Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:11 - ಕನ್ನಡ ಸತ್ಯವೇದವು C.L. Bible (BSI)

11 ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11-12 ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದರಿಂದ ನೀವು ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಹಾರೈಸುತ್ತಾ ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕಲ್ಲಾ; ಆ ದಿನದಲ್ಲಿ ಆಕಾಶಮಂಡಲವು ಬೆಂಕಿ ಹತ್ತಿ ಲಯವಾಗಿ ಹೋಗುವದು, ಸೂರ್ಯಚಂದ್ರ ನಕ್ಷತ್ರಗಳು ಉರಿದು ಕರಗಿ ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ನಿಮಗೆ ಹೇಳಿದಂತಹ ರೀತಿಯಲ್ಲಿಯೇ ಎಲ್ಲವೂ ನಾಶಗೊಳ್ಳುತ್ತವೆ. ಆದ್ದರಿಂದ ನೀವು ಎಂತಹ ಜನರಾಗಿರಬೇಕು? ನೀವು ಪರಿಶುದ್ಧರಾಗಿರಬೇಕು ಮತ್ತು ಭಕ್ತಿವುಳ್ಳವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವುದರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಸಗ್ಳ್ಯೆ ಅಸೆ ನಾಶ್ ಹೊವ್ನ್ ಜಾತಲೆ ಹಾಯ್, ತೆಚ್ಯಾ ಸಾಟ್ನಿ ತೆನಿ ಬರೊ ಪವಿತ್ರ್ ಜಿವನ್ ಕರುಕ್ ಪಾಜೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:11
27 ತಿಳಿವುಗಳ ಹೋಲಿಕೆ  

ಅದಕ್ಕೆ ಬದಲು ನಿಮ್ಮನ್ನು ಕರೆದ ದೇವರು ಪವಿತ್ರರಾಗಿರುವಂತೆ ನೀವೂ ನಿಮ್ಮ ನಡೆನುಡಿಯಲ್ಲಿ ಪವಿತ್ರರಾಗಿರಿ.


ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ದೇವರ ಆ ದಿನವನ್ನು ಎದುರುನೋಡುತ್ತಾ ಅದು ಬೇಗನೆ ಬರಲೆಂದು ಹಾರೈಸಬೇಕು. ಆ ದಿನ, ಆಕಾಶಮಂಡಲವು ಅಗ್ನಿಯಿಂದ ಉರಿದುಹೋಗುವುದು; ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಶಾಖದಿಂದ ಕರಗಿಹೋಗುವುವು.


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದಾನೋ? ಅಂಥವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆನುಡಿಯಲ್ಲಿ ತೋರ್ಪಡಿಸಲಿ.


ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ.


ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.


ಪುರದ್ವಾರವೇ, ಗೋಳಾಡು; ಪಟ್ಟಣವೇ, ಬೊಬ್ಬೆಯಿಡು, ಫಿಲಿಷ್ಟಿಯವೇ, ಕರಗಿಹೋಗು, ಉತ್ತರದಿಂದ ಬರುತ್ತಿದೆ ಧೂಮಧೂಳಿ ಆ ದಂಡಿನಲ್ಲಿಲ್ಲ ನೋಡು, ಯಾವ ಹೇಡಿ.


ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.


ಯಾರಾದರೂ ನಮ್ಮ ಧಾರ್ಮಿಕ ಉಪದೇಶವನ್ನು ಅನುಸರಿಸದೆ, ಪ್ರಭು ಯೇಸುಕ್ರಿಸ್ತರ ನೈಜ ಬೋಧನೆಯನ್ನು ಒಪ್ಪಿಕೊಳ್ಳದೆ ಭಿನ್ನ ಬೋಧನೆಯನ್ನು ಮಾಡುವುದಾದರೆ, ಅಂಥವನು ಅಹಂಭಾವಿ ಹಾಗೂ ಅಜ್ಞಾನಿಯೇ ಸರಿ.


ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.


ಆಗ ವಾತಾವರಣ ಪ್ರಶಾಂತವಾಯಿತು. ಶಿಷ್ಯರು ನಿಬ್ಬೆರಗಾದರು. “ಗಾಳಿಯೂ ಸರೋವರವೂ ಇವರು ಹೇಳಿದ್ದಂತೆ ಕೇಳಬೇಕಾದರೆ ಇವರೆಂತಹ ವ್ಯಕ್ತಿಯಾಗಿರಬೇಕು!” ಎಂದುಕೊಂಡರು.


ಇಳೆಯು ಭೂನಿವಾಸಿಗಳ ಸಮೇತ ತಳಮಳಗೊಳ್ಳಲು I ಅದರ ತಳಹದಿಯ ಬಿಗಿಹಿಡಿದಿರುವವನು ನಾನಿಲ್ಲದಿನ್ನಾರು? II


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ಮರುಕ್ಷಣವೇ ತಾನು ಹೇಗಿದ್ದೇನೆಂದು ಮರೆತುಬಿಡುವವನಿಗೆ ಸಮಾನನು.


ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.


ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.


ಇರುವುದರಲ್ಲೇ ಸಂತೃಪ್ತನಾಗಿರುವವನು ಭಕ್ತಿಯಲ್ಲಿ ನಿಜಕ್ಕೂ ಶ್ರೀಮಂತನಾಗಿರುತ್ತಾನೆ.


ಬಿರುಕು ಬಿಡುವುದು ಭೂಮಿ ಸೀಳುಪಾಳಾಗಿ ಕತ್ತರಿಸುವುದು ಕದಲಿಹೋಗಿ.


ಸುಜ್ಞಾನಕ್ಕೆ ಸಂಯಮವನ್ನು, ಸಂಯಮಕ್ಕೆ ಸ್ಥೈರ್ಯವನ್ನು, ಸ್ಥೈರ್ಯಕ್ಕೆ ಸದ್ಭಕ್ತಿಯನ್ನು ಕೂಡಿಸಿರಿ.


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಹಿಡಿದಿಹರು ದುರುಳರು ಕತ್ತಿಯನು, ಎತ್ತಿಹರು ಬಿಲ್ಲನು I ಕೆಡಹಲು ದೀನದಲಿತರನು, ಕೊಲ್ಲಲು ಸಜ್ಜನರನು II


ಇದೆಂಥ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ.


ಇರುಳು ಬಹುಮಟ್ಟಿಗೆ ಕಳೆಯಿತು. ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕೃತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.


ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು