Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:3 - ಕನ್ನಡ ಸತ್ಯವೇದವು C.L. Bible (BSI)

3 ಮೊತ್ತಮೊದಲನೆಯದಾಗಿ ನೀವು ಇದನ್ನು ನೆನಪಿನಲ್ಲಿಡಬೇಕು; ಅಂತ್ಯಕಾಲದಲ್ಲಿ ಕುಚೋದ್ಯಗಾರರು ಕಾಣಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕಡೆ ದಿನಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯ ಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯಮಾಡುತ್ತಾ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಂತಿಮ ದಿನಗಳಲ್ಲಿ ಏನು ಸಂಭವಿಸುತ್ತದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯವಾಗಿದೆ. ಜನರು ನಿಮ್ಮನ್ನು ನೋಡಿ ಕುಚೋದ್ಯ ಮಾಡುವರು. ಅವರು ತಮ್ಮ ಇಚ್ಛೆಗನುಸಾರವಾದ ಕೆಟ್ಟಕಾರ್ಯಗಳನ್ನೇ ಮಾಡುತ್ತಾ ಜೀವಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮಿ ಆಕ್ರಿಚ್ಯಾ ದಿಸಾತ್ನಿ ಕಾಯ್ ಹೊತಲೆ ಹಾಯ್ ಮನುನ್ ಅರ್ಥ್ ಕರುನ್ ಘೆತಲೆ ಲೈ ಮುಖ್ಯ್ ಹೊಲ್ಲೆ ಹಾಯ್, ಅನಿ ಲೊಕಾ ತುಮ್ಕಾ ಬಗುನ್ ಅಪ್ನಾಚ್ಯಾ ಮನಾಕ್ ಯೆಲ್ಲ್ಯಾ ಸಾರ್ಕೆ ಬುರ್ಶಿ ಕಾಮಾ ಕರುನ್ಗೆತ್ ಜಿವನ್ ಕರ್ತಾತ್. ಅನಿ ತೆನಿ ತೆಕಾ ಎಡ್ಸಡ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:3
17 ತಿಳಿವುಗಳ ಹೋಲಿಕೆ  

“ತಮ್ಮ ದುರಿಚ್ಛೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅವರು ಎಚ್ಚರಿಸಿದ್ದಾರೆ.


ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಆದರೆ, ಇದನ್ನು ನೀವು ಮುಖ್ಯವಾಗಿ ಜ್ಞಾಪಕದಲ್ಲಿಡಬೇಕು: ಪವಿತ್ರಗ್ರಂಥದಲ್ಲಿರುವ ಯಾವ ಪ್ರವಾದನೆಯೂ ವೈಯಕ್ತಿಕ ವ್ಯಾಖ್ಯಾನದ ವಿಷಯವಲ್ಲ.


ಅಂತಿಮ ದಿನಗಳು ಕಷ್ಟಕರವಾದ ಕಾಲವಾಗಿರುತ್ತದೆಂಬುದನ್ನು ಜ್ಞಾಪಕದಲ್ಲಿಡು.


ಅಪಹಾಸ್ಯಮಾಡುವವರನ್ನು ಆತ ಅಪಹಾಸ್ಯ ಮಾಡುವನು; ನಮ್ರರಿಗಾದರೋ ಕೃಪಾಶೀರ್ವಾದವನ್ನು ಅನುಗ್ರಹಿಸುವನು.


“ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?


ಕುಚೋದ್ಯನಿಗೆ ಜ್ಞಾನ ಹುಡುಕಿದರೂ ಸಿಕ್ಕದು; ವಿವೇಕಿಗೆ ತಿಳುವಳಿಕೆ ಸುಲಭವಾಗಿ ದಕ್ಕುವುದು.


ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ.


ಅರಸನ ಹಬ್ಬದ ದಿನಗಳಲ್ಲಿ ಅಧಿಕಾರಿಗಳು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುವಂತೆ ಮಾಡಿದರು. ಅರಸನು ಅಪಹಾಸ್ಯಮಾಡುವ ತುಂಟರ ಸಂಗಡ ಬೆರೆತುಕೊಂಡನು.


ಏಕೆಂದರೆ ಭಯೋತ್ಪಾದಕರು ನಿಶ್ಶೇಷರಾಗುವರು, ಧರ್ಮನಿಂದಕರು ನಿರ್ನಾಮವಾಗುವರು.


ಆದಕಾರಣ, ಜೆರುಸಲೇಮಿನ ಜನರನ್ನಾಳುವ ಧರ್ಮನಿಂದಕರೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳಿರಿ.


“ಸ್ವಾಮಿ ತ್ವರೆಮಾಡಲಿ, ತನ್ನ ಕಾರ್ಯವನ್ನು ತುರ್ತಾಗಿ ನಡೆಸಲಿ, ನೋಡೋಣ; ಇಸ್ರಯೇಲಿನ ಪರಮ ಪಾವನ ಸ್ವಾಮಿಯ ಯೋಜನೆ ಶೀಘ್ರವಾಗಿ ಕೈಗೂಡಲಿ, ಆಗ ಪರಿಗ್ರಹಿಸೋಣ” ಎಂದು ಹೇಳುವ ಜನರಿಗೆ ಧಿಕ್ಕಾರ !


ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು