Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:16 - ಕನ್ನಡ ಸತ್ಯವೇದವು C.L. Bible (BSI)

16 ದಾವೀದನು, “ಈ ರಕ್ತಾಪರಾಧ ನಿನ್ನ ತಲೆಯ ಮೇಲೆಯೇ ಇರಲಿ; ‘ಸರ್ವೇಶ್ವರನ ಅಭಿಷಿಕ್ತನನ್ನು ಕೊಂದುಹಾಕಿದೆ’ ಎಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿಹೇಳಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದಾವೀದನು - ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ; ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿದ್ದರಿಂದ, ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:16
24 ತಿಳಿವುಗಳ ಹೋಲಿಕೆ  

ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.


ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?


“ತಂದೆಗಾಗಲಿ ತಾಯಿಗಾಗಲಿ ಶಾಪಹಾಕುವವರಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳಿಗೆ ಶಾಪ ಹಾಕುವುದರಿಂದ ಅವರಿಗೆ ಸಂಭವಿಸುವ ಮರಣಶಿಕ್ಷೆಗೆ ಅವರೇ ಕಾರಣ.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ನಿನ್ನ ಮಾತಿನ ಬಲೆಗೆ ಸಿಕ್ಕಿಹಾಕಿಕೊಂಡಿರುವೆ; ನಿನ್ನ ವಾಗ್ದಾನವು ನಿನ್ನನ್ನು ಸೆರೆಹಿಡಿದಿದೆ.


ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ, ಅದೇ ದಿವಸ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು,” ಎಂದು ಹೇಳಿದನು.


ಅವರು ಕೆಳಕ್ಕೆ ಬಿದ್ದುಬಿಟ್ಟರೆ ಬದುಕಲಾರರೆಂದು ನೆನೆಸಿ ನಾನು ಅವರನ್ನು ಸಮೀಪಿಸಿ ಕೊಂದುಹಾಕಿದೆ. ಅವರ ತಲೆಯ ಮೇಲಿನ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ನನ್ನ ಒಡೆಯರಾದ ತಮ್ಮ ಬಳಿಗೆ ತಂದಿದ್ದೇನೆ,” ಎಂದನು.


ಆದರೆ ದಾವೀದನು, “ಅವನನ್ನು ಕೊಲ್ಲಬೇಡ; ಸರ್ವೇಶ್ವರನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನೂ ನಿರಪರಾಧಿ ಎಂದು ಎಣಿಸಲ್ಪಡನು,” ಎಂದನು.


ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು ಆಗುವರು. ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈಮಾಡಿದ್ದಾದರೆ ಆ ರಕ್ತಾಪರಾಧ ನಮ್ಮ ತಲೆಯ ಮೇಲಿರುವುದು.


ಇಂತಿರಲು ನಾನು ನಿಮಗೆ ಸಾರಿ ಹೇಳುವುದೇನೆಂದರೆ - “ನಿಮ್ಮಲ್ಲಿ ಯಾರಾದರು ನಾಶವಾದರೆ, ಅದಕ್ಕೆ ನಾನು ಹೊಣೆಯಲ್ಲ.


ಏಕೆಂದರೆ ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದ.


ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿ ತೆಗೆದು, ಲಾಭಕ್ಕೆ ಹಣಕೊಟ್ಟು, ಹಿಂಸಾಚಾರಿಯೂ, ರಕ್ತಸುರಿಸುವವನೂ ಆಗಿದ್ದರೆ, ಜೀವಿಸುವನೇ? ಖಂಡಿತ ಜೀವಿಸನು; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ನಾನಲ್ಲ, ನಿನ್ನ ಬಾಯೇ, ನಿನ್ನನು ಅಪರಾಧಿಯನ್ನಾಗಿಸುತ್ತಿದೆ ನಿನ್ನ ತುಟಿಗಳೇ ನಿನಗೆ ವಿರುದ್ಧ ಸಾಕ್ಷಿಕೊಡುತ್ತಿವೆ.


ಹೀಗೆ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೂ ಬರುವುದಕ್ಕೆ ಮಾರ್ಗವಾಯಿತು .


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿರಪರಾಧಿಗೆ ಮರಣ ಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆ ಆದರೆ ಆ ರಕ್ತದೋಷ ನಿಮ್ಮದಾಗಿಯೇ ಇರುವುದು.


ಭೂತಪ್ರೇತಗಳನ್ನು ವಿಚಾರಿಸುವವರು ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಯಾವ ಸ್ತ್ರೀಯಾದರೂ ಪ್ರಾಣಿಯಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನೂ ಪ್ರಾಣಿಯನ್ನು ಕೊಲ್ಲಿಸಬೇಕು; ಅವಳಿಗೂ ಅದಕ್ಕೂ ಮರಣವೇ ವಿಧಿ. ಆ ಮರಣ ಶಿಕ್ಷೆಗೆ ತಾವೇ ಕಾರಣರು.


ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.


ಅವರು ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನಿಗೆ ಕೊಟ್ಟುಬಿಟ್ಟರು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ,” ಎಂದನು.


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು