Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:15 - ಕನ್ನಡ ಸತ್ಯವೇದವು C.L. Bible (BSI)

15 ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಅದೆ ಎಂದು ಎಣಿಸಿಕೊಳ್ಳಿರಿ. ಇದೇ ಅಭಿಪ್ರಾಯಕ್ಕೆ ಸರಿಯಾಗಿ ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಮ್ಮ ಕರ್ತದೇವರ ದೀರ್ಘಶಾಂತಿಯು ನಮ್ಮ ರಕ್ಷಣೆಯ ಕಾರಣಕ್ಕಾಗಿ ಇದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಧನಿಯಾನ್ ಎವ್ಡೆ ಲೈ ಎಳ್ ಅಮ್ಕಾ ಸೊಸುನ್ ಘೆಟಲ್ಲೆ ಅಮ್ಚ್ಯಾ ಸುಟ್ಕೆಸಾಟ್ನಿ ಎಕ್ ಅವ್ಕಾಸ್ ಮನುನ್ ಘೆವಾ, ಅಮ್ಚ್ಯಾ ಪ್ರಿತಿಚ್ಯಾ ಭಾವ್ ಪಾವ್ಲುನ್ಬಿ ಅಪ್ನಾಕ್ ಗಾವಲ್ಲ್ಯಾ ಶಾನ್ಪಾನಾಚ್ಯಾ ಪರ್ಕಾರ್ ಹೆಚ್ಯಾ ವಿಶಯಾತ್ ಚಿಟ್ ಲಿವ್ನ್ ಸಾಂಗಟಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:15
27 ತಿಳಿವುಗಳ ಹೋಲಿಕೆ  

ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ.


ಪೂರ್ವಕಾಲದಲ್ಲಿ ನೋವನು ನಾವೆಯನ್ನು ಕಟ್ಟುತ್ತಿದ್ದಾಗ ತಾಳ್ಮೆಯಿಂದಿದ್ದ ದೇವರಿಗೆ ಅವಿಧೇಯರಾಗಿದ್ದ ಆತ್ಮಗಳೇ ಅವು. ನಾವೆಯೊಳಗಿದ್ದು ಕೆಲವರು, ಅಂದರೆ ಎಂಟು ಜನರು, ಜಲದಿಂದ ರಕ್ಷಣೆಹೊಂದಿದರು.


ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಆದುದರಿಂದ ನಾವೆಲ್ಲರೂ ಸಭೆಸೇರಿ ಪ್ರತಿನಿಧಿಗಳನ್ನು ಆರಿಸಿ ನಿಮ್ಮಲ್ಲಿಗೆ ಕಳುಹಿಸಲು ನಿರ್ಧರಿಸಿದೆವು.


ನಾವು ಇವುಗಳನ್ನು ಮಾನವ ಜ್ಞಾನ ಪ್ರೇರೇಪಿಸಿದ ಮಾತುಗಳಿಂದ ಹೇಳುವುದಿಲ್ಲ. ದೇವರ ಆತ್ಮದಿಂದ ಪ್ರೇರಿತವಾದ ಮಾತುಗಳಿಂದ ಹೇಳುತ್ತೇವೆ. ಹೀಗೆ ಆಧ್ಯಾತ್ಮಿಕ ಸತ್ಯಗಳನ್ನು, ಆಧ್ಯಾತ್ಮಿಕ ವ್ಯಕ್ತಿಗಳಿಗೆ ವಿವರಿಸುತ್ತೇವೆ.


ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶ ಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ದೇವರು ಸೊಲೊಮೋನನಿಗೆ ಸಮುದ್ರತೀರದ ಮರಳಿನಷ್ಟು ಅಪರಿಮಿತವಾದ ಜ್ಞಾನವಿವೇಕಗಳನ್ನೂ ಮನೋವಿಶಾಲತೆಯನ್ನೂ ಅನುಗ್ರಹಿಸಿದ್ದರು.


ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.


ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ.


ದೇವರು ತಮ್ಮ ನಿಗೂಢ ಯೋಜನೆಯನ್ನು ನನಗೆ ಪ್ರಕಟಗೊಳಿಸಿದ್ದಾರೆ. ಇದರ ಬಗ್ಗೆ ನಾನು ಮೊದಲೇ ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.


ಪವಿತ್ರಾತ್ಮ ಮುಖಾಂತರ ಒಬ್ಬನಿಗೆ ಜ್ಞಾನೋಕ್ತಿಗಳು, ಇನ್ನೊಬ್ಬನಿಗೆ ಅವರ ಮುಖಾಂತರವೇ ವಿದ್ಯೋಕ್ತಿಗಳು ಲಭಿಸುತ್ತವೆ;


ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ.


ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.


ಶಿಲ್ಪಿಗಳು, ಚಮತ್ಕಾರವಾದ ಕೆಲಸ ನಿಯೋಜಿಸುವವರು ಹಾಗು ನೀಲಿ, ಊದ ಹಾಗು ಕಡುಗೆಂಪು ವರ್ಣದ ದಾರದಿಂದಲೂ ನಯವಾದ ನಾರುಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲ ಕಸುಬುದಾರರು ನಡೆಸುವ ಕೆಲಸಗಳನ್ನು ನಿಯೋಜಿಸುವುದಕ್ಕೂ ಹಾಗು ಕಾರ್ಯಗತ ಮಾಡುವುದಕ್ಕೂ ಸರ್ವೇಶ್ವರ ಅವರಿಗೆ ಜ್ಞಾನವನ್ನು ಪೂರ್ತಿಯಾಗಿ ಅನುಗ್ರಹಿಸಿದ್ದಾರೆ.


ಚಿನ್ನ, ಬೆಳ್ಳಿ, ತಾಮ್ರಗಳಿಂದ ಕೆಲಸ ನಡೆಸುವುದಕ್ಕೂ, ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ವಿಚಿತ್ರ ಕೆತ್ತನೆ ಕೆಲಸ ಮಾಡುವುದಕ್ಕೂ


ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲೀಯಾಬನನ್ನು ನೇಮಿಸಿದ್ದೇನೆ. ಇದು ಮಾತ್ರವಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಲು ಕಲಾನಿಪುಣರಿಗೆ ಬೇಕಾದ ಜ್ಞಾನವನ್ನು ಕೊಟ್ಟಿದ್ದೇನೆ.


ಮತ್ತು ಅವನಿಗೆ ದೈವಾತ್ಮಶಕ್ತಿಯನ್ನು ಕೊಟ್ಟು, ತಕ್ಕಜ್ಞಾನ, ವಿವೇಕ ವಿವಿಧ ಶಿಲ್ಪಶಾಸ್ತ್ರ ಕುಶಲತೆಯನ್ನು ಅನುಗ್ರಹಿಸಿದ್ದೇನೆ.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪಮಾಡಿ, “ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ನೀನು ಬರುವಾಗ ದಾರಿಯಲ್ಲಿ ಕಾಣಿಸಿಕೊಂಡ ಯೇಸುಸ್ವಾಮಿಯೇ, ನೀನು ದೃಷ್ಟಿಯನ್ನು ಮರಳಿ ಪಡೆಯುವಂತೆಯೂ ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದನು.


ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು