Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:10 - ಕನ್ನಡ ಸತ್ಯವೇದವು C.L. Bible (BSI)

10 ಈ ಉಪದೇಶವನ್ನು ಒಪ್ಪದಿರುವ ಯಾವನಾದರೂ ನಿಮಗೆ ಉಪದೇಶಮಾಡಬಂದರೆ, ಮನೆಯೊಳಗೆ ಸೇರಿಸಬೇಡಿ; ಅವನನ್ನು ಹರಸಲೂಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ ಉಪದೇಶಕ್ಕೆ ಒಪ್ಪದಿರುವ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ, ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿಮ್ಮ ಬಳಿಗೆ ಬರುವವನು ಈ ಉಪದೇಶವನ್ನು ಹೊಂದಿಲ್ಲದಿದ್ದರೆ ಅವನನ್ನು ನಿಮ್ಮ ಮನೆಯೊಳಗೆ ಸೇರಿಸಿಕೊಳ್ಳಬೇಡಿ. ಅವನನ್ನು ಸ್ವಾಗತಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈ ಬೋಧನೆಯನ್ನು ಒಪ್ಪದಿರುವ ಯಾರಾದರೂ ನಿಮ್ಮ ಬಳಿಗೆ ಬಂದರೆ, ಅವರನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವರಿಗೆ, “ವಂದನೆ” ಎಂದೂ ಹೇಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆ ಕೊನ್ ಹಿ ಶಿಕಾಪಾ ಆಯ್ಕಿನಸ್ತಾನಾ ರ್‍ಹಾತಾ, ತೊ ತುಮ್ಚ್ಯಾ ಜಗೊಳ್ ಯೆಲ್ಯಾರ್ ತೆಕಾ ಘರಾತ್ ಘೆವ್‍ನಕಾಶಿ. ಅನಿ ತೆಕಾ ನಮಸ್ಕಾರ್ ಕರುನಕಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:10
14 ತಿಳಿವುಗಳ ಹೋಲಿಕೆ  

ಕ್ರೈಸ್ತಸಭೆಯಲ್ಲಿ ಭೇದಭಾವ ಹುಟ್ಟಿಸುವವನಿಗೆ ಒಂದೆರಡು ಸಾರಿ ಬುದ್ಧಿಹೇಳು. ಅನಂತರ ಅವನಷ್ಟಕ್ಕೇ ಬಿಟ್ಟುಬಿಡು.


ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.


ಈ ಪತ್ರದ ಮೂಲಕ ನಾವು ಹೇಳಿರುವ ಮಾತನ್ನು ಯಾರಾದರೂ ಕೇಳದಿದ್ದರೆ, ಅಂಥವನನ್ನು ಗುರುತಿಸಿ ಅವನ ಸಹವಾಸವನ್ನೇ ತೊರೆದುಬಿಡಿ. ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.


ಆದರೆ ತಾನು ಕ್ರೈಸ್ತ ಸಹೋದರ ಎನಿಸಿಕೊಂಡು, ದುರಾಚಾರಿಯಾಗಿಯೋ ಲೋಭೀಯಾಗಿಯೋ ವಿಗ್ರಹಾರಾಧಕನಾಗಿಯೋ ಪರನಿಂದಕನಾಗಿಯೋ ಕುಡುಕನಾಗಿಯೋ ಸುಲಿಗೆಗಾರನಾಗಿಯೋ ಯಾರಾದರೂ ಇದ್ದರೆ, ಅಂಥವನ ಸಹವಾಸ ನಿಮಗೆ ಸಲ್ಲದು. ಇದು ನನ್ನ ಪತ್ರದ ಉದ್ದೇಶ.


ಏಕೆಂದರೆ, ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.


ಯಾರಾದರೂ ಪ್ರಭುವನ್ನು ಪ್ರೀತಿಸದೆಹೋದರೆ ಅವರಿಗೆ ಧಿಕ್ಕಾರ! “ಮಾರನಥ" - ಪ್ರಭುವೇ ಬನ್ನಿ.


‘ಪ್ರಭು ನಿನ್ನನು ಆಶೀರ್ವದಿಸಲಿ’ ಎಂಬ ಮಾತನ್ನಾಗಲಿ I ‘ಪ್ರಭು ನಾಮದಲಿ ನಿನಗೆ ಶುಭ’ ಎಂದಾಗಲಿ I ಹಾದುಹೋಗುವ ಜನಜಂಗುಳಿ ಅವರಿಗೆ ಹೇಳದಿರಲಿ” II


“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಈ ದಿನ ನಾನು ಬಂದ ಕಾರ್ಯವನ್ನು ಕೈಗೂಡಿಸಿ, ನನ್ನೊಡೆಯ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಪ್ರಾರ್ಥಸುತ್ತೇನೆ.


ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರಕೂಡದು; ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದೂ ನನಗೆ ಸರ್ವೇಶ್ವರನ ಅಪ್ಪಣೆಯಾಗಿದೆ,” ಎಂದು ಉತ್ತರಕೊಟ್ಟನು.


“ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು!


ನಾನು ಬಂದಾಗ, ಅವನು ಮಾಡುತ್ತಿರುವುದನ್ನೆಲ್ಲಾ ಹೊರಗೆಡಹುತ್ತೇನೆ. ನಮ್ಮ ವಿರುದ್ಧ ಅವನು ಅಪಪ್ರಚಾರ ಮಾಡುತ್ತಾ ಹರಟೆಕೊಚ್ಚುತ್ತಿದ್ದಾನೆ. ಸಾಲದೆಂದು, ಸಹೋದರರನ್ನು ಸ್ವಾಗತಿಸಲು ನಿರಾಕರಿಸುತ್ತಿದ್ದಾನೆ. ಹಾಗೆ ಸ್ವಾಗತಿಸಬಯಸುವವರನ್ನು ನಿರ್ಬಂಧಿಸಿ ಸಭೆಯಿಂದ ಬಹಿಷ್ಕರಿಸುತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು