Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:6 - ಕನ್ನಡ ಸತ್ಯವೇದವು C.L. Bible (BSI)

6 ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ಸೊದೋಮ್‍ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಮುಂದೆ ಭಕ್ತಿಹೀನರಾಗಿ ಬದುಕುವವರ ಗತಿ ಇಂಥದೆಂದು ಸೂಚಿಸುವದಕ್ಕಾಗಿ ಅವುಗಳಿಗೆ ನಾಶನವನ್ನು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ಸೊದೋಮ್, ಗೊಮೋರ ಎಂಬ ಕೆಟ್ಟ ಪಟ್ಟಣಗಳನ್ನು ದಂಡಿಸಿದನು. ಆತನು ಆ ಪಟ್ಟಣಗಳಲ್ಲಿ ಏನೂ ಉಳಿಯದಂತೆ, ಸುಟ್ಟು ಬೂದಿಮಾಡಿದನು. ತನಗೆ ವಿರುದ್ಧವಾಗಿರುವ ಜನರಿಗೆ ಏನಾಗುತ್ತದೆ ಎಂಬುದಕ್ಕೆ ಆತನು ಆ ಪಟ್ಟಣಗಳನ್ನು ನಿದರ್ಶನಗಳನ್ನಾಗಿ ಇಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಸೊದೊಮ್ ಅನಿ ಗೊಮೊರ್ ಹ್ಯಾ ಶಾರಾಕ್ನಿ ತೆನಿ ಶಿಕ್ಷಾ ದಿಲ್ಲ್ಯಾನ್ ಅನಿ ಜಾಳ್ವುನ್ ರಕ್ಕಾ ಕರುನ್ ಟಾಕ್ಲ್ಯಾನ್ ದೆವ್ ಅನಿ ದೆವಸ್ಪಾನ್ ನಸ್ತಾನಾ ಚಲ್ತಲ್ಯಾಕ್ನಿ ಹೆ ಎಕ್ ಉದಾರನ್ ಕರುನ್ ಥವ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:6
20 ತಿಳಿವುಗಳ ಹೋಲಿಕೆ  

ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.


ಇವರನ್ನು ಹಾಗು ಕೋರಹನನ್ನು ಭೂಮಿ ಬಾಯ್ದೆರೆದು ನುಂಗಿಬಿಟ್ಟಿತು. ಆ ಪಂಗಡದವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ಬೆಂಕಿ ಸುಟ್ಟು ಹಾಕಿತು. ಹೀಗೆ ಇಸ್ರಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು.


ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.


ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”


ಯಾರೂ ನೆಲಸಲಾಗಲಿಲ್ಲ ನಾನು ಕೆಡವಿದಾ ಸೊದೋಮ್ ಗೊಮೋರ ನಗರಗಳಲ್ಲಿ ಅದರ ಸುತ್ತಮುತ್ತಣ ಊರುಗಳಲ್ಲಿ ಯಾರೂ ವಾಸಿಸರು ಯಾವ ನರಪ್ರಾಣಿಯೂ ನೆಲಸದು, ಬಾಬಿಲೋನಿನಲ್ಲಿ.


ಬಾಬಿಲೋನ್ ರಾಜ್ಯಗಳಿಗೆ ಶಿರೋಮಣಿ, ಕಸ್ದೀಯರ ಭವ್ಯಭೂಷಣ. ಆದರೆ ದೇವರಾದ ನಾನು ಸೊದೋಮ್ ಮತ್ತು ಗೊಮೋರಾ ನಾಡುಗಳನ್ನು ನಾಶಮಾಡಿದಂತೆ ಇದನ್ನೂ ಕೆಡಿಸಿ ನಾಶಮಾಡುವೆನು.


“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


ಸೊದೋಮ್ - ಗೊಮೋರ ಹಾಗೂ ಆ ಬಯಲುಸೀಮೆಯತ್ತ ಅವನು ಕಣ್ಣುಹಾಯಿಸಿದಾಗ, ಇಗೋ, ಆ ಪ್ರದೇಶದಿಂದ ಹೊಗೆ, ದೊಡ್ಡ ಆವಿಗೆಯ ಹೊಗೆಯಂತೆ ಭುಗಿಲೇರುತ್ತಿತ್ತು.


ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.


ಆ ಧೂಪಾರತಿಗಳು ಸರ್ವೇಶ್ವರನ ಸನ್ನಿಧಿಗೆ ತರಲಾದವುಗಳು. ಈ ಕಾರಣ ಪವಿತ್ರವಾದುವು. ಆದುದರಿಂದ ಅವುಗಳನ್ನು ತಗಡುಗಳಾಗಿ ತಟ್ಟಿ ಬಲಿಪೀಠಕ್ಕೆ ಮುಚ್ಚಳವನ್ನಾಗಿ ಮಾಡಿಸು. ಹೀಗೆ ಅವು ಇಸ್ರಯೇಲರಿಗೆ ನೆನಪು ಹುಟ್ಟಿಸುವ ಗುರುತುಗಳಾಗುವುವು,” ಎಂದು ಹೇಳಿದರು.


ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.


ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.


ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು.


ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ - “ಸರ್ವಶಕ್ತ ಸರ್ವೇಶ್ವರ ನಮ್ಮ ಸಂತತಿಯಲ್ಲಿ ಕೆಲವರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ಗತಿಯೇ ನಮ್ಮದಾಗುತ್ತಿತ್ತು,” ಎಂದು ಹೇಳಿದ್ದಾನೆ.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು