Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೇತ್ರನು 3:7 - ಕನ್ನಡ ಸತ್ಯವೇದವು C.L. Bible (BSI)

7 ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಈಗಿರುವ ಭೂಮ್ಯಾಕಾಶಗಳು ಅದೇ ವಾಕ್ಯದ ಬಲದಿಂದ ಬೆಂಕಿಯ ಮೂಲಕ ನಾಶವಾಗುವದಕ್ಕೆ ಇಡಲ್ಪಟ್ಟಿವೆ; ಮತ್ತು ಭಕ್ತಿಹೀನರ ಶಿಕ್ಷಾವಿಧಿಯೂ ನಾಶವೂ ಉಂಟಾಗುವ ದಿನಕ್ಕಾಗಿ ಆ ಬೆಂಕಿ ಸಿದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಗಿರುವ ಆಕಾಶಕ್ಕೂ ಭೂಮಿಗೂ ಅದೇ ದೇವರ ವಾಕ್ಯವು ಆಧಾರವಾಗಿದೆ. ಆಕಾಶ ಮತ್ತು ಭೂಮಿಗಳು ಬೆಂಕಿಯಿಂದ ನಾಶಗೊಳ್ಳಲು ಇಡಲ್ಪಟ್ಟಿವೆ. ದೇವರಿಗೆ ವಿರುದ್ಧವಾಗಿರುವ ಜನರೆಲ್ಲರಿಗೆ ಆಗುವ ನ್ಯಾಯತೀರ್ಪಿನ ದಿನಕ್ಕಾಗಿಯೂ ನಾಶನಕ್ಕಾಗಿಯೂ ಭೂಮ್ಯಾಕಾಶಗಳು ಇಡಲ್ಪಟ್ಟಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಹ್ಯಾ ಯೆಳಾತ್ಲೊ ಮಳ್ಬಾ ಅನಿ ಜಿಮಿನ್ಬಿ ತೆಚ್ಯಾ ಗೊಸ್ಟಿಚ್ಯಾ ವೈರ್ ಆಧಾರ್ ಹೊವ್ನ್ ಹಾಯ್, ಆಗಿತ್ನಾ ನಾಶ್ ಕರುಕ್ ಮನುನ್ ಥವಲ್ಲೆ ಹಾಯ್, ಅನಿ ಥೈಯ್ ದೆವಾಕ್ ಮಾನಿ ನಸಲ್ಲಿ ಲೊಕಾಚಿ ಝಡ್ತಿ ಕರ್ತಲೊ ಅನಿ ನಾಶ್ ಹೊತಲೊ ದಿಸ್ ಯೆಯ್ ಪತರ್ ಅಸೆಚ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೇತ್ರನು 3:7
31 ತಿಳಿವುಗಳ ಹೋಲಿಕೆ  

ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.


ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.


ದೇವರ ಆ ದಿನವನ್ನು ಎದುರುನೋಡುತ್ತಾ ಅದು ಬೇಗನೆ ಬರಲೆಂದು ಹಾರೈಸಬೇಕು. ಆ ದಿನ, ಆಕಾಶಮಂಡಲವು ಅಗ್ನಿಯಿಂದ ಉರಿದುಹೋಗುವುದು; ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಶಾಖದಿಂದ ಕರಗಿಹೋಗುವುವು.


ತರುವಾಯ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಕಂಡೆ. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಕಣ್ಮರೆಯಾಗಿ ಹೋದವು. ಸಮುದ್ರವು ಇನ್ನಿಲ್ಲವಾಯಿತು.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಜನರು ತಾವಾಡುವ ಪ್ರತಿಯೊಂದು ಜೊಳ್ಳುಮಾತಿಗೂ ತೀರ್ಪಿನ ದಿನ ಲೆಕ್ಕಕೊಡಬೇಕಾಗುವುದು ಎಂಬುದು ನಿಮಗೆ ತಿಳಿದಿರಲಿ.


ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.


ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ.


ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲೂ ಅಂಜದೆ, ಅಳುಕದೆ ಧೈರ್ಯದಿಂದಿರಿ. ಇದೇ ಅವರಿಗೆ ಅವರ ವಿನಾಶದ ಸ್ಪಷ್ಟ ಮುನ್ಸೂಚನೆ! ನಿಮಗೆ ದೇವರಿಂದ ಬರುವ ಸಂರಕ್ಷಣೆಯ ಮುನ್ಸೂಚನೆ.


ಇದರಿಂದಾಗಿ, ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬಂದಿರುತ್ತದೆ; ನ್ಯಾಯತೀರ್ಪಿನ ದಿನದಂದು ನಾವು ಭರವಸೆಯಿಂದಿರುತ್ತೇವೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.


ನಿಮ್ಮನ್ನು ಯಾರೂ ಯಾವ ರೀತಿಯಲ್ಲೂ ವಂಚಿಸದಿರಲಿ. ಆ ದಿನವು ಬರುವುದಕ್ಕೆ ಮುಂಚೆ ದೇವರಿಗೆ ವಿರುದ್ಧವಾದ ‘ಅಂತಿಮ ಪ್ರತಿಭಟನೆ’ ಉಂಟಾಗುವುದು. ‘ಪಾಪಪುರುಷನಾದ’ ಅಧರ್ಮಿ ತಲೆ ಎತ್ತಿಕೊಳ್ಳುವನು.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಯಾವುದೇ ಊರಿನ ಜನರು ನಿಮ್ಮನ್ನು ಸ್ವಾಗತಿಸದೆಯೂ ನಿಮ್ಮ ಬೋಧನೆಗೆ ಕಿವಿಗೊಡದೆಯೂ ಹೋದರೆ, ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅವರ ವಿರುದ್ಧ ಅದು ಸಾಕ್ಷಿಯಾಗಿರಲಿ,” ಎಂದರು.


ಆದುದರಿಂದ ತೀರ್ಪಿನ ದಿನ ಸೊದೋಮಿನ ಗತಿ ನಿನಗಿಂತ ಸಹನೀಯವಾಗಿರುವುದು ಎಂಬುದು ನಿನಗೆ ತಿಳಿದಿರಲಿ,” ಎಂದರು.


ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಮೇಲಾಗಿರುವುದೆಂದು ಒತ್ತಿ ಹೇಳುತ್ತೇನೆ.


ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.


ನೀನಾದರೋ ಉಳಿದಿರುವೆ, ಅವೋ ಅಳಿದುಹೋಗುವುವು I ಹಳೆಯದಾಗುತ್ತವೆ ಬಟ್ಟೆಯಂತೆ ಅವೆಲ್ಲವು I ಉಡುಪಿನಂತೆ ಬದಲಿಸುತ್ತ, ಮಾರ್ಪಡುತ್ತವೆ ಅವು II


ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ಹಿಂದೊಮ್ಮೆ ಇದ್ದು ಈಗ ಇಲ್ಲದಿರುವ ಮೃಗವು ಎಂಟನೆಯ ರಾಜನನ್ನು ಸೂಚಿಸುತ್ತದೆ. ಅದು ಆ ಏಳುಮಂದಿಗೆ ಸೇರಿದುದು ಮತ್ತು ವಿನಾಶದತ್ತ ತೆರಳುವಂಥಾದ್ದು.


ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.


“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ.


ಅವನವನ ಕೆಲಸದ ಗುಣವು ಕಡೆಯ ದಿನ ಬಟ್ಟಬಯಲಾಗುವುದು. ಯೇಸುಕ್ರಿಸ್ತರ ಆ ದಿನವು ಬೆಂಕಿಯ ದಿನವಾಗಿ ಪ್ರಜ್ವಲಿಸುವುದು. ಪ್ರತಿಯೊಬ್ಬನ ಕೆಲಸವನ್ನು ಆ ಬೆಂಕಿ ಪರೀಕ್ಷಿಸುವುದು.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು