Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:16 - ಕನ್ನಡ ಸತ್ಯವೇದವು C.L. Bible (BSI)

16 ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶತ್ರುಸೈನಿಕರು ಎಲ್ಲಿ ಪ್ರಬಲರಾಗಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶೂರರಾದ ಶತ್ರುಸೈನಿಕರು ಎಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೋವಾಬನು ಪಟ್ಟಣಕ್ಕೆ ಮುತ್ತಿಗೆಹಾಕುವಾಗ ಶೂರರಾದ ಶತ್ರುಸೈನಿಕರೆಲ್ಲಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಮ್ಮೋನಿಯರಲ್ಲಿ ಅತ್ಯಂತ ಧೈರ್ಯಶಾಲಿಗಳು ಆ ನಗರದಲ್ಲಿ ಎಲ್ಲಿರುವರೆಂಬುದನ್ನು ಯೋವಾಬನು ಗುರುತಿಸಿದನು. ಆ ಸ್ಥಳಕ್ಕೆ ಕಳುಹಿಸಲು ಊರೀಯನನ್ನು ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹಾಗೆಯೇ ಯೋವಾಬನು ಆ ಪಟ್ಟಣವನ್ನು ಮುತ್ತಿಗೆ ಹಾಕುವಾಗ, ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳಿದುಕೊಂಡು, ಅಲ್ಲಿ ಊರೀಯನನ್ನು ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:16
13 ತಿಳಿವುಗಳ ಹೋಲಿಕೆ  

ಅದಕ್ಕೆ ಪ್ರತ್ಯುತ್ತರವಾಗಿ ಪೇತ್ರ ಮತ್ತು ಉಳಿದ ಪ್ರೇಷಿತರು, “ನಾವು ವಿಧೇಯರಾಗಬೇಕಾದದ್ದು ದೇವರಿಗೆ, ಮಾನವರಿಗಲ್ಲ.


ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ.


ಸುಳ್ಳುವರದಿಗೆ ಕಿವಿಗೊಡುವ ರಾಜಸೇವಕರೆಲ್ಲರು ದುರುಳರು.


ಆಗ ಯೇಹುವು ಇನ್ನೊಂದು ಪತ್ರದ ಮೂಲಕ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರವಾಗಿ ನಡೆದುಕೊಳ್ಳಲು ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ, ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಬನ್ನಿರಿ,” ಎಂದು ಆಜ್ಞಾಪಿಸಿದನು. ಎಪ್ಪತ್ತುಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.


“ಚೆರೂಯಳ ಮಗ ಯೋವಾಬನು ನನಗೆ ಮಾಡಿರುವುದನ್ನು ನೀನು ಬಲ್ಲೆ; ಅವನು ಇಬ್ಬರು ಇಸ್ರಯೇಲ್ ಸೇನಾಪತಿಗಳನ್ನು ಅಂದರೆ, ನೇರನ ಮಗ ಅಬ್ನೇರನನ್ನೂಯೆತೆರನ ಮಗ ಅಮಾಸನನ್ನೂ ಕೊಂದುಹಾಕಿದನು. ಯುದ್ಧಕಾಲದಲ್ಲಿಯೋ ಎಂಬಂತೆ ಸಮಾಧಾನಕಾಲದಲ್ಲಿಯೂ ರಕ್ತಸುರಿಸಿ ಆ ಕಲೆಯನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.


ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದವರಾರೆಂದು ನಿಮಗೆ ಗೊತ್ತಿಲ್ಲವೇ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿಹಾಕಿ ಅವನನ್ನು ಕೊಂದಳಲ್ಲವೇ? ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ‘ಹಿತ್ತಿಯನಾದ ನಿಮ್ಮ ಸೇವಕ ಊರೀಯನೂ ಮೃತನಾದನೆಂದು ಹೇಳು,’ ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತಸಂಭಾಷಣೆಗಾಗಿಯೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ, ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದುಕೊಂದನು.


ಅದರಲ್ಲಿ ಹೀಗೆ ಬರೆಯಲಾಗಿತ್ತು : “ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರಯುದ್ಧ ನಡೆಯುತ್ತಿರುವ ಕಡೆ, ಮುಂಭಾಗದಲ್ಲೇ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿ.”


ಆ ಊರಿನ ಜನರು ಹೊರಗೆ ಬಂದು ಯೋವಾಬನ ಸೈನ್ಯದೊಡನೆ ಹೋರಾಡಿದರು. ದಾವೀದನ ಸೇವಕರಲ್ಲಿ ಕೆಲವರು ಸತ್ತರು; ಹಿತ್ತಿಯನಾದ ಊರೀಯನೂ ಮಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು