Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:5 - ಕನ್ನಡ ಸತ್ಯವೇದವು C.L. Bible (BSI)

5 ಶ್ರೀಮಾತೆಯೇ, ನಾನು ಮಾಡುವ ಬಿನ್ನಹವಿದು: ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಮೊತ್ತಮೊದಲಿನಿಂದಲೂ ನಮಗೆ ಕೊಡಲಾದ ಆಜ್ಞೆಯೇ ಹೊರತು ಹೊಸದೇನೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ, ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿಮಗೆ ಬರೆಯುವವನಾಗಿ; ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿಮಗೆ ಬರೆಯದೆ ಮೊದಲಿನಿಂದಲೂ ನಮಗೆ ಬಂದ ಆಜ್ಞೆಯನ್ನು ಬರೆಯುವವನಾಗಿ - ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರೋಣ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪ್ರಿಯ ಅಮ್ಮನವರೇ, ಈಗ ನಾನು ನಿಮ್ಮನ್ನು ಕೇಳಿಕೊಳ್ಳುವುದೇನೆಂದರೆ, ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಹೊಸ ಆಜ್ಞೆಯಾಗಿರದೆ ಮೊದಲಿನಿಂದಲೂ ಇದ್ದ ಆಜ್ಞೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿನಗೆ ಬರೆಯುವವನಾಗಿ ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಪ್ರಿತಿಚ್ಯಾ ಬಾಯಿ, ಮಿಯಾ ತುಕಾ ಇಚಾರ್ತಾ ಅಮಿ ಸಗ್ಳೆ ಜಾನಾ ಎಕಾಮೆಕಾಚೊ ಪ್ರೆಮ್ ಕರುಚೆ. ಹ್ಯೊ ಮಿಯಾ ಲಿವ್ತಲೊ ಅದ್ದಿಚ್ಯಾನುಚ್ ಅಮ್ಕಾ ದಿಲ್ಲೊ ಹುಕುಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:5
17 ತಿಳಿವುಗಳ ಹೋಲಿಕೆ  

ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ ಮೊತ್ತಮೊದಲಿನಿಂದಲೂ ನೀವು ಕೇಳಿದ ಸಂದೇಶ.


ಸಹೋದರ ಪ್ರೇಮವನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ನೀವು ಒಬ್ಬರನ್ನೊಬ್ಬರು ಪ್ರೀತಿಸುವುದನ್ನು ದೇವರಿಂದಲೇ ಕಲಿತಿದ್ದೀರಿ.


ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.


ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.


ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?


ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆಂದರೆ, ಪ್ರೀತಿ ಅಸಂಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ.


ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.


ಸೋದರ ಪ್ರೀತಿಯಲ್ಲಿ ನೆಲೆಯಾಗಿ ನಿಲ್ಲಿರಿ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ.


ದೇವರಿಂದ ಆಯ್ಕೆಯಾದ ಶ್ರೀಮಾತೆಗೂ ಆಕೆಯ ಮಕ್ಕಳಿಗೂ - ಸಭಾಹಿರಿಯನಾದ ನಾನು ಬರೆಯುವ ಪತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು