Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:16 - ಕನ್ನಡ ಸತ್ಯವೇದವು C.L. Bible (BSI)

16 ಆತನು ತನ್ನ ಪತ್ರಗಳಲ್ಲಿ ಈ ವಿಷಯವನ್ನು ಕುರಿತು ಪ್ರಸ್ತಾಪಿಸುವಾಗಲೆಲ್ಲಾ ಹೀಗೆಯೇ ಬೋಧಿಸಿದ್ದಾನೆ. ಅರ್ಥಮಾಡಿಕೊಳ್ಳಲು ಕಠಿಣವಾದ ಕೆಲವು ವಿಷಯಗಳು ಆತನ ಪತ್ರಗಳಲ್ಲಿ ಇವೆ. ಬುದ್ಧಿಹೀನರು ಹಾಗು ಚಂಚಲಚಿತ್ತರು ಪವಿತ್ರಗ್ರಂಥದ ಇತರ ಭಾಗಗಳಿಗೆ ಅಪಾರ್ಥಕಟ್ಟುವಂತೆ ಇವುಗಳಿಗೂ ಕಟ್ಟುತ್ತಾರೆ. ಹೀಗೆ, ತಮ್ಮ ವಿನಾಶವನ್ನು ತಾವೇ ತಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಬರೆಯುವಾಗ ಹೀಗೆ ಬೋಧಿಸಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ಮಾತುಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಹೇಗೆ ನಮಗಿರುವ ವಿುಕ್ಕಾದ ಗ್ರಂಥಗಳಿಗೆ ತಪ್ಪಾದ ಅರ್ಥಮಾಡಿಕೊಂಡಿದ್ದಾರೋ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪೌಲನು ತನ್ನ ಎಲ್ಲ ಪತ್ರಗಳಲ್ಲಿಯೂ ಇವುಗಳನ್ನು ಕುರಿತು ಇದೇ ರೀತಿ ಬರೆಯುತ್ತಾನೆ. ಕೆಲವು ಸಂದರ್ಭಗಳಲ್ಲಿ ಪೌಲನ ಪತ್ರಗಳಲ್ಲಿರುವವುಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಕೆಲವರು ಅವುಗಳನ್ನು ಬೇಕೆಂದೇ ತಪ್ಪಾಗಿ ಅರ್ಥೈಸುತ್ತಾರೆ. ಅವರು ಮೂಢರಾಗಿದ್ದಾರೆ ಮತ್ತು ನಂಬಿಕೆಯಲ್ಲಿ ಬಲಹೀನರಾಗಿದ್ದಾರೆ. ಅವರು ಪವಿತ್ರ ಗ್ರಂಥದ ಇತರ ಭಾಗಗಳನ್ನೂ ತಪ್ಪಾಗಿ ವಿವರಿಸುತ್ತಾರೆ. ಹೀಗೆ ಅವರು ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ವಿಷಯಗಳು ತಿಳಿಯುವುದಕ್ಕೆ ಕಷ್ಟವಾಗಿವೆ. ಪವಿತ್ರ ವೇದದ ಮಿಕ್ಕಾದ ಭಾಗಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ವಿದ್ಯಾಹೀನರೂ ಚಪಲಚಿತ್ತರೂ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಪ್ನಾಚ್ಯಾ ಸಗ್ಳ್ಯಾ ಚಿಟಿಯಾತ್ನಿ ಹ್ಯಾ ಸಂಗ್ತಿಯಾಚ್ಯಾ ವಿಶಯಾತ್ ಬೊಲ್ತಾನಾ ತೆನಿ ಹೆಚ್ ಶಿಕ್ವಲ್ಲೆ ಹಾಯ್, ಸಮ್ಜುನ್ ಘೆವ್ಕ್ ಕಸ್ಟ್ ಹೊತಲ್ಯಾ ಉಲ್ಯ್ಲಾ ಸಂಗ್ತಿಯಾ ಹೆಚ್ಯಾ ಚಿಟಿಯಾತ್ನಿ ಹಾತ್. ಬುದ್ದ್ ನಸಲ್ಲಿ ಅನಿ ಚಂಚಲ್ ಮಾನಾಚಿ ಲೊಕಾ ಹೆಚೊ ಅರ್ಥ್ ದುಸ್ರೊಚ್ ಕಾಡ್ತಾತ್ ಅನಿ ಅಪ್ನಾಚ್ಯಾ ನಾಶಾಕ್ ಕಾರನ್ ಹೊತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:16
26 ತಿಳಿವುಗಳ ಹೋಲಿಕೆ  

ಇನ್ನು ಅವನು ತನ್ನ ತಂದೆ ತಾಯಿಗಳನ್ನು ಗೌರವಿಸಬೇಕಾಗಿಲ್ಲ, ಎಂದು ಬೋಧಿಸುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನೇ ನಿರರ್ಥಕಮಾಡಿಬಿಟ್ಟಿದ್ದೀರಿ.


ಈ ವಿಷಯದಲ್ಲಿ ನಾವು ಹೇಳಬೇಕಾದುದು ಎಷ್ಟೋ ಇದೆ. ಆದರೆ ನಿಮ್ಮ ಬುದ್ಧಿಯು ಮಂದವಾಗಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.


ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


‘ಸರ್ವೇಶ್ವರನ ಹೊರೆ’ ಎಂಬ ಮಾತನ್ನು ಎತ್ತಲೇಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೊಂದು ಹೊರೆ. ಜೀವಸ್ವರೂಪರಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.


“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಅಭಿಪ್ರಾಯ ತಪ್ಪು. ಪವಿತ್ರಗ್ರಂಥವನ್ನಾಗಲಿ, ದೇವರ ಶಕ್ತಿಯನ್ನಾಗಲಿ ನೀವು ಅರ್ಥಮಾಡಿಕೊಂಡಿಲ್ಲ.


ಜಡವಾಗಿಹೋಗಿದೆ ಧರ್ಮಶಾಸ್ತ್ರ; ಸ್ತಬ್ಧವಾಗಿದೆ ನ್ಯಾಯನೀತಿಯ ಚಕ್ರ. ಸಜ್ಜನರಿಗಿಂತ ದುರ್ಜನರ ಕೈ ಮೇಲಾಗಿದೆ; ಎಂದೇ ನ್ಯಾಯನೀತಿ ತಲೆಕೆಳಗಾಗಿದೆ.


ಸದಾ ಅಪಾರ್ಥ ಕಟ್ಟುವರೆನ್ನ ಮಾತಿಗೆ I ಅವರು ಬಗೆವುದೆಲ್ಲಾ ಕೇಡೇ ನನಗೆ II


ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ನಿಮ್ಮ ಸಂಪ್ರದಾಯದ ಸಲುವಾಗಿ ನೀವು ದೇವರ ಆಜ್ಞೆಯನ್ನು ಮೀರುತ್ತೀರಲ್ಲ, ಅದೇಕೆ?”


ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಪ್ರಾಂತ್ಯಗಳಲ್ಲಿ ಚದರಿಹೋಗಿ ನಿರಾಶ್ರಿತರಂತೆ ಜೀವಿಸುತ್ತಿರುವ ದೇವಜನರಿಗೆ - ಯೇಸುಕ್ರಿಸ್ತರ ಪ್ರೇಷಿತನಾದ ಪೇತ್ರನು ಬರೆಯುವ ಪತ್ರ :


ಸರ್ವೇಶ್ವರನ ನಾಮಮಹತ್ತಿನಿಂದ ಸೊಲೊಮೋನನ ಕೀರ್ತಿ ಹರಡಿತು. ಇದನ್ನು ಕೇಳಿದ ಶೆಬದ ರಾಣಿ ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಬಂದಳು.


“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


“ನಿಮ್ಮಲ್ಲಿರುವ ಬಡವರು ನ್ಯಾಯಕೋರಿ ಬರುವಾಗ ಅವರಿಗೆ ನೀವು ನ್ಯಾಯ ತಪ್ಪಿಸಬಾರದು. ಮೋಸದ ಕಾರ್ಯದಿಂದ ದೂರವಿರಬೇಕು;


ಕೆಟ್ಟ ಕಾರ್ಯವನ್ನು ಮಾಡುವವರು ಬಹು ಮಂದಿ ಇದ್ದಾರೆ. ಆದರೂ ನೀವು ಅವರ ಜೊತೆ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.


ಆದರೆ ದಡಮೀರಿದ ಪ್ರವಾಹ ನೀನು ಹತ್ತಿದೆ, ಹೊಲೆಮಾಡಿದೆ, ತಂದೆಯ ಹಾಸಿಗೆಯನು ಪ್ರಮುಖಸ್ಥಾನದಲ್ಲಿರೆ ನನ್ನ ಮಂಚವನ್ನೇರಿದೆ ನೀನು.


ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ.


ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು