Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:21 - ಕನ್ನಡ ಸತ್ಯವೇದವು C.L. Bible (BSI)

21 ಮಳೆಯಾಗಲಿ, ಮಂಜಾಗಲಿ ಬೀಳದಿರಲಿ ಆ ಗಿಲ್ಬೋವ ಗುಡ್ಡಗಳ ಮೇಲೆ ಅದರ ಮೇಲಿನ ಹೊಲಗಳು ಬೆಳೆಕೊಡದಿರಲಿ ನೈವೇದ್ಯಕೆ. ಏಕೆನೆ ಅಲ್ಲಿ ಬಿದ್ದಿವೆ ಯುದ್ಧವೀರರ ಕತ್ತಿಗುರಾಣಿ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆ ಸೌಲನ ಗುರಾಣಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಗಿಲ್ಬೋವಗುಡ್ಡಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ; ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಗಿಲ್ಬೋವದ ಪರ್ವತಗಳಲ್ಲಿ ಮಂಜೂ ಮಳೆಯೂ ಸುರಿಯದಿರಲಿ. ಆ ಹೊಲಗಳಿಂದ ಕಾಣಿಕೆಯ ವಸ್ತುಗಳೂ ಬಾರದಿರಲಿ. ಅಲ್ಲಿನ ಶಕ್ತಿಸಂಪನ್ನರ ಗುರಾಣಿಗಳೆಲ್ಲ ತುಕ್ಕುಹಿಡಿದಿವೆ. ಸೌಲನ ಗುರಾಣಿಯು ಎಣ್ಣೆಯಿಲ್ಲದೆ ಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಬೀಳದೆ ಇರಲಿ, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಯೂ ಅವಮಾನಗೊಂಡು ಬಿದ್ದವು. ಸೌಲನ ಗುರಾಣಿಯೂ ಎಣ್ಣೆಯಿಂದ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:21
14 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡಿದರು. ಇಸ್ರಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.


ಔತಣ ಸಿದ್ಧವಾಗಿದೆ, ಚಾಪೆ ಹಾಸಿದ್ದಾರೆ. ಅತಿಥಿಗಳು ಭೋಜನ ಮಾಡುತ್ತಾ ಕುಡಿಯುತ್ತಾ ಇದ್ದಾರೆ. ಇದೋ, ಇದ್ದಕ್ಕಿದ್ದಂತೆ ಕೂಗೊಂದು ಕೇಳಿಬರುತ್ತಿದೆ : “ಪ್ರಭುಗಳೇ, ಎದ್ದೇಳಿ, ಗುರಾಣಿಗಳನ್ನು ಅಣಿಗೊಳಿಸಿರಿ.”


ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.


ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.


ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ. ಆ ಸ್ವಾಮಿಯ ಪರಿಚಾರಕರಾದ ಯಾಜಕರು ದುಃಖತಪ್ತರಾಗಿದ್ದಾರೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ : “ಆ ವೃಕ್ಷ ಪಾತಾಳಕ್ಕೆ ಇಳಿದುಹೋದ ದಿನದಲ್ಲಿ ನಾನು ದುಃಖದ ಚಿಹ್ನೆಗಳನ್ನು ಏರ್ಪಡಿಸಿದೆ; ಅದರ ವಿಯೋಗಕ್ಕಾಗಿ ನಾನು ಮಹಾನದಿಯನ್ನು ಮರೆಮಾಡಿ, ನದಿಯ ಶಾಖೆಗಳನ್ನು ತಡೆದುಬಿಟ್ಟೆ; ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆ. ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಮೂರ್ಛೆಹೋದವು.


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


ಕಾಳಗದ ಮರುದಿನ ಫಿಲಿಷ್ಟಿಯರು ಸತ್ತವರ ಒಡವೆವಸ್ತುಗಳನ್ನು ಸುಲಿಗೆಮಾಡಲು ಹೋದಾಗ, ಗಿಲ್ಬೋವ ಬೆಟ್ಟದಲ್ಲಿ ಸೌಲ ಹಾಗೂ ಅವನ ಮಕ್ಕಳು ಸತ್ತುಬಿದ್ದಿರುವುದನ್ನು ಕಂಡರು.


ಗಿಲ್ಬೋವ ಬೆಟ್ಟದಲ್ಲಿ ಇಸ್ರಯೇಲ್ ಅವರಿಗೂ ಫಿಲಿಷ್ಟಿಯರಿಗೂ ಘೋರಯುದ್ಧ ನಡೆಯಿತು. ಅನೇಕ ಜನ ಇಸ್ರಯೇಲರು ಯುದ್ಧದಲ್ಲಿ ಹತರಾದರು. ಅರಸ ಸೌಲನೂ ಅವನ ಮಕ್ಕಳೂ ಇನ್ನುಳಿದವರೂ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿದರು.


‘ಶಾಪಹಾಕಿರಿ ಮೇರೋಜ್ ಊರಿಗೆ, ಅದರ ನಿವಾಸಿಗಳಿಗೆ ಬರಲಿಲ್ಲ ಅವರು ಯುದ್ಧವೀರರ ಜೊತೆಗೆ ಸರ್ವೇಶ್ವರನ ಸಹಾಯಕ್ಕೆ. ಶಪಿಸಿರಿ ಅವರನ್ನು’ ಎಂದು ಕರೆಗೊಟ್ಟನು ಸರ್ವೇಶ್ವರನ ದೂತನೆ.


ನಿನ್ನ ಕೊರಳು ದಾವೀದನ ನುಣುಪಾದ ಗೋಪುರ ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳ ಸರ.


ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತು ಬಿದ್ದಿರುವುದನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು