Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:15 - ಕನ್ನಡ ಸತ್ಯವೇದವು C.L. Bible (BSI)

15 ಅದರಲ್ಲಿ ಹೀಗೆ ಬರೆಯಲಾಗಿತ್ತು : “ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರಯುದ್ಧ ನಡೆಯುತ್ತಿರುವ ಕಡೆ, ಮುಂಭಾಗದಲ್ಲೇ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದರಲ್ಲಿ, “ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂಭಾಗದಲ್ಲಿ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿರಿ” ಎಂಬುದಾಗಿ ಬರೆದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದರಲ್ಲಿದ್ದದ್ದೇನಂದರೆ - ಊರೀಯನು ಗಾಯಹೊಂದಿ ಸಾಯುವಂತೆ ಅವನನ್ನು ಘೋರಯುದ್ಧ ನಡೆಯುತ್ತಿರುವ ಕಡೆಗೆ ಮುಂಭಾಗದಲ್ಲಿ ನಿಲ್ಲಿಸಿ ನೀವು ಹಿಂದಕ್ಕೆ ಸರಿದುಕೊಳ್ಳಿರಿ ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದಾವೀದನು ಆ ಪತ್ರದಲ್ಲಿ, “ಯುದ್ಧವು ಹೆಚ್ಚು ಭೀಕರವಾಗಿ ನಡೆಯುವ ಕಡೆ ಊರೀಯನನ್ನು ಮುಂದಿನ ಸಾಲಿನಲ್ಲಿ ನಿಲ್ಲಿಸು. ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಡಿ. ಅವನು ಯುದ್ಧದಲ್ಲಿ ಕೊಲ್ಲಲ್ಪಡಲಿ” ಎಂದು ಬರೆದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆ ಪತ್ರದಲ್ಲಿ, “ಊರೀಯನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂದೆ ನಿಲ್ಲಿಸಿ, ಅವನು ಗಾಯಗೊಂಡು ಸಾಯುವಂತೆ, ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿದುಕೊಳ್ಳಿರಿ,” ಎಂದು ಬರೆದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:15
12 ತಿಳಿವುಗಳ ಹೋಲಿಕೆ  

ಹೀಗಿರಲು, ನೀನು ಸರ್ವೇಶ್ವರನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದೇಕೆ? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ.


ಒಂದು ದಿನ ಸೌಲನು, “ಇವನು ನನ್ನ ಕೈಯಿಂದ ಸಾಯಬಾರದು; ಫಿಲಿಷ್ಟಿಯರ ಕೈಯಿಂದಲೇ ಸಾಯಲಿ,” ಎಂದು ಒಂದು ಉಪಾಯ ಹೂಡಿದನು. ದಾವೀದನಿಗೆ, “ನೀನು ನನ್ನ ವೀರನಾಗಿ ಹೋಗಿ ಸರ್ವೇಶ್ವರನ ಯುದ್ಧಗಳನ್ನು ನಡೆಸು; ನಾನು ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಮದುವೆಮಾಡಿಕೊಡುತ್ತೇನೆ,” ಎಂದನು.


ಸರ್ವೇಶ್ವರನನ್ನು ಸ್ತುತಿಸಿರಿ, ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವರ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ.


ತಪ್ಪಿಸೆನ್ನನು ಸ್ವಾಮಿ ದೇವಾ, ರಕ್ತಾಪರಾಧದಿಂದ I ನಿನ್ನ ಸತ್ಯಸಂಧತೆಯನು ಸಾರುವೆ ಮುಕ್ತಕಂಠದಿಂದ II


ಹೌದು ದೇವಾ, ನಿನಗೆ ದ್ರೋಹವೆಸಗಿದೆ I ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ II ನಿನ್ನ ನಿರ್ಣಯವು ನ್ಯಾಯಯುತ I ನೀ ನೀಡುವ ತೀರ್ಪು ನಿರ್ಲಿಪ್ತ II


ಆ ಊರಿನ ಜನರು ಹೊರಗೆ ಬಂದು ಯೋವಾಬನ ಸೈನ್ಯದೊಡನೆ ಹೋರಾಡಿದರು. ದಾವೀದನ ಸೇವಕರಲ್ಲಿ ಕೆಲವರು ಸತ್ತರು; ಹಿತ್ತಿಯನಾದ ಊರೀಯನೂ ಮಡಿದನು.


ಆಗ ಅವನು, “ನೀವು ಹೋಗಿ ದಾವೀದನಿಗೆ, ‘ಅರಸರು ಯಾವ ದಕ್ಷಿಣೆಯನ್ನೂ ಬಯಸುವುದಿಲ್ಲ; ಆದರೆ ಅವರ ಶತ್ರುಗಳಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರುಮಂದಿಯ ಮುಂದೊಗಲನ್ನು ತಂದುಕೊಟ್ಟರೆ ಸಾಕೆನ್ನುತ್ತಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು. (ದಾವೀದನನ್ನು ಫಿಲಿಷ್ಟಿಯರ ಕೈಯಿಂದಲೇ ಕೊಲ್ಲಿಸಬೇಕೆಂಬುದು ಅವನ ಉದ್ದೇಶವಾಗಿತ್ತು.)


“ಇವಳನ್ನು ಅವನಿಗೆ ಕೊಡುತ್ತೇನೆ. ಈಕೆ ಅವನಿಗೆ ಉರುಲಾಗಿರಬಲ್ಲಳು; ಫಿಲಿಷ್ಟಿಯರ ಕೈಗೆ ಇವನು ಸಿಕ್ಕಿಬೀಳುವಂತೆ ಮಾಡಬಲ್ಲಳು,” ಎಂದುಕೊಂಡನು. ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೇ ಸಂದರ್ಭ ಬಂದೊದಗಿದೆ,” ಎಂದು ಹೇಳಿದನು.


ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶತ್ರುಸೈನಿಕರು ಎಲ್ಲಿ ಪ್ರಬಲರಾಗಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿಗೆ ಕಳುಹಿಸಿದನು.


ಜೆರುಸಲೇಮನ್ನೂ ಇವನ ಸಂತಾನವನ್ನೂ ಉಳಿಸಿದರು.


ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು