Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:24 - ಕನ್ನಡ ಸತ್ಯವೇದವು C.L. Bible (BSI)

24 ಸೌಲನಿಗಾಗಿ ಅತ್ತು ಪ್ರಲಾಪಿಸಿರಿ ಇಸ್ರಯೇಲಿನ ಮಹಿಳೆಯರೇ, ಉಲ್ಲಾಸಕರ ರಕ್ತಾಂಬರಗಳ ಉಡಿಸಿದವನು ಅವನೇ ಅಲ್ಲವೆ ನಿಮಗೆ? ಅವುಗಳ ಮೇಲೆ ಸುವರ್ಣಾಂಬರಗಳ ತೊಡಿಸಿದವನು ಆತನೇ ಅಲ್ಲವೆ ನಿಮಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ, ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ, ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ; ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಇಸ್ರೇಲಿನ ಕುವರಿಯರೇ, ಸೌಲನಿಗಾಗಿ ಗೋಳಾಡಿರಿ! ಸೌಲನು ನಿಮಗೆ ಕೆಂಪು ಬಟ್ಟೆಗಳನ್ನು ಉಡಿಸಿದನು. ಸೌಲನು ಸುವರ್ಣಾಭರಣಗಳನ್ನು ಬಟ್ಟೆಗಳ ಮೇಲೆ ತೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಇಸ್ರಾಯೇಲಿನ ಪುತ್ರಿಯರೇ, ಸೌಲನಿಗೋಸ್ಕರ ಅಳಿರಿ. ನಿಮಗೆ ರಕ್ತಾಂಬರವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ. ನಿಮ್ಮ ಉಡುಗೆಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:24
10 ತಿಳಿವುಗಳ ಹೋಲಿಕೆ  

ಒಬ್ಬ ಯುವತಿ ತನ್ನ ಆಭರಣಗಳನ್ನು, ಒಬ್ಬ ವಧು ತನ್ನ ಡಾಬನ್ನು ಮರೆಯುವುದುಂಟೆ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.


‘ನಿಶ್ಚಯವಾಗಿ ಸಿಕ್ಕಿರಬೇಕು ಅವರಿಗೆ ಕೊಳ್ಳೆ ಹಂಚಿಕೊಳ್ಳುತ್ತಿರಬೇಕು ಅದನು ತಮ್ಮತಮ್ಮಲ್ಲೆ ಪ್ರತಿಯೊಬ್ಬ ಸೈನಿಕನಿಗೆ ಒಬ್ಬೊಬ್ಬ ದಾಸಿಯರು ಸೀಸೆರನಿಗೊ, ಬಣ್ಣಬಣ್ಣವಾದ ಬಟ್ಟೆಬರೆಗಳು ವಿಚಿತ್ರ ಕಸೂತಿಹಾಕಿದ ಒಂದೆರಡು ವಸ್ತ್ರಗಳು, ಕಂಠಮಾಲೆಗಳು’.


ಚಳಿಗಾಲದಲ್ಲಿ ಮನೆಯವರಿಗಾಗಿ ಆಕೆ ಚಿಂತಿಸಬೇಕಿಲ್ಲ; ಏಕೆಂದರೆ ಎಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ.


ಓಡಿದರು, ದಂಡೊಡನೆ ಓಡಿದರು ದೊರೆಗಳು I ದೋಚಿಕೊಂಡರು ಕೊಳ್ಳೆಯನು ಗೃಹಿಣಿಯರು II


ಸೌಮ್ಯರು, ಅತಿಪ್ರಿಯರು, ಆ ಸೌಲ-ಯೋನಾತಾನರು ಬಾಳಿನಲು, ಸಾವಿನಲು ಬಿಟ್ಟಗಲದವರು. ಹದ್ದಿಗಿಂತ ಅಧಿಕ ವೇಗ ಅವರದು ಸಿಂಹಕ್ಕಿಂತ ಹೆಚ್ಚಿನ ಶಕ್ತಿ ಅವರದು!


ಯುದ್ಧವೀರರೇ, ಹೇಗೆ ಮಡಿದುಹೋದಿರಿ ರಣರಂಗದಲಿ? ಯೋನಾತಾನನು ಹತನಾಗಿ ಬಿದ್ದಿಹನಲ್ಲಾ ಬೆಟ್ಟಗುಡ್ಡದಲಿ!


ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು