Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:3 - ಕನ್ನಡ ಸತ್ಯವೇದವು C.L. Bible (BSI)

3 ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಲೋಕಾದಿಯಿಂದ ಅಂಥವರಿಗೆ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವದು, ಅವರ ನಾಶವು ತೂಕಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆನಿ ಪೈಸಾಚ್ಯಾ ಆಶ್ಯಾನಿ ಅಪ್ನಾಚೊ ಫಾಯ್ದೊ ಕರುನ್ಗೆತಾತ್ ತೆಂಚ್ಯಾ ವರ್ತಿ ಯೆತಲಿ ಶಿಕ್ಷಾ ತೆಂಚ್ಯಾ ವಿರೊದ್ ಅದ್ದಿಚ್ ಸಾಂಗುನ್ ಹೊಲಾ ತಿ ಶಿಕ್ಷಾ ತೆಂಕಾ ಚುಕಿಚ್ ನಾ, ಅನಿ ತೆಂಚೊ ನಾಶ್ ತೆಂಚ್ಯಾಕ್ನಾ ಧುರ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:3
43 ತಿಳಿವುಗಳ ಹೋಲಿಕೆ  

ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.


ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.


ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ.


ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.


ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು.


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


ಸಭಾಸೇವಕರು ಸಜ್ಜನರಾಗಿರಬೇಕು. ಎರಡು ನಾಲಿಗೆಯುಳ್ಳವರೂ ಕುಡುಕರೂ ಲಾಭಕೋರರೂ ಆಗಿರಬಾರದು.


ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು.


ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ ಜನರ ಗುಂಪೊಂದು ಕಾಣಿಸಿಕೊಂಡಿತು. ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನು ಅವರಿಗೆ ಮುಂದಾಳಾಗಿ ಬಂದಿದ್ದನು. ಅವನು ಯೇಸುವಿಗೆ ಮುದ್ದಿಡಲು ಹತ್ತಿರ ಬಂದಾಗ,


ಆದುದರಿಂದ ಸೂಕ್ತ ಸಂದರ್ಭ ಹುಡುಕತೊಡಗಿದರು. ಯೇಸುವನ್ನು ರಾಜ್ಯಪಾಲನ ವಶಕ್ಕೂ ನ್ಯಾಯಾಧಿಕಾರಕ್ಕೂ ಒಪ್ಪಿಸುವ ಉದ್ದೇಶದಿಂದ ಗೂಢಚಾರರನ್ನು ಕಳುಹಿಸಿದರು. ಇವರು ನಿಷ್ಕಪಟಿಗಳಂತೆ ನಟಿಸುತ್ತಾ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನಿಸಿದರು.


ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.


“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಬರುತಿಹನು ದೇವನು ಎದೋಮಿನಿಂದ ಆ ಪರಮಪಾವನಸ್ವಾಮಿ ಪಾರಾನ್ ಪರ್ವತದಿಂದ. ಆವರಿಸುವುದು ಆತನ ಪ್ರಭಾವ ಆಕಾಶಮಂಡಲವನು ತುಂಬಿಹುದು ಆತನ ಮಹಿಮೆ ಭೂಮಂಡಲವನು.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.”


ಆದುದರಿಂದಲೇ ಇವರ ಹೆಂಡತಿಯರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.


ದೊಡ್ಡ ಕುಲವಾಗಿಸುವೆನು ಚಿಕ್ಕವನಿಂದ ಬಲಿಷ್ಠ ರಾಷ್ಟ್ರವಾಗಿಸುವೆನು ದುರ್ಬಲನಿಂದ. ಸಾಧಿಸುವೆನು ಇದನು ಕ್ಲುಪ್ತಕಾಲದೊಳು ಸರ್ವೇಶ್ವರನಾದ ನಾನು, ಶೀಘ್ರದೊಳು.


ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.


“ಸ್ವಾಮಿ ತ್ವರೆಮಾಡಲಿ, ತನ್ನ ಕಾರ್ಯವನ್ನು ತುರ್ತಾಗಿ ನಡೆಸಲಿ, ನೋಡೋಣ; ಇಸ್ರಯೇಲಿನ ಪರಮ ಪಾವನ ಸ್ವಾಮಿಯ ಯೋಜನೆ ಶೀಘ್ರವಾಗಿ ಕೈಗೂಡಲಿ, ಆಗ ಪರಿಗ್ರಹಿಸೋಣ” ಎಂದು ಹೇಳುವ ಜನರಿಗೆ ಧಿಕ್ಕಾರ !


“ಮುದುರಿಕೊಳ್ಳುತ್ತಿದ್ದರಾ ಎದುರಾಳಿಗಳು ಅವರ ಮುಂದೆ I ಅಳಿಯದೆ ಉಳಿದುಕೊಳ್ಳುತ್ತಿತ್ತು ಅವರಿಗಾದ ದಂಡನೆ ಮುಗಿವಿಲ್ಲದೆ, II


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ದೇಶಾಂತರದವರೂ ಮುದುರಿಕೊಂಡರು ನನ್ನ ಮುಂದೆ I ವಿಧೇಯರಾದರೆನಗೆ ನನ್ನ ಸುದ್ದಿ ಕೇಳಿದ ಮಾತ್ರಕೆ II


“ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


ಅನಾಥನನ್ನು ಕೊಂಡುಕೊಳ್ಳಲು ಚೀಟುಹಾಕುತ್ತೀರಿ ಆಪ್ತನನ್ನು ಮಾರಿಬಿಡಲು ವ್ಯಾಪಾರಮಾಡುತ್ತೀರಿ.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! (ವಿಧವೆಯರ ಮನೆಮಾರುಗಳನ್ನು ನೀವು ನುಂಗಿಬಿಡುತ್ತೀರಿ. ನಟನೆಗಾಗಿ ಉದ್ದುದ್ದ ಜಪತಪಗಳನ್ನು ಮಾಡುತ್ತೀರಿ, ನೀವು ಅತಿ ಕಠಿಣವಾದ ದಂಡನೆಗೆ ಗುರಿಯಾಗುವಿರಿ).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು