Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:2 - ಕನ್ನಡ ಸತ್ಯವೇದವು C.L. Bible (BSI)

2 ನಮ್ಮಲ್ಲಿ ನೆಲೆಗೊಂಡಿರುವ ಹಾಗೂ ನಮ್ಮಲ್ಲಿ ಶಾಶ್ವತವಾಗಿರುವ ಸತ್ಯದ ಪ್ರಯುಕ್ತ ನಾನು ಮತ್ತು ಸತ್ಯವನ್ನು ಅರಿತಿರುವ ಎಲ್ಲರು ನಿಮ್ಮಲ್ಲಿ ಪ್ರೀತಿಯನ್ನಿಟ್ಟಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲ ನಮ್ಮೊಂದಿಗಿರುವಂಥ ಸತ್ಯದ ನಿಮಿತ್ತ, ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ. ನಾನು ಮಾತ್ರವಲ್ಲದೆ, ಸತ್ಯವನ್ನು ಪ್ರೀತಿಸುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಮ್ಮಲ್ಲಿ ನೆಲೆಗೊಂಡಿರುವ ಸತ್ಯದ ನಿಮಿತ್ತ ನಾವು ನಿಮ್ಮನ್ನು ಪ್ರೀತಿಸುತ್ತೇವೆ. ಈ ಸತ್ಯವು ನಮ್ಮಲ್ಲಿ ಸದಾಕಾಲ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಸತ್ಯದಲ್ಲಿ ಪ್ರೀತಿಸುವ ದೇವರಿಂದ ಆಯ್ಕೆಯಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್ ಖರೆ ಅಮ್ಚ್ಯಾ ಮದ್ದಿ ರ್‍ಹಾತಾ, ಅನಿ ಕನ್ನಾಬಿ ಅಮ್ಚ್ಯಾ ವಾಂಗ್ಡಾಚ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:2
11 ತಿಳಿವುಗಳ ಹೋಲಿಕೆ  

ಲೋಕವೂ ಅದರ ವ್ಯಾಮೋಹವೂ ಗತಿಸಿಹೋಗುವುವು. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಚಿರಂಜೀವಿಯಾಗಿ ಬಾಳುವನು.


ಬರೆದಿಹೆನು ಮಕ್ಕಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಪರಮ ಪಿತನನ್ನು. ಬರೆದಿಹೆನು‍ ಶಕ್ತಿಯುತ ಯುವಜನರಿರಾ, ಇದನ್ನು ಏಕೆನೆ, ನೆಲೆಗೊಳಿಸಿರುವಿರಿ ನಿಮ್ಮಲ್ಲಿ ದೈವವಾಕ್ಯವನ್ನು ಮಾತ್ರವಲ್ಲ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ.


ಈ ವಿಷಯಗಳೆಲ್ಲಾ ನಿಮಗೆ ತಿಳಿದೇ ಇವೆ; ನೀವು ಅಂಗೀಕರಿಸಿದ ಸತ್ಯದಲ್ಲಿ ಸ್ಥಿರವಾಗಿಯೂ ಇದ್ದೀರಿ. ಆದರೂ ಇವುಗಳನ್ನು ಪದೇ ಪದೇ ನಿಮ್ಮ ಜ್ಞಾಪಕಕ್ಕೆ ತರಲು ಅಪೇಕ್ಷಿಸುತ್ತೇನೆ.


ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.


ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ,


“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.


ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು