Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:20 - ಕನ್ನಡ ಸತ್ಯವೇದವು C.L. Bible (BSI)

20 ಸಾರಬೇಡಿ ಈ ಸುದ್ದಿಯನು ‘ಗತ್’ ಊರಿನಲಿ ಘೋಷಿಸಬೇಡಿ ಅಷ್ಕೆಲೋನಿನ ಬೀದಿಗಳಲಿ. ಏಕೆನೆ, ಉಲ್ಲಾಸಿಸಿಯಾರು ಆ ಫಿಲಿಷ್ಟಿಯ ಮಹಿಳೆಯರು; ಜಯಘೋಷ ಮಾಡಿಯಾರು ಸುನ್ನತಿಯಿಲ್ಲದವರಾ ಸ್ತ್ರೀಯರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ; ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು; ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಿಸಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಗತ್‌ನಲ್ಲಿ ಈ ಸುದ್ದಿಯನ್ನು ಹೇಳದಿರು. ಅಷ್ಕೆಲೋನಿನ ಬೀದಿಗಳಲ್ಲಿ ಇದನ್ನು ಸಾರದಿರು. ಫಿಲಿಷ್ಟಿಯರ ಪಟ್ಟಣಗಳೆಲ್ಲಾ ಸಂತೋಷಪಡುವವು. ಆ ವಿದೇಶಿಯರ ಹೆಣ್ಣುಮಕ್ಕಳು ಉಲ್ಲಾಸಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 “ಗತ್ ಊರಿನಲ್ಲಿ ಇದನ್ನು ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಪುತ್ರಿಯರು ಸಂತೋಷಪಡಬಾರದು; ಸುನ್ನತಿ ಇಲ್ಲದವರ ಪುತ್ರಿಯರು ಉತ್ಸಾಹಪಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:20
15 ತಿಳಿವುಗಳ ಹೋಲಿಕೆ  

ಈ ವಿಷಯವನ್ನು ಗಾತ್ ಊರಿನವರಿಗೆ ತಿಳಿಸಬೇಡಿ; ಅಳಲೂಬೇಡಿ. ಬೇತ್ಲೆಯಪ್ರದಲ್ಲಿ, ಧೂಳಿನಲ್ಲಿ ಬಿದ್ದು ಹೊರಳಾಡಿ.


ದಾವೀದನು ಫಿಲಿಷ್ಟಿಯರನ್ನು ಸಂಹರಿಸಿ ಸರ್ವಸೈನಿಕರೊಡನೆ ಹಿಂದಿರುಗಿ ಬರುವಾಗ ಇಸ್ರಯೇಲರ ಎಲ್ಲ ಪಟ್ಟಣಗಳಿಂದ ಮಹಿಳೆಯರು ಹೊರಗೆ ಬಂದು, ತಾಳ ತಮ್ಮಟೆಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸ ಸೌಲನನ್ನು ಎದುರುಗೊಂಡರು.


ಯೆಪ್ತಾಹನು ಮಿಚ್ಫೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿ ಬಡಿಯುತ್ತಾ ನಾಟ್ಯವಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆ ಅವನ ಒಬ್ಬಳೇ ಮಗಳು. ಆಕೆಯ ಹೊರತು ಅವನಿಗೆ ಬೇರೆ ಗಂಡುಹೆಣ್ಣು ಮಕ್ಕಳೇ ಇರಲಿಲ್ಲ.


ನೀನು ಗರ್ವಪಡುತ್ತಿದ್ದ ಆ ಕಾಲದಲ್ಲಿ ಸೊದೋಮೆಂಬ ನಿನ್ನ ತಂಗಿಯ ಹೆಸರು ನಿನ್ನ ಬಾಯಲ್ಲಿ ಬರಲೇ ಇಲ್ಲ;


“ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆ; ನಿನ್ನನ್ನು ದ್ವೇಷಿಸಿ, ನಿನ್ನ ಕೆಟ್ಟನಡತೆಗೆ ಅಸಹ್ಯಪಡುವ ಪಿಲಿಷ್ಟಿಯ ಕುವರಿಯರ ಕೈಗೆ ನಿನ್ನನ್ನು ಒಪ್ಪಿಸಿದೆ.


ಆದುದರಿಂದ ಸೌಲನು ಭಯಭೀತನಾಗಿ ತನ್ನ ಆಯುಧವಾಹಕನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು ಅಪಕೀರ್ತಿಯನ್ನುಂಟುಮಾಡಬಹುದು,” ಎಂದು ಹೇಳಿದನು. ವಾಹಕನು ಹೆದರಿ, “ಒಲ್ಲೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.


ನಿಮ್ಮ ಸೇವಕನಾದ ನನ್ನಿಂದ ಆ ಸಿಂಹಕ್ಕೂ ಕರಡಿಗೂ ಆದ ಗತಿಯೇ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು; ಏಕೆಂದರೆ ಜೀವಸ್ವರೂಪರಾದ ದೇವರ ಸೈನ್ಯವನ್ನು ನಿಂದಿಸುತ್ತಿದ್ದಾನೆ.


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಸರ್ವೇಶ್ವರನ ಆತ್ಮ ಫಕ್ಕನೆ ಅವನ ಮೇಲೆ ಬಂದಿತು. ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲಿದುಕೊಂಡು ಒಗಟನ್ನು ಬಿಡಿಸಿದವರಿಗೆ ತಂದುಕೊಟ್ಟನು. ಬಳಿಕ ಕೋಪಗೊಂಡು ತನ್ನ ತಂದೆಯ ಮನೆಗೆ ಹೋದನು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.


ಫಿಲಿಷ್ಟಿಯರು ಸರ್ವೇಶ್ವರನಿಗೆ ಪ್ರಾಯಶ್ಚಿತಾರ್ಥವಾಗಿ ಸಮರ್ಪಿಸಿದ ಚಿನ್ನದ ಗಡ್ಡೆಗಳ ಸಂಸ್ಥಾನಾನುಸಾರವಾದ ಪಟ್ಟಿ ಇದು: ಅಷ್ಡೋದ್, ಗಾಜಾ, ಪರವಾಗಿ ಒಂದು, ಅಷ್ಕೆಲೋನ್ ಪರವಾಗಿ ಒಂದು, ಗತ್ ಪರವಾಗಿ ಒಂದು ಮತ್ತು ಎಕ್ರೋನ್ ಪರವಾಗಿ ಒಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು