Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಯೋಹಾನನು 1:9 - ಕನ್ನಡ ಸತ್ಯವೇದವು C.L. Bible (BSI)

9 ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಮೀರಿ ಹೋಗುವವನಲ್ಲಿ ದೇವರಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರವಿುಸಿ ಮುಂದಕ್ಕೆ ಹೋಗುವವನಿಗೆ ದೇವರ ಅನ್ಯೋನ್ಯತೆಯಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರಮಿಸಿ ಮುಂದಕ್ಕೆ ಹೋಗುವವನು ದೇವರನ್ನು ಹೊಂದಿಲ್ಲ. ಆದರೆ ಆ ಉಪದೇಶದಲ್ಲಿ ನೆಲೆಗೊಂಡಿರುವವನು ತಂದೆಯನ್ನೂ ಮಗನನ್ನೂ ಹೊಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳದೆ ಅದನ್ನು ಅತಿಕ್ರಮಿಸುವವರಿಗೆ ದೇವರಿಲ್ಲ. ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳುವವರಿಗೆ ತಂದೆ ಮತ್ತು ಪುತ್ರ ಇಬ್ಬರೂಇರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಕ್ರಿಸ್ತಾಚ್ಯಾ ಶಿಕಾಪಾತ್ನಿ ಇಬೆರ್‍ಹಾಯ್ನಸ್ತಾನಾ ತೆಕಾ ದಾಟುನ್ ಫಿಡೆ ಜಾತಲ್ಯಾಂಚ್ಯಾ ವಾಂಗ್ಡಾ ದೆವ್ ರ್‍ಹಾಯ್ನಾ, ಖರೆ ತ್ಯಾ ಶಿಕಾಪಾತ್ನಿ ಇಬೆರ್‍ಹಾತಲ್ಯಾ ಮಾನ್ಸಾ ವಾಂಗ್ಡಾ ಬಾಬಾ ಅನಿ ಲೆಕ್ ದೊಗೆಬಿ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಯೋಹಾನನು 1:9
15 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.


ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.


ಬದಲಿಗೆ, ತಾವು ಒಳ್ಳೆಯವರು ಮತ್ತು ಸ್ವಾಮಿನಿಷ್ಠೆಯುಳ್ಳವರು ಎಂದು ಹೆಸರು ಪಡೆಯಲಿ. ಜಗದ್ರಕ್ಷಕರಾದ ದೇವರ ಉಪದೇಶಕ್ಕೆ ಎಲ್ಲಾ ವಿಧದಲ್ಲೂ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಬೋಧಿಸು.


ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.


ಆದುದರಿಂದ ಕ್ರಿಸ್ತಯೇಸುವನ್ನು ಕುರಿತಾದ ಪ್ರಾಥಮಿಕ ಪಾಠಗಳಲ್ಲೇ ನಿಂತುಬಿಡದೆ ಪ್ರೌಢ ವಿಷಯಗಳತ್ತ ಸಾಗೋಣ.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.


ನಾನು ನಿಮ್ಮ ಸಭೆಗೆ ಚಿಕ್ಕ ಪತ್ರವೊಂದನ್ನು ಬರೆದಿದ್ದೇನೆ. ಆದರೆ ಅಲ್ಲಿಯ ಸಭೆಗೆ ಮುಖಂಡನಾಗ ಬಯಸುತ್ತಿರುವ ದಿಯೊತ್ರೇಫನು ನನ್ನ ಮಾತನ್ನು ಗೌರವಿಸುತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು