2 ಸಮುಯೇಲ 10:2 - ಕನ್ನಡ ಸತ್ಯವೇದವು C.L. Bible (BSI)2 ದಾವೀದನು, “ನಾಹಾಷನು ನನಗೆ ಸ್ನೇಹತೋರಿಸಿದ್ದರಿಂದ ನಾನೂ ಅವನ ಮಗ ಹಾನೂನನಿಗೆ ಸ್ನೇಹ ತೋರಿಸುವೆನು,” ಎಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕಾಗಿ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ, ನಾನು ಅವನ ಮಗ ಹಾನೂನನಿಗೂ ದಯೆತೋರಿಸುವೆನು” ಎಂದುಕೊಂಡು, ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ತನ್ನ ಪ್ರತಿನಿಧಿಗಳನ್ನು ಕಳುಹಿಸಿದನು. ದಾವೀದನ ಪ್ರತಿನಿಧಿಗಳು ಅಮ್ಮೋನಿಯರ ದೇಶಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದಾವೀದನು - ನಾಹಾಷನು ನನಗೆ ದಯೆತೋರಿಸಿದ್ದರಿಂದ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವದಕ್ಕೋಸ್ಕರ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದನು. ಆದ್ದರಿಂದ ಅವನ ಮಗನಿಗೆ ನಾನು ದಯೆತೋರಿಸುವೆನು” ಎಂದು ಹೇಳಿದನು. ಆದ್ದರಿಂದ ತಂದೆಯ ಸಾವಿನಿಂದ ಶೋಕತಪ್ತನಾಗಿರುವ ಹಾನೂನನನ್ನು ಸಂತೈಸಲು ದಾವೀದನು ತನ್ನ ಅಧಿಕಾರಿಗಳನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು. ಅಧ್ಯಾಯವನ್ನು ನೋಡಿ |