Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:27 - ಕನ್ನಡ ಸತ್ಯವೇದವು C.L. Bible (BSI)

27 ಅಯ್ಯೋ, ಆ ಪರಾಕ್ರಮಶಾಲಿಗಳು ಹೇಗೆ ಹತರಾದರು! ಯುದ್ಧಾಯುಧಗಳು ಹೇಗೆ ಹಾಳಾದವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅಯ್ಯೋ ಪರಾಕ್ರಮಶಾಲಿಗಳು ಹೇಗೆ ಹತರಾದರು, ಯುದ್ಧದ ಆಯುಧಗಳು ಹೇಗೆ ಹಾಳಾದವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅಯ್ಯೋ, ಪರಾಕ್ರಮಶಾಲಿಗಳು ಹೇಗೆ ಹತರಾದರು! ಯುದ್ಧಾಯುಧಗಳು ಹೇಗೆ ಹಾಳಾದವು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಲಶಾಲಿಗಳಾದ ಜನರೆಲ್ಲ ಯುದ್ಧದಲ್ಲಿ ಮಡಿದರು. ಅವರ ಯುದ್ಧಾಯುಧಗಳೆಲ್ಲ ಹಾಳಾಗಿಹೋದವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಹೇಗೆ ಪರಾಕ್ರಮಶಾಲಿಗಳು ಯುದ್ಧದಲ್ಲಿ ಬಿದ್ದಿದ್ದಾರೆ. ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:27
7 ತಿಳಿವುಗಳ ಹೋಲಿಕೆ  

ಯುದ್ಧವೀರರೇ, ಹೇಗೆ ಮಡಿದುಹೋದಿರಿ ರಣರಂಗದಲಿ? ಯೋನಾತಾನನು ಹತನಾಗಿ ಬಿದ್ದಿಹನಲ್ಲಾ ಬೆಟ್ಟಗುಡ್ಡದಲಿ!


ಮಣ್ಣುಪಾಲಾಗಿದೆ, ಓ ಇಸ್ರಯೇಲರೇ, ನಿಮ್ಮ ವೈಭವ ಆ ಗುಡ್ಡಗಳ ಮೇಲೆ ನೀವು ಮಡಿದದ್ದು ಹೇಗೆ, ಓ ಯುದ್ಧವೀರರೇ?


ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II


ಎಲೀಷನು ಮಾರಕರೋಗದಿಂದ ನರಳುತ್ತಿದ್ದನು. ಇಸ್ರಯೇಲರ ಅರಸ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥಾರಥಾಶ್ವಬಲಗಳಾಗಿ ಇದ್ದವರೇ,” ಎಂದು ಗೋಳಿಡುತ್ತಾ ಅಧೋಮುಖನಾಗಿ ಬಿದ್ದು ಅತ್ತು ಪ್ರಲಾಪಿಸಿದನು.


ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥರಥಾಶ್ವಗಳಾಗಿದ್ದವರೇ,” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದಮೇಲೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.


ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು