Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 2:9 - ಕನ್ನಡ ಸತ್ಯವೇದವು C.L. Bible (BSI)

9 ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕರ್ತನು ಭಕ್ತರನ್ನು ಕಷ್ಟಗಳೊಳಗಿಂದ ತಪ್ಪಿಸುವದಕ್ಕೂ ದುರ್ಮಾರ್ಗಿಗಳನ್ನು ನ್ಯಾಯತೀರ್ಪಿನ ದಿನದ ತನಕ ಶಿಕ್ಷಾನುಭವದಲ್ಲಿ ಇಡುವದಕ್ಕೂ ಬಲ್ಲವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೌದು, ಪ್ರಭುವಾದ ದೇವರು ತನ್ನ ಭಕ್ತರನ್ನು ತೊಂದರೆಗಳಿಂದ ಯಾವಾಗಲೂ ರಕ್ಷಿಸುತ್ತಾನೆ. ಆತನು ದುಷ್ಟಜನರನ್ನು ನ್ಯಾಯತೀರ್ಪಿನ ದಿನ ಬರುವತನಕ ದಂಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಧನಿ ದೆವ್ ಅಪ್ಲ್ಯಾ ಲೊಕಾಕ್ನಿ ತರಾಸಾತ್ನಾ ರಾಕ್ವನ್ ಕರ್ತಲೊ ಹೊವ್ನ್ ಹಾಯ್ ,ಅನಿ ತೊ ಬುರ್ಶಾ ಲೊಕಾಕ್ನಿ ಝಡ್ತಿ ಕರ್ತಲೊ ಎಳ್ ಯೆಯ್ ಪತರ್ ತೆಂಕಾ ಶಿಕ್ಷಾ ದಿವ್ನ್ಗೆತ್ ರ್‍ಹಾತಾ ಮನ್ತಲೆ ಖರೆಚ್ ಹಾಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 2:9
22 ತಿಳಿವುಗಳ ಹೋಲಿಕೆ  

ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಕ್ರಿಸ್ತಯೇಸುವಿನ ಅನುಯಾಯಿಯಾಗಿ ಭಕ್ತಿಯಿಂದ ಬಾಳಲು ಆಶಿಸುವ ಪ್ರತಿಯೊಬ್ಬನೂ ಹಿಂಸೆಗೊಳಗಾಗುತ್ತಾನೆ.


ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


ಸರ್ವೇಶ್ವರ ಒಂದೊಂದನ್ನೂ ಸೃಷ್ಟಿಸಿರುವುದು ಒಂದು ಗುರಿಯಿಟ್ಟೇ ಹೌದು; ಕೆಡುಕರನ್ನು ಉಂಟುಮಾಡಿರುವುದು ಕೇಡಿನ ದಿನಕ್ಕಾಗಿಯೇ.


ಐದಾರು ಇಕ್ಕಟ್ಟುಗಳಿಂದ ನಿನ್ನನು ಬಿಡಿಸುವನು ಏಳನೆಯದು ಬಂದರೂ ನಿನ್ನನು ಕೇಡು ಮುಟ್ಟದು.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಭಕ್ತನನು ಪ್ರಭು ಪ್ರತ್ಯೇಕಿಸಿಕೊಂಡನೆಂದು ತಿಳಿದುಕೊ I ನಾ ಮೊರೆಯಿಟ್ಟಾಗ ಆತ ಕಿವಿಗೊಡುವನೆಂದು ಅರಿತುಕೊ II


ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II


ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.


ನೆರವಾಗು ಪ್ರಭು, ಭಕ್ತರಿಲ್ಲವಾದರು ಜಗದೊಳು I ಶರಣರಾರೂ ಕಾಣಸಿಗರೆನಗೆ ನರಮಾನವರೊಳು II


ಪ್ರಭು ಬಿಡನವನನು ದುಷ್ಟ ಶಕ್ತಿಯ ವಶಕ್ಕೆ I ಗುರಿಪಡಿಸನು ನ್ಯಾಯಸ್ಥಾನದ ಶಿಕ್ಷೆಗೆ II


ಮಾತಿನ ದೋಷದಿಂದ ಕೆಡುಕನು ಬೋನಿಗೆ ಬೀಳುವನು; ನೀತಿವಂತನು ಆಪತ್ತಿನಿಂದ ತಪ್ಪಿಸಿಕೊಳ್ಳುವನು.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.


ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.


ಆದ್ದರಿಂದ ನೀನೂ ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ ನಾಳೆ ಬೆಳಿಗ್ಗೆ ಎದ್ದು ಹೊತ್ತುಮೂಡಿದ ಕೂಡಲೆ ಹಿಂದಿರುಗಿಹೋಗಿ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು