Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:17 - ಕನ್ನಡ ಸತ್ಯವೇದವು C.L. Bible (BSI)

17 ಆದಕಾರಣ ಪ್ರಿಯರೇ, ಈ ವಿಷಯಗಳನ್ನು ಮುಂಚಿತವಾಗಿಯೇ ತಿಳಿದುಕೊಂಡಿರುವ ನೀವು ಎಚ್ಚರಿಕೆಯಿಂದಿರಿ. ದುರ್ಜನರ ದುರ್ಬೋಧನೆಗೆ ಮರುಳಾಗದಿರಿ. ನಿಮ್ಮ ಸ್ಥಿರವಿಶ್ವಾಸವನ್ನು ಬಿಟ್ಟು ಭ್ರಷ್ಟರಾಗದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ಅಧರ್ಮಿಗಳ ಭ್ರಾಂತಿಯ ಸೆಳವಿಗೆ ಸಿಕ್ಕಿಕೊಂಡು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಟರಾಗದಂತೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪ್ರಿಯ ಸ್ನೇಹಿತರೇ, ನೀವು ಈಗಾಗಲೇ ಇದರ ಬಗ್ಗೆ ತಿಳಿದಿರುವಿರಿ. ಆದ್ದರಿಂದ ನೀವು ಎಚ್ಚರದಿಂದಿರಿ. ಆ ಕೆಟ್ಟಜನರು ತಾವು ಮಾಡುವ ಕೆಟ್ಟಕಾರ್ಯಗಳಿಂದ ನಿಮ್ಮನ್ನು ದಾರಿತಪ್ಪಿಸದಂತೆ ನೋಡಿಕೊಳ್ಳಿರಿ. ನಿಮ್ಮ ಬಲವಾದ ನಂಬಿಕೆಯನ್ನು ತೊರೆದುಬಿಡದಂತೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವುದರಿಂದ ನಿಯಮರಹಿತರ ಸೆಳೆಯುವಿಕೆಗೆ ಮರುಳಾಗಿ ನಿಮ್ಮ ಸ್ಥಿರತೆಯಿಂದ ಬಿದ್ದುಹೋಗದಂತೆ ಎಚ್ಚರಿಕೆಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಹೆಚ್ಯಾಸಾಟ್ನಿ ಮಾಜ್ಯಾ ಪ್ರಿತಿಚ್ಯಾನು ಹೆ ಸಗ್ಳ್ಯೆ ತುಮ್ಕಾ ಅದ್ದಿ ಗೊತ್ತ್ ಹಾಯ್, ತಸೆ ಮನುನ್ ತುಚ್ಯಾ ಘಟ್ ವಿಶ್ವಾಸಾತ್ನಾ ತುಮಿ ಪಡಿನಸ್ತಾನಾ ರ್‍ಹಾವ್ಕ್ ಸಾಟ್ನಿ ಖಾಯ್ದ್ಯಾಚ್ಯಾ ವಿರೊದ್ ಚಲ್ತಲ್ಯಾ ತ್ಯಾ ಲೊಕಾನಿ ವ್ಹಾಕ್ಡ್ಯಾ ವಾಟೆಕ್ ತುಮ್ಕಾ ನ್ಹಯ್ ನಸಿ ಸಾರ್ಕೆ ಹುರ್ಶಾಕಿನ್ ರಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:17
26 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ.


ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಆದಕಾರಣ ಸ್ಥಿರವಾಗಿ ನಿಂತಿರುವೆನೆಂದು ಕೊಚ್ಚಿಕೊಳ್ಳುವವನೇ, ಕುಸಿದುಬೀಳದಂತೆ ಎಚ್ಚರಿಕೆಯಿಂದಿರು.


“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ರೆಕ್ಕೆಯುಳ್ಳ ಹಕ್ಕಿಯ ಕಣ್ಣೆದುರಿಗೇ ಬಲೆಯನ್ನು ಹರಡುವುದು ವ್ಯರ್ಥವಲ್ಲವೆ?


ನೀನು ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಮ್ಮ ಬೋಧನೆಗೆ ಅವನು ಕಟುವಾದ ವಿರೋಧಿ ಆಗಿದ್ದಾನೆ.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ!” ಎಂದರು.


ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.


ಹೀಗಿದ್ದೂ ನಾನು ಈಗ ರೊಟ್ಟಿಯನ್ನು ಕುರಿತು ಎಚ್ಚರಿಸಲಿಲ್ಲವೆಂದು ನೀವು ತಿಳಿಯದೆಹೋದಿರಲ್ಲಾ,” ಎಂದರು.


ಆದುದರಿಂದ ನೀನು ಹೇಗೆ ಪತನಹೊಂದಿದೆ ಎಂಬುದನ್ನು ಜ್ಞಾಪಿಸಿಕೋ. ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಮೊದಲು ಮಾಡಿದ ಸುಕೃತ್ಯಗಳನ್ನು ಸಾಧಿಸು. ನೀನು ಪಾಪಕ್ಕೆ ವಿಮುಖನಾಗದೆಹೋದರೆ, ನಾನು ನಿನ್ನ ಬಳಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುತ್ತೇನೆ.


ವಿಶ್ವಾಸದಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ನಿಮ್ಮ ಸಹ ವಿಶ್ವಾಸಿಗಳು ಜಗತ್ತಿನಲ್ಲೆಲ್ಲಾ ಇಂಥ ಹಿಂಸೆಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂದು ನಿಮಗೆ ತಿಳಿದಿದೆ.


ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮೊಂದಿಗಿದ್ದೇನೆ. ನಿಮ್ಮ ಕ್ರಮಬದ್ಧ ನಡತೆಯನ್ನೂ ಕ್ರಿಸ್ತಯೇಸುವಿನಲ್ಲಿ ನಿಮಗಿರುವ ಸ್ಥಿರವಿಶ್ವಾಸವನ್ನೂ ನೋಡುವಾಗ ನನಗೆ ಅಮಿತಾನಂದವಾಗುತ್ತದೆ.


ನಿಮಗೆ ಸುನ್ನತಿಯಾಗಬೇಕೆಂದು ಬೋಧಿಸುವವರ ವಿಷಯದಲ್ಲಿ ಜಾಗರೂಕರಾಗಿರಿ. ಅವರು ದುಷ್ಕರ್ಮಿಗಳು, ಶ್ವಾನಗಳಿಗೆ ಸಮಾನರು.


ಅಂಥಕಾಲ ಬಂದಾಗ ಇದನ್ನೆಲ್ಲಾ ಕುರಿತು ನಾನು ನಿಮ್ಮನ್ನು ಮೊದಲೇ ಎಚ್ಚರಿಸಿದ್ದೇನೆಂದು ನೀವು ನೆನಸಿಕೊಳ್ಳುವಂತೆ ಇದನ್ನು ಹೇಳುತ್ತಿದ್ದೇನೆ.


ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರ ಮೂಲಕವೇ ದೇವರೊಡನೆ ಸತ್ಸಂಬಂಧ ಪಡೆಯಬೇಕೆಂದಿರುವ ನೀವು ಕ್ರಿಸ್ತಯೇಸುವಿನಿಂದ ಬೇರ್ಪಟ್ಟಿದ್ದೀರಿ. ದೈವಾನುಗ್ರಹದಿಂದ ದೂರವಾಗಿದ್ದೀರಿ.


ಆದರೆ, ಆ ದುರ್ಜನರ ಅನೈತಿಕ ನಡವಳಿಕೆಯನ್ನು ಕಂಡು ಅತಿಯಾಗಿ ಮನನೊಂದಿದ್ದ ಲೋತ ಎಂಬ ಸತ್ಪುರುಷನನ್ನು ಸಂರಕ್ಷಿಸಿದರು.


ಪ್ರಿಯರೇ, ಈಗ ನಾನು ನಿಮಗೆ ಬರೆಯುತ್ತಿರುವುದು ಎರಡನೆಯ ಪತ್ರ. ಈ ಎರಡು ಪತ್ರಗಳಲ್ಲೂ ನಿಮ್ಮ ನಿರ್ಮಲ ಮನಸ್ಸನ್ನು ಪುನಶ್ಚೇತನಗೊಳಿಸಲು ಪ್ರಯತ್ನಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು