೆ, ಖರಿ ವಾಟ್ ಕಳ್ವುನ್ ಘೆವ್ನ್ ಬಿ ಪವಿತ್ರ್ ಶಿಕಾಪಾಕ್ನಿ ಧುರ್ ಕರ್ತಲ್ಯಾಕಿಂತಾ ತೆ ಕಳ್ವುನ್ ಗೆಯ್ ನಸ್ತಾನಾ ಹೊತ್ತೆಚ್ ಬರೆ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:21
24 ತಿಳಿವುಗಳ ಹೋಲಿಕೆ  

ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಒಬ್ಬನು ಒಳ್ಳೆಯದನ್ನು ಮಾಡಬೇಕೆಂದು ತಿಳಿದಿದ್ದೂ ಅದನ್ನು ಮಾಡದಿದ್ದರೆ ಅದು ಅವನಿಗೆ ಪಾಪವಾಗಿರುತ್ತದೆ.


ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.


“ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ.


ನಾನು ಬಂದು ಅವರಿಗೆ ಬೋಧನೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳು ಎಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ಅವರ ದೋಷಕ್ಕೆ ಯಾವ ನೆಪವನ್ನೂ ಒಡ್ಡುವಂತಿಲ್ಲ.


ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ.


ಯೇಸು, “ನೀವು ಕುರುಡರೇ ಆಗಿದ್ದರೆ ಪಾಪಿಗಳಾಗುತ್ತಿರಲಿಲ್ಲ. ಆದರೆ, ‘ನಮಗೆ ಕಣ್ಣು ಕಾಣುತ್ತದೆ,’ ಎಂದು ಹೇಳಿಕೊಳ್ಳುತ್ತೀರಿ; ಆದ್ದರಿಂದ ನೀವು ಪಾಪಿಗಳಾಗಿದ್ದೀರಿ,” ಎಂದರು.


ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”


ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು ಬಂದನು. ನೀವು ಆತನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಆತನನ್ನು ನಂಬಿದರು. ಇದನ್ನು ಕಂಡ ಮೇಲೂ ನೀವು ಪಶ್ಚಾತ್ತಾಪಪಡಲಿಲ್ಲ, ಯೊವಾನ್ನನನ್ನು ನಂಬಲೂ ಇಲ್ಲ.


ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.


ಧರ್ಮಶಾಸ್ತ್ರ ಪವಿತ್ರವಾದುದು. ಅಂತೆಯೇ, ಆಜ್ಞೆಯೂ ಪವಿತ್ರವಾದುದು. ನ್ಯಾಯವಾದುದು ಮತ್ತು ಹಿತಕರವಾದುದು.


ಇವಳೂ ಅಪವಿತ್ರಳಾದುದ್ದನ್ನು ಕಂಡೆನು. ಇಬ್ಬರೂ ಒಂದೇ ಮಾರ್ಗವನ್ನು ಹಿಡಿದಿದ್ದರು.


ಸನ್ಮಾರ್ಗದಿಂದ ಜೀವಲಾಭ; ದುರ್ಮಾರ್ಗದಿಂದ ಮರಣ ಪ್ರಾಪ್ತಿ.


ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II


ನಾ ಕೇಳುತ್ತಿರುವೆನು, ಪ್ರಭು ಹೇಳುವುದನು I ತನ್ನ ಜನರಿಗಾತ ನುಡಿವುದು ಶಾಂತಿಯನು I ಇನ್ನಾದರು ತೊರೆಯೋಣ ಮೂರ್ಖತೆಯನು II


ನಾನು ಶಿಷ್ಟನಿಗೆ, ನೀನು ಬಾಳೇ ಬಾಳುವೆ ಎಂದು ಹೇಳಲು, ಅವನು ತನ್ನ ಪುಣ್ಯದ ಮೇಲೆ ಭರವಸೆಯಿಟ್ಟು ಪಾಪಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರದು; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.


ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ.


ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಯಾವ ದೋಷಾರೋಪಣೆಗೂ ಎಡೆಗೊಡದೆ ಈ ಕಟ್ಟಳೆಗಳೆಲ್ಲವನ್ನೂ ಪ್ರಾಮಾಣಿಕತೆಯಿಂದ ಅನುಸರಿಸು:


ನಾವು ಸತ್ಯವನ್ನು ಅರಿತವರಾದ ಮೇಲೂ ಬೇಕುಬೇಕಾಗಿ ಪಾಪಮಾಡುತ್ತಲೇ ಇದ್ದರೆ, ಪಾಪಪರಿಹಾರಕ್ಕೆ ಇನ್ನು ನಮಗೆ ಬೇರೆ ಯಾವ ಬಲಿಯೂ ಇರುವುದಿಲ್ಲ;


ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ.


ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು