Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:14 - ಕನ್ನಡ ಸತ್ಯವೇದವು C.L. Bible (BSI)

14 ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪ್ರಿಯ ಸ್ನೇಹಿತರೇ, ಇವುಗಳಿಗಾಗಿಯೇ ನಾವು ಎದುರುನೋಡುತ್ತಿದ್ದೇವೆ. ಆದ್ದರಿಂದ ನೀವು ಪಾಪವಿಲ್ಲದವರಾಗಿರಲು ಮತ್ತು ತಪ್ಪಿಲ್ಲದವರಾಗಿರಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿರಿ. ದೇವರೊಂದಿಗೆ ಸಮಾಧಾನದಿಂದಿರಲು ಪ್ರಯತ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆ ಮಜ್ಯಾ ಪ್ರಿತಿಚ್ಯಾನು ಹ್ಯಾ ಘಡಿತ್ತಾಚಿ ತುಮಿ ವಾಟ್ ಬಗುನ್ಗೆತ್ ಹಾಸಿ, ಅಸೆ ರಾತಾನಾ ಸಮಾದಾನಾನ್ ಬರ್‍ಯಾ ಭುತ್ತುರ್‍ಲ್ಯಾ ಮನಾಚಿ ಲೊಕಾ ಹೊವ್ನ್ ದೆವಾಕ್ ಭೆಟುಕ್ ಪವಿತ್ರ್ ಅನಿ ಚುಕ್ ನಸಲ್ಲೆ ಜಿವನ್ ಕರುಕ್ ಕಟ್ಪಟ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:14
19 ತಿಳಿವುಗಳ ಹೋಲಿಕೆ  

ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.


ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.


ನಮ್ಮ ಪ್ರಭು ಯೇಸುಕ್ರಿಸ್ತರ ದಿನದಂದು ನೀವು ನಿರ್ದೋಷಿಗಳಾಗಿರುವಂತೆ ಆ ದೇವರೇ, ನಿಮ್ಮನ್ನು ಕಡೆಯವರೆಗೂ ಸ್ಥಿರವಾಗಿ ಕಾಪಾಡುವರು.


ನಿರ್ದೋಷಿಗಳೂ ನಿಷ್ಕಳಂಕರೂ ಆಗಿರಿ. ವಕ್ರಬುದ್ಧಿಯ ದುಷ್ಟಜನರ ನಡುವೆ ದೇವರ ಪರಿಶುದ್ಧ ಮಕ್ಕಳಂತೆ ಬಾಳಿರಿ. ಜೀವದಾಯಕ ಸಂದೇಶವನ್ನು ಎತ್ತಿಹಿಡಿಯಿರಿ; ಆಗ ನಕ್ಷತ್ರಗಳು ಆಕಾಶವನ್ನು ಬೆಳಗಿಸುವಂತೆ ಪ್ರಪಂಚದಲ್ಲಿ ನೀವು ಕಂಗೊಳಿಸುವಿರಿ.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು.


“ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.


ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.


ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ.


ಆದ್ದರಿಂದ ಯಾರಾದರು, ‘ಅಗೋ ಕ್ರಿಸ್ತ ಅಡವಿಯಲ್ಲಿದ್ದಾನೆ,’ ಎಂದರೆ ಅಲ್ಲಿಗೆ ಹೋಗಬೇಡಿ. ‘ಇಗೋ, ಇಲ್ಲೇ ಒಳಗೆ ಅವಿತುಕೊಂಡಿದ್ದಾನೆ,’ ಎಂದರೂ ಅದನ್ನು ನಂಬಬೇಡಿ.


ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಯಾವ ದೋಷಾರೋಪಣೆಗೂ ಎಡೆಗೊಡದೆ ಈ ಕಟ್ಟಳೆಗಳೆಲ್ಲವನ್ನೂ ಪ್ರಾಮಾಣಿಕತೆಯಿಂದ ಅನುಸರಿಸು:


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಪ್ರಿಯರೇ, ಈಗ ನಾನು ನಿಮಗೆ ಬರೆಯುತ್ತಿರುವುದು ಎರಡನೆಯ ಪತ್ರ. ಈ ಎರಡು ಪತ್ರಗಳಲ್ಲೂ ನಿಮ್ಮ ನಿರ್ಮಲ ಮನಸ್ಸನ್ನು ಪುನಶ್ಚೇತನಗೊಳಿಸಲು ಪ್ರಯತ್ನಿಸಿದ್ದೇನೆ.


ಆತನು ತನ್ನ ಪತ್ರಗಳಲ್ಲಿ ಈ ವಿಷಯವನ್ನು ಕುರಿತು ಪ್ರಸ್ತಾಪಿಸುವಾಗಲೆಲ್ಲಾ ಹೀಗೆಯೇ ಬೋಧಿಸಿದ್ದಾನೆ. ಅರ್ಥಮಾಡಿಕೊಳ್ಳಲು ಕಠಿಣವಾದ ಕೆಲವು ವಿಷಯಗಳು ಆತನ ಪತ್ರಗಳಲ್ಲಿ ಇವೆ. ಬುದ್ಧಿಹೀನರು ಹಾಗು ಚಂಚಲಚಿತ್ತರು ಪವಿತ್ರಗ್ರಂಥದ ಇತರ ಭಾಗಗಳಿಗೆ ಅಪಾರ್ಥಕಟ್ಟುವಂತೆ ಇವುಗಳಿಗೂ ಕಟ್ಟುತ್ತಾರೆ. ಹೀಗೆ, ತಮ್ಮ ವಿನಾಶವನ್ನು ತಾವೇ ತಂದುಕೊಳ್ಳುತ್ತಾರೆ.


ತಮ್ಮತಮ್ಮ ದೀಪದ ಬತ್ತಿಯನ್ನು ಸರಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು