Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 1:4 - ಕನ್ನಡ ಸತ್ಯವೇದವು C.L. Bible (BSI)

4 ಆಗ ದಾವೀದನು, “ಏನಾಯಿತೆಂದು ತಿಳಿಸು,” ಎನ್ನಲು ಆ ವ್ಯಕ್ತಿ, “ಇಸ್ರಯೇಲರು ರಣರಂಗದಿಂದ ಓಡಿಹೋದರು; ಅನೇಕರು ಮಡಿದರು. ಸೌಲನೂ ಅವನ ಮಗ ಯೋನಾತಾನನೂ ಮರಣಹೊಂದಿದರು,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ದಾವೀದನು, “ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು” ಅನ್ನಲು ಆ ಮನುಷ್ಯನು, “ಇಸ್ರಾಯೇಲರು ರಣರಂಗದಿಂದ ಓಡಿಹೋದರು. ಅನೇಕರು ಗಾಯಗೊಂಡು ಸತ್ತುಹೋದರು. ಸೌಲನೂ ಅವನ ಮಗನಾದ ಯೋನಾತಾನನೂ ಮರಣಹೊಂದಿದರು” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ದಾವೀದನು - ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು ಅನ್ನಲು ಆ ಮನುಷ್ಯನು - ಇಸ್ರಾಯೇಲ್ಯರು ರಣರಂಗದಿಂದ ಓಡಿಹೋದರು. ಅನೇಕರು ಮಡಿದರು. ಸೌಲನೂ ಅವನ ಮಗನಾದ ಯೋನಾತಾನನೂ ಮೃತಿ ಹೊಂದಿದರು ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಾವೀದನು ಅವನನ್ನು, “ಯುದ್ಧದಲ್ಲಿ ಯಾರು ಗೆದ್ದರು, ನನಗೆ ದಯವಿಟ್ಟು ತಿಳಿಸು?” ಎಂದು ಕೇಳಿದನು. ಅವನು, “ಇಸ್ರೇಲ್ ಜನರು ಯುದ್ಧರಂಗದಿಂದ ಓಡಿಹೋದರು. ಯುದ್ಧದಲ್ಲಿ ಅನೇಕರು ಸತ್ತುಹೋದರು. ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಾವೀದನು ಅವನಿಗೆ, “ನಡೆದ ವರ್ತಮಾನವೇನು? ನೀನು ನನಗೆ ತಿಳಿಸು,” ಎಂದನು. ಅವನು, “ಜನರು ಯುದ್ಧದಿಂದ ಓಡಿಹೋದರು. ಜನರಲ್ಲಿ ಅನೇಕರು ಸತ್ತರು. ಸೌಲನೂ, ಅವನ ಮಗ ಯೋನಾತಾನನೂ ಸತ್ತರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 1:4
6 ತಿಳಿವುಗಳ ಹೋಲಿಕೆ  

ಆ ವ್ಯಕ್ತಿ ಏಲಿಗೆ, “ನಾನು ರಣರಂಗದಲ್ಲಿ ಇದ್ದವನು; ಈಹೊತ್ತೇ ಅಲ್ಲಿಂದ ಓಡಿಬಂದೆ,” ಎನ್ನಲು ಏಲಿ, “ಮಗು, ಏನು ಸುದ್ದಿ?” ಎಂದು ಕೇಳಿದನು.


ದಾವೀದನು ಅವನನ್ನು ನೋಡಿ, “ನೀನು ಎಲ್ಲಿಂದ ಬಂದೆ?” ಎಂದು ಕೇಳಿದನು. ಅವನು, “ನಾನು ಇಸ್ರಯೇಲರ ಪಾಳೆಯದಿಂದ ತಪ್ಪಿಸಿಕೊಂಡು ಬಂದೆ,” ಎಂದು ಉತ್ತರಕೊಟ್ಟನು.


ದಾವೀದನು ಈ ವರ್ತಮಾನ ತಂದ ಯುವಕನಿಗೆ, “ಸೌಲನೂ ಅವನ ಮಗ ಯೋನಾತಾನನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು?” ಎಂದು ಪ್ರಶ್ನಿಸಿದನು.


“ಸೌಲನ ಮರಣವಾರ್ತೆಯನ್ನು ತಿಳಿಸುವುದು ಶುಭಕರವೆಂದು ಭಾವಿಸಿ ಬಂದು ನನಗೆ ಹೇಳಿದ ಅವನನ್ನು ಹಿಡಿದು ನಾನು ದಂಡಿಸಿದೆ. ಅವನಿಗೆ ಚಿಕ್ಲಗಿನಲ್ಲಿ ಮರಣ ದಂಡನೆಯೆಂಬ ಬಹುಮಾನವನ್ನು ಸಲ್ಲಿಸಿದೆ, ಎಂಬುದು ನಿಮಗೆ ಗೊತ್ತಿಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು