2 ಸಮುಯೇಲ 11:11 - ಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷ, ಇಸ್ರಯೇಲರು ಹಾಗು ಯೆಹೂದ್ಯರು ಗುಡಾರಗಳಲ್ಲೇ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬಯಲಿನಲ್ಲೇ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ, ನಾನು ನನ್ನ ಮನೆಗೆ ಹೋಗಿ ಉಂಡು, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿಮ್ಮಾಣೆ, ನಿಮ್ಮ ಜೀವದ ಆಣೆ, ನಾನು ಇಂಥದನ್ನು ಎಂದಿಗೂ ಮಾಡಲಾರೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷವೂ, ಇಸ್ರಾಯೇಲ್ಯರೂ, ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ, ಅವನ ಸೇವಕರೂ ಬಯಲಿನಲ್ಲಿ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಾಗ ನಾನು ಮಾತ್ರ ನನ್ನ ಮನೆಗೆ ಹೋಗಿ ಊಟಮಾಡಿ, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದ್ದನ್ನು ಮಾಡುವುದೇ ಇಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅದಕ್ಕೆ ಊರೀಯನು - ಒಡಂಬಡಿಕೆಯ ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬೈಲಿನಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ ನಾನು ನನ್ನ ಮನೆಗೆ ಹೋಗಿ ಉಂಡು ಕುಡಿದು ಹೆಂಡತಿಯೊಡನೆ ಮಲಗಿಕೊಳ್ಳುವದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದನ್ನು ಮಾಡುವದೇ ಇಲ್ಲ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಊರೀಯನು ದಾವೀದನಿಗೆ, “ಪವಿತ್ರ ಪೆಟ್ಟಿಗೆಯೂ ಇಸ್ರೇಲಿನ ಮತ್ತು ಯೆಹೂದದ ಸೈನಿಕರೂ ಗುಡಾರಗಳಲ್ಲಿ ನೆಲೆಸಿದ್ದಾರೆ. ನನ್ನ ಒಡೆಯನಾದ ಯೋವಾಬನು ಮತ್ತು ನನ್ನ ರಾಜನ ಸೇವಕರು ಹೊಲದಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಆದ್ದರಿಂದ ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೂ ಪತ್ನಿಯ ಜೊತೆಯಲ್ಲಿ ಮಲಗುವುದಕ್ಕೂ ನಾನು ಮನೆಗೆ ಹೋಗುವುದು ಸರಿಯಲ್ಲ. ನಿನ್ನಾಣೆ, ನಿನ್ನ ಜೀವದಾಣೆ, ನಾನು ಇಂಥದನ್ನು ಮಾಡುವುದೇ ಇಲ್ಲ.” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಊರೀಯನು ದಾವೀದನಿಗೆ, “ಮಂಜೂಷವೂ, ಇಸ್ರಾಯೇಲಿನವರೂ, ಯೆಹೂದದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ; ನನ್ನ ಒಡೆಯನಾದ ಯೋವಾಬನೂ, ನನ್ನ ಒಡೆಯನ ಸೇವಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವುದಕ್ಕೂ, ಕುಡಿಯುವುದಕ್ಕೂ, ನನ್ನ ಹೆಂಡತಿಯ ಸಂಗಡ ಮಲಗುವುದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |