Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:19 - ಕನ್ನಡ ಸತ್ಯವೇದವು C.L. Bible (BSI)

19 ಮಣ್ಣುಪಾಲಾಗಿದೆ, ಓ ಇಸ್ರಯೇಲರೇ, ನಿಮ್ಮ ವೈಭವ ಆ ಗುಡ್ಡಗಳ ಮೇಲೆ ನೀವು ಮಡಿದದ್ದು ಹೇಗೆ, ಓ ಯುದ್ಧವೀರರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಇಸ್ರಾಯೇಲರೇ, ನಿಮ್ಮ ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣು ಪಾಲಾಗಿ ಹೋಯಿತು. ಅಯ್ಯೋ ಪರಾಕ್ರಮಶಾಲಿಗಳೇ, ನೀವು ಹೇಗೆ ಹತರಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇಸ್ರಾಯೇಲ್ಯರೇ, ನಿಮ್ಮ ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣುಪಾಲಾಗಿ ಹೋಯಿತು. ಅಯ್ಯೋ, ಪರಾಕ್ರಮಶಾಲಿಗಳೇ, ಹೇಗೆ ಹತರಾದಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಇಸ್ರೇಲೇ, ನಿನ್ನ ಸೌಂದರ್ಯವೆಲ್ಲ ಉನ್ನತಸ್ಥಳಗಳಲ್ಲಿ ನಾಶವಾಯಿತು. ಬಲಶಾಲಿಗಳಾದ ಜನರೆಲ್ಲ ಬಿದ್ದು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಇಸ್ರಾಯೇಲೇ, ನಿನ್ನ ಮಹಿಮೆಯು ನಿನ್ನ ಬೆಟ್ಟಗಳ ಮೇಲೆ ಕೊಲೆಯಾಗಿ ಬಿದ್ದಿದೆ. ಪರಾಕ್ರಮಶಾಲಿಗಳು ಹೇಗೆ ಬಿದ್ದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:19
11 ತಿಳಿವುಗಳ ಹೋಲಿಕೆ  

ಅಯ್ಯೋ, ಆ ಪರಾಕ್ರಮಶಾಲಿಗಳು ಹೇಗೆ ಹತರಾದರು! ಯುದ್ಧಾಯುಧಗಳು ಹೇಗೆ ಹಾಳಾದವು!


ಯುದ್ಧವೀರರೇ, ಹೇಗೆ ಮಡಿದುಹೋದಿರಿ ರಣರಂಗದಲಿ? ಯೋನಾತಾನನು ಹತನಾಗಿ ಬಿದ್ದಿಹನಲ್ಲಾ ಬೆಟ್ಟಗುಡ್ಡದಲಿ!


ನಮ್ಮ ಕಿರೀಟ ಬಿದ್ದುಹೋಗಿದೆ ತಲೆಮೇಲಿಂದ ಈ ಕೇಡೆಲ್ಲಾ ಬಂದೊದಗಿದೆ ನಮ್ಮ ಪಾಪದ ನಿಮಿತ್ತ.


ಬಳಿಕ ಎಲ್ಲ ರಾಷ್ಟ್ರಗಳೊಂದಿಗೆ ನಾನು ಮಾಡಿಕೊಂಡಿದ್ದ ಒಡಂಬಡಿಕೆಯನ್ನು ರದ್ದುಗೊಳಿಸಬೇಕೆಂದು ‘ಕೃಪೆ’ ಎಂಬ ಕೋಲನ್ನು ಮುರಿದುಬಿಟ್ಟೆ.


ಆಗ ನಾನು ಕೊಯ್ಗುರಿಗಳನ್ನು ವ್ಯಾಪಾರ ಮಾಡುವವರಿಗೋಸ್ಕರ ಆ ಮಂದೆಗೆ ಕುರಿಗಾಹಿ ಆದೆ. ಎರಡು ಕುರಿಗೋಲುಗಳನ್ನು ಕೈಗೆ ತೆಗೆದುಕೊಂಡು ಒಂದಕ್ಕೆ ‘ಕೃಪೆ’ ಎಂದೂ ಮತ್ತೊಂದಕ್ಕೆ ‘ಐಕ್ಯ’ ಎಂದೂ ಹೆಸರಿಟ್ಟು ಆ ಮಂದೆಯನ್ನು ಮೇಯಿಸಿದೆ.


ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !


ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.


ಸೌಮ್ಯರು, ಅತಿಪ್ರಿಯರು, ಆ ಸೌಲ-ಯೋನಾತಾನರು ಬಾಳಿನಲು, ಸಾವಿನಲು ಬಿಟ್ಟಗಲದವರು. ಹದ್ದಿಗಿಂತ ಅಧಿಕ ವೇಗ ಅವರದು ಸಿಂಹಕ್ಕಿಂತ ಹೆಚ್ಚಿನ ಶಕ್ತಿ ಅವರದು!


ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತು ಬಿದ್ದಿರುವುದನ್ನು ಕಂಡರು.


ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು