Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:6 - ಕನ್ನಡ ಸತ್ಯವೇದವು C.L. Bible (BSI)

6 ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಪ್ರೀತಿ. ಪ್ರೀತಿಮಾರ್ಗದಲ್ಲಿ ನಡೆಯಬೇಕೆಂಬುದೇ ನೀವು ಮೊತ್ತಮೊದಲಿನಿಂದಲೂ ಕೇಳಿರುವ ಆಜ್ಞೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದೇವರ ಆಜ್ಞೆಗಳನ್ನು ಅನುಸರಿಸಿ, ವಿಧೇಯರಾಗಿ ನಡೆಯುವುದೇ ಪ್ರೀತಿಯಾಗಿದೆ. ಪ್ರೀತಿಯಲ್ಲಿ ನಡೆಯಬೇಕೆಂಬುದೇ, ನೀವು ಮೊದಲಿನಿಂದಲೂ ಕೇಳಿದ ಆಜ್ಞೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಪ್ರೀತಿ; ಪ್ರೀತಿಯಲ್ಲಿ ನಡೆಯಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು ಆಜ್ಞಾಪಿಸಿದ ಮಾರ್ಗದಲ್ಲಿ ಜೀವಿಸುವುದೇ ಪ್ರೀತಿ. ನೀವು ಪ್ರೀತಿಯಿಂದ ಬಾಳಬೇಕೆಂಬುದೇ ದೇವರ ಆಜ್ಞೆ. ನೀವು ಆರಂಭದಿಂದಲೂ ಈ ಆಜ್ಞೆಯನ್ನು ಕೇಳಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರ ಆಜ್ಞೆಗಳನ್ನು ಅನುಸರಿಸಿ ಬಾಳುವುದೇ ಪ್ರೀತಿ. ಪ್ರೀತಿಯಲ್ಲಿ ಬಾಳಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಿಯಾ ಬೊಲ್ತಲೊ ಹ್ಯೊ ಪ್ರೆಮ್ ಮಟ್ಲ್ಯಾರ್, ದೆವಾಚ್ಯಾ ಹುಕುಮಾಕ್ನಿ ಖಾಲ್ತಿ ಹೊವ್ನ್ ಚಲ್ತಲೆ.ಪ್ರೆಮಾನಿ ಸಗ್ಳೆ ಜನಾ ಜಿವನ್ ಕರುಚೆ ಮನ್ತಲೊ ಅದ್ದಿಚ್ಯಾನುಚ್ ಆಯ್ಕಲ್ಲೊ ಹುಕುಮಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:6
14 ತಿಳಿವುಗಳ ಹೋಲಿಕೆ  

ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ.


ಮೊದಲಿನಿಂದಲೂ ನೀವು ಯಾವ ಸಂದೇಶವನ್ನು ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಸಲಿ. ಮೊದಲಿನಿಂದಲೂ ನೀವು ಕೇಳಿದ ಸಂದೇಶ ನಿಮ್ಮಲ್ಲಿ ನೆಲೆಸಿದರೆ ಪುತ್ರನಲ್ಲಿಯೂ ಪಿತನಲ್ಲಿಯೂ ನೀವು ನೆಲೆಸುತ್ತೀರಿ.


ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”


ನಾವು ಏನನ್ನು ಬೇಡಿಕೊಂಡರೂ ನಮ್ಮ ವಿಜ್ಞಾಪನೆಗೆ ದೇವರು ಕಿವಿಗೊಡುತ್ತಾರೆ ಎಂಬುದು ನಮಗೆ ತಿಳಿದಿದ್ದರೆ ನಾವು ಬೇಡಿದುದೆಲ್ಲವೂ ನಮಗೆ ಲಭಿಸಿದಂತೆಯೇ ಎಂಬುದೂ ನಮಗೆ ತಿಳಿದಿದೆ.


ಶ್ರೀಮಾತೆಯೇ, ನಾನು ಮಾಡುವ ಬಿನ್ನಹವಿದು: ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಮೊತ್ತಮೊದಲಿನಿಂದಲೂ ನಮಗೆ ಕೊಡಲಾದ ಆಜ್ಞೆಯೇ ಹೊರತು ಹೊಸದೇನೂ ಅಲ್ಲ.


ಸರ್ವೇಶ್ವರ ಹೇಳುವ ಮಾರ್ಗದಲ್ಲೇ ನೀವು ನಡೆದು, ಅವರಲ್ಲಿಯೇ ಭಯಭಕ್ತಿ ಯಳ್ಳವರಾಗಿ, ಅವರ ಆಜ್ಞೆಗಳನ್ನೇ ಅನುಸರಿಸಿ, ಅವರಿಗೇ ವಿಧೇಯರಾಗಿ, ಅವರ ಸೇವೇಮಾಡುತ್ತಾ ಅವರನ್ನೇ ಹೊಂದಿಕೊಂಡಿರಬೇಕು.


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ಪ್ರಿಯರೇ, ನಾನು ನಿಮಗೆ ಬರೆಯುತ್ತಿರುವುದು ಹೊಸ ಆಜ್ಞೆಯೇನೂ ಅಲ್ಲ, ಮೊದಲಿನಿಂದಲೂ ನೀವು ಪಡೆದಿರುವ ಹಳೆಯ ಆಜ್ಞೆಯೇ. ಈ ಆಜ್ಞೆಯೇ ನೀವು ಈಗಾಗಲೇ ಕೇಳಿರುವ ಸಂದೇಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು