Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:12 - ಕನ್ನಡ ಸತ್ಯವೇದವು C.L. Bible (BSI)

12 ದೇವರ ಆ ದಿನವನ್ನು ಎದುರುನೋಡುತ್ತಾ ಅದು ಬೇಗನೆ ಬರಲೆಂದು ಹಾರೈಸಬೇಕು. ಆ ದಿನ, ಆಕಾಶಮಂಡಲವು ಅಗ್ನಿಯಿಂದ ಉರಿದುಹೋಗುವುದು; ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಶಾಖದಿಂದ ಕರಗಿಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನೀವು ದೇವರ ದಿನಕ್ಕಾಗಿ ಅಪೇಕ್ಷಿಸುತ್ತಾ ಎದುರು ನೋಡುತ್ತಿರಬೇಕು. ಆ ದಿನವು ಬಂದಾಗ, ಆಕಾಶವು ಬೆಂಕಿಯಿಂದ ನಾಶವಾಗುತ್ತದೆ ಮತ್ತು ಆಕಾಶದಲ್ಲಿರುವ ಪ್ರತಿಯೊಂದೂ ಬೆಂಕಿಯಿಂದ ಕರಗಿ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿಹತ್ತಿ ಲಯವಾಗಿ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಧನಿಯಾಚ್ಯಾ ದಿಸಾಕ್ ರಾಕುನ್ಗೆತ್ ಬಗುನ್ಗೆತ್ ರ್‍ಹಾವ್ಚೆ, ತೊ ದಿಸ್ ಯೆಲ್ಲ್ಯಾ ತನ್ನಾ ಮಳಬ್ ಆಗಿನ್ ನಾಶ್ ಹೊತಾ, ಅನಿ ಮಳ್ಬಾತ್ ಹೊತ್ತೆ ಹರ್ ಎಕ್ ರಕ್ಕಾ ಹೊವ್ನ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:12
17 ತಿಳಿವುಗಳ ಹೋಲಿಕೆ  

ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.


ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.


ಬೆಂಕಿಗೆ ಕರಗುವ ಮೇಣದಂತೆ ಇಳಿಜಾರು ಪ್ರದೇಶದ ನೀರು ನೆಲವನ್ನು ಕೊರೆವಂತೆ ಕರಗಿಹೋಗುವುವು ಆತನ ಪಾದದಡಿ ಪರ್ವತಗಳು; ಸೀಳಿಹೋಗುವುವು ಕೊಲ್ಲಿಗಳು.


ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ನಿತ್ಯಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸುಕ್ರಿಸ್ತರನ್ನು ಎದುರುನೋಡುತ್ತಾ ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ.


ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.


ಬಿರುಕು ಬಿಡುವುದು ಭೂಮಿ ಸೀಳುಪಾಳಾಗಿ ಕತ್ತರಿಸುವುದು ಕದಲಿಹೋಗಿ.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಇವರು ತಮ್ಮ ದುರಾಶೆಗಳಿಗೆ ಬಲಿಯಾಗಿ, “ಆತನು ಮರಳಿ ಬರುವನು ಎಂಬ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ಮೃತರಾದರು; ಅಂದಿನಿಂದ ಸಮಸ್ತವೂ ಲೋಕಾದಿಯಿಂದಲೂ ಇದ್ದ ಹಾಗೆಯೇ ಇದೆಯಲ್ಲಾ,” ಎಂದು ಅಪಹಾಸ್ಯಮಾಡುವರು.


ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು