Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:13 - ಕನ್ನಡ ಸತ್ಯವೇದವು C.L. Bible (BSI)

13 ನಾವಾದರೋ, ದೇವರ ವಾಗ್ದಾನದ ಪ್ರಕಾರ ನೀತಿಯ ನೆಲೆಯಾಗಿರುವ ನೂತನ ಆಕಾಶಮಂಡಲವೂ ನೂತನ ಭೂಮಂಡಲವೂ ಬರುವುದನ್ನು ಎದುರು ನೋಡುತ್ತಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೆ ನಾವು ದೇವರ ವಾಗ್ದಾನವನ್ನು ನಂಬಿ ನೂತನಾಕಾಶಮಂಡಲವನ್ನೂ ನೂತನಭೂಮಂಡಲವನ್ನೂ ಎದುರು ನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವಾದರೋ ದೇವರು ವಾಗ್ದಾನ ಮಾಡಿರುವ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಎದುರುನೋಡುತ್ತಿದ್ದೇವೆ. ನೀತಿಯು ಅವುಗಳಲ್ಲಿ ವಾಸವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಮಿ ತರ್ ದೆವಾನ್ ತಯಾರ್ ಕರಲ್ಲ್ಯಾ ಗೊಸ್ಟಿಯಾಂಚೆ ಸಾರ್ಕೆ ನ್ಹವ್ಯಾ ಮಳ್ಬಾಕ್ ಅನಿ ನ್ಹವ್ಯಾ ಜಿಮ್ನಿಚಿ ವಾಟ್ ರಾಕುನ್ಗೆತ್ ಹಾತ್, ಥೈಯ್ ಖರೆಪಾನುಚ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:13
8 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನು; ಆಗ, ಮೊದಲಿದ್ದದ್ದು ಜ್ಞಾಪಕದಲ್ಲಿರದು; ಅದು ಯಾರ ನೆನಪಿಗೂ ಬಾರದು.


ತರುವಾಯ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಕಂಡೆ. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಕಣ್ಮರೆಯಾಗಿ ಹೋದವು. ಸಮುದ್ರವು ಇನ್ನಿಲ್ಲವಾಯಿತು.


“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಅದೇನೆಂದರೆ, ಸೃಷ್ಟಿಯು ಸಹ ವಿನಾಶವಿಧಿಯಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮಾಯುತ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ, ಎಂಬುದೇ.


ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು